ವಿದ್ಯಾರ್ಥಿಗಳಿಗೆ ಬಯೋ ಮೆಟ್ರಿಕ್ ಹಾಜರಾತಿ

blank

ದಾವಣಗೆರೆ : ಜಿಲ್ಲೆಯ ಎಲ್ಲ ಮೆಟ್ರಿಕ್ ಪೂರ್ವ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ಬಯೋ ಮೆಟ್ರಿಕ್ ಹಾಜರಾತಿ ಅಳವಡಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಸುರೇಶ್ ಬಿ. ಇಟ್ನಾಳ್ ಸೂಚಿಸಿದರು.   ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹಾಸ್ಟೆಲ್ ವಾರ್ಡನ್‌ಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.    ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಸ್ಟೆಲ್ಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಹಾಜರಾತಿ ಪರಿಶೀಲಿಸಲು ತಿಳಿಸಿದರು.  ಶಿಕ್ಷಣಾಧಿಕಾರಿಗಳು ಸೋಮವಾರದಿಂದ ವಿದ್ಯಾರ್ಥಿ ವೇತನಗಳ ಕುರಿತು ಮಾಹಿತಿ ನೀಡುವ ಆಂದೋಲನ ಕೈಗೊಳ್ಳಬೇಕು. ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಸೌಲಭ್ಯ ಸಿಗುವಂತಾಗಬೇಕು ಎಂದರು.   ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡಬೇಕು. ಹಾಸ್ಟೆಲ್ ವಾತಾವರಣ ಸ್ವಚ್ಛವಾಗಿ ಇರಿಸಿಕೊಳ್ಳಬೇಕು. ಆಹಾರ, ಶುಚಿತ್ವದಲ್ಲಿ  ಲೋಪ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ  ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.  ಜಿಪಂ ಉಪ ಕಾರ್ಯದರ್ಶಿ ಕೃಷ್ಣನಾಯ್ಕ, ಸಿಪಿಒ ಮಲ್ಲನಾಯ್ಕ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ. ನಾಗರಾಜ ಇತರರಿದ್ದರು.

Share This Article

2025ರಲ್ಲಿ ಈ 3 ರಾಶಿಯವರಿಗೆ ರಾಜಯೋಗ!? ಅನೇಕ ರೀತಿಯಲ್ಲಿ ಹಣದ ಹರಿವು, ಐಷಾರಾಮಿ ಜೀವನ | Royal Life

Royal Life : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…

ಜೇನುತುಪ್ಪ ಜತೆ ಹುರಿದ ಶುಂಠಿ ತಿಂದರೆ ಗಂಟಲು ನೋವು ಮಾಯಾ! ಹೀಗಿವೆ ಪ್ರಯೋಜನಗಳು

ಬೆಂಗಳೂರು: ಜೇನುತುಪ್ಪ ಮತ್ತು ಶುಂಠಿ ಆರೋಗ್ಯಕ್ಕೆ ತುಂಬಾ ಪ್ರಯೋಜನ ಎಂಬ ವಿಷಯ ಬಹುತೇಕರಿಗೆ ತಿಳಿದಿದೆ. ಈ…

ಸಾಮಾನ್ಯವಾಗಿ ಮಾಡುವ ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ ಎಚ್ಚರ! Relationship Tips

Relationship Tips : ಪರಸ್ಪರ ತಿಳುವಳಿಕೆಯುಳ್ಳ ಉತ್ತಮ ಲೈಂಗಿಕ ಜೀವನವು ಸಂತೋಷದ ದಾಂಪತ್ಯಕ್ಕೆ ಕಾರಣವಾಗುತ್ತದೆ. ಲೈಂಗಿಕ…