More

  ಕಾರ್ಖಾನೆಗಳ ಪುನಶ್ಚೇತನಕ್ಕೆ ಆಗ್ರಹ

  ದಾವಣಗೆರೆ : ದಾವಣಗೆರೆ ಜಿಲ್ಲೆಯ ಯಲ್ಲಮ್ಮ ಕಾಟನ್ ಮಿಲ್ ಹಾಗೂ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಉಕ್ಕಿನ ಕಾರ್ಖಾನೆಯನ್ನು ಪುನಶ್ಚೇತನ ಗೊಳಿಸಬೇಕು ಎಂದು ರಾಜ್ಯ ರೈತ ಸಂಘದ ಕಾರ್ಯದರ್ಶಿ ಬಲ್ಲೂರು ರವಿಕುಮಾರ್, ಕೇಂದ್ರದ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವ  ಎಚ್.ಡಿ. ಕುಮಾರಸ್ವಾಮಿ ಅವರಿಗೆ ಆಗ್ರಹಿಸಿದ್ದಾರೆ.
   ಎರಡೂ ಕಾರ್ಖಾನೆಗಳು ಬಂದ್ ಆಗಿದ್ದರಿಂದ ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ದಾವಣಗೆರೆಯಲ್ಲಿ ಒಂದು ಕಾಲಕ್ಕೆ ಅತಿ ಹೆಚ್ಚು ಕಾಟನ್ ಮಿಲ್ ಮತ್ತು ಇತರೆ ಮಿಲ್‌ಗಳು ಇದ್ದವು. ಅವುಗಳು ಮುಚ್ಚಿದ ನಂತರ ದುಡಿಯುವ ವರ್ಗಕ್ಕೆ ಉದ್ಯೋಗ ಇಲ್ಲದಂತಾಗಿದೆ ಎಂದು ತಿಳಿಸಿದ್ದಾರೆ.
   ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಸ್ಥಳೀಯ ಬೆಳೆಯ ಸಂಸ್ಕರಣಾ ಕಾರ್ಖಾನೆಗಳನ್ನು ಮಾಡಿದರೆ ಹಳ್ಳಿಯ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಿದಂತಾಗುತ್ತದೆ. ಗ್ರಾಮೀಣ ಪ್ರದೇಶದಿಂದ ನಗರಗಳಿಗೆ ವಲಸೆ ಬರುವುದನ್ನು ತಪ್ಪಿಸಬಹುದು. ಮನೆಯಲ್ಲಿರುವ ವೃದ್ಧರನ್ನು ಸಹ ನೋಡಿಕೊಂಡಂತಾಗುತ್ತದೆ ಎಂದು ತಿಳಿಸಿದ್ದಾರೆ.
   

  See also  ಸದಾಶಿವ ಆಯೋಗ ವರದಿ ಜಾರಿಗೆ ಪಟ್ಟು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts