More

  ಮೋದಿ ಮತ್ತೆ ಪ್ರಧಾನಿಯಾಗುವುದು ಅಸಾಧ್ಯ

  ದಾವಣಗೆರೆ : ಬಿಜೆಪಿ ಆಡಳಿತ ವಿರೋಧಿ ಅಲೆಯಲ್ಲಿ ಕೊಚ್ಚಿ ಹೋಗಲಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
   ಹರಿಹರದ ಗಾಂಧಿ ಮೈದಾನದಲ್ಲಿ ಭಾನುವಾರ ‘ಪ್ರಜಾಧ್ವನಿ-2’ ಸಮಾವೇಶದಲ್ಲಿ ಮಾತನಾಡಿ, ಬಿಜೆಪಿ ದೇಶದಲ್ಲಿ 100 ಜನ ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ. ಸೋಲುತ್ತೇವೆ ಎಂಬ ಹತಾಶೆ ಮೋದಿ ಅವರ ಮಾತುಗಳಲ್ಲಿ ವ್ಯಕ್ತವಾಗುತ್ತದೆ ಎಂದು ತಿಳಿಸಿದರು.
   ‘ದಲಿತರು, ಹಿಂದುಳಿದವರ ಮೀಸಲಾತಿಯನ್ನು ತೆಗೆದು ಕಾಂಗ್ರೆಸ್ ಮುಸ್ಲಿಮರಿಗೆ ನೀಡಿದೆ’ ಎಂದು ಮೋದಿ ದೊಡ್ಡ ಸುಳ್ಳು ಹೇಳಿದ್ದಾರೆ. ಮುಸ್ಲಿಮರ ವಿರುದ್ಧ ದಲಿತರು, ಹಿಂದುಳಿದವರನ್ನು ಎತ್ತಿಕಟ್ಟುವ ಪ್ರಯತ್ನ ಮಾಡಿದ್ದಾರೆ. ಅವರು ಸಂವಿಧಾನವನ್ನು ಓದಿದ್ದಾರೋ ಇಲ್ಲವೋ ಗೊತ್ತಿಲ್ಲ ಎಂದರು.
   ಬಿಜೆಪಿ ಹಾಗೂ ಆರ್‌ಎಸ್‌ಎಸ್ ಮೀಸಲಾತಿಯನ್ನು ಬೆಂಬಲಿಸಲಿಲ್ಲ. ಆದ್ದರಿಂದ ಆ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ. ಮಂಡಲ್ ವರದಿಯನ್ನು, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರು, ದಲಿತರು, ಹಿಂದುಳಿದವರಿಗೆ ಮೀಸಲಾತಿ ನೀಡುವುದನ್ನು ಬಿಜೆಪಿಯವರು ವಿರೋಧಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಮೀಸಲಾತಿ ನೀಡಿಕೆಯನ್ನು ಎತ್ತಿಹಿಡಿಯಿತು. ಚುನಾವಣೆ ಬಂದಾಗ ಮಾತ್ರ ಮೋದಿ ಅವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುತ್ತಾರೆ ಎಂದು ಟೀಕಿಸಿದರು.
   ಮಾಜಿ ಸಚಿವ ಆರ್. ಶಂಕರ್, ಮಾಜಿ ಎಂಎಲ್ಸಿ ಮೋಹನ್ ಕೊಂಡಜ್ಜಿ, ಮುಖಂಡರಾದ ವಾಗೀಶ ಸ್ವಾಮಿ, ನಿಖಿಲ್ ಕೊಂಡಜ್ಜಿ ಇದ್ದರು. ರೇವಣಸಿದ್ದಪ್ಪ ಸ್ವಾಗತಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts