ಸಾಧನೆಗೆ ಶಿಸ್ತು, ಸಂಯಮ, ಬದ್ಧತೆಯ ಸೂತ್ರ

ದಾವಣಗೆರೆ :  ಶಿಸ್ತು, ಸಂಯಮ ಮತ್ತು ಬದ್ಧತೆಯಿಂದ ವಿದ್ಯಾರ್ಥಿಗಳು ಏನನ್ನಾದರೂ ಸಾಧಿಸಬಹುದು ಎಂದು ಜಿಎಂಐಟಿ ಕಾಲೇಜಿನ ಪ್ರಾಚಾರ್ಯ ಡಾ. ಎಂ.ಬಿ. ಸಂಜಯ್ ಪಾಂಡೆ ಹೇಳಿದರು.  ನಗರದ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಂಗಳವಾರ, ಹೊಸದಾಗಿ ಪ್ರವೇಶ ಪಡೆದ ಮೊದಲ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ 10 ದಿನಗಳ ಇಂಡಕ್ಷನ್ ಕಾರ್ಯಕ್ರಮದಲ್ಲಿ ಮಾತನಾಡಿದರು.  ಕಲಿಕೆಗೆ ಆರ್ಥಿಕ ಮತ್ತು ಭೌತಿಕ ಹಿನ್ನೆಲೆಯು ವ್ಯತ್ಯಾಸವನ್ನುಂಟು ಮಾಡುವುದಿಲ್ಲ. ಪ್ರತಿ ಸವಾಲು ಮತ್ತು ಅವಕಾಶವನ್ನು ಕುತೂಹಲ ಮತ್ತು ದೃಢ ಸಂಕಲ್ಪದಿಂದ ಸ್ವೀಕರಿಸಿ ಮತ್ತು ನೆನಪಿಡಿ. ನಿಮ್ಮ ಭವಿಷ್ಯವು ಇಲ್ಲಿಂದ ಆರಂಭವಾಗುತ್ತದೆ ಎಂದು ತಿಳಿಸಿದರು.  ಕಾಲೇಜು ನಡೆದು ಬಂದ ಹಾದಿ ಮತ್ತು ಸಾಧನೆಗಳ ಬಗ್ಗೆ ಬೇಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಕೆ.ಎಸ್. ಓಂಕಾರಪ್ಪ ವಿವರಿಸಿದರು. ಪ್ಲೇಸ್ಮೆಂಟ್ ವಿಭಾಗದ ವಿವರಣೆಯನ್ನು ವಿಭಾಗದ ನಿರ್ದೇಶಕ ಟಿ.ಆರ್. ತೇಜಸ್ವಿ ಕಟ್ಟಿಮನಿ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.  ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಬಿ.ಎಂ. ವೀರಪ್ಪ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ನಾವೀನ್ಯತೆ ಮತ್ತು ಸಹಯೋಗದ ಮಹತ್ವವನ್ನು ಒತ್ತಿ ಹೇಳಿದರು.  ಡಾ. ಕೆ.ಎನ್. ಭರತ್ ಸ್ವಾಗತಿಸಿದರು. ಸವಿತಾ ನಿರೂಪಿಸಿದರು. ಡಾ. ಬಿ.ಎಂ. ಸಂತೋಷ್ ವಂದಿಸಿದರು. ಆರ್. ಕಾವ್ಯ ಪ್ರಾರ್ಥಿಸಿದರು. ವಿವಿಧ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಪಾಲಕರು ಪಾಲ್ಗೊಂಡಿದ್ದರು.

Share This Article

Bathing : ನೀರಿನಲ್ಲಿ ಇವುಗಳನ್ನು ಬೆರೆಸಿ ಸ್ನಾನ ಮಾಡಿದ್ರೆ ಸಾಕು ಅದೃಷ್ಟ ಖುಲಾಯಿಸುತ್ತದೆ…

ಬೆಂಗಳೂರು: ಪ್ರತಿದಿನ ಸ್ನಾನ ( Bathing ) ಮಾಡುವ ಅಭ್ಯಾಸವನ್ನು ಸಾಮಾನ್ಯವಾಗಿ ಎಲ್ಲರೂ ರೂಢಿಸಿಕೊಂಡಿರುತ್ತಾರೆ. ನೀವು…

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…