More

    ವಿದ್ಯಾರ್ಥಿಗಳೊಂದಿಗೆ ಸಾಲುಮರದ ತಿಮ್ಮಕ್ಕ ಸಂವಾದ

    ದಾವಣಗೆರೆ : ಪರಿಸರಪ್ರೇಮಿ ಸಾಲುಮರದ ತಿಮ್ಮಕ್ಕ ಶುಕ್ರವಾರ, ದಾವಣಗೆರೆ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
     ಈ ಸಂದರ್ಭದಲ್ಲಿ ಅವರು ಮಾತನಾಡಿ, ಪರಿಸರವನ್ನು ಉಳಿಸಿ-ಬೆಳೆಸಿ, ಮುಂದಿನ ಪೀಳಿಗೆಯನ್ನು ರಕ್ಷಿಸುವ ಕೆಲಸ ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ. ಮಕ್ಕಳು ತಮ್ಮ ಮನೆಯವರಿಗೂ ಪರಿಸರದ ಜಾಗೃತಿ ಮೂಡಿಸಿ ಜಗತ್ತನ್ನು ಉಳಿಸಬೇಕು ಎಂದು ಸಲಹೆ ನೀಡಿದರು.
     ಪರಿಸರ ರಕ್ಷಣೆಗೆ ಸಮಯ, ಹಣ ಅಥವಾ ಇನ್ನಾವುದೇ ಅವಶ್ಯಕತೆ ಇಲ್ಲ. ಮೇಲು-ಕೀಳು, ಬಡವ-ಶ್ರೀಮಂತ ಎನ್ನುವ ಭೇದವಿಲ್ಲ. ಎಲ್ಲರೂ ಒಗ್ಗೂಡಿ ಈ ಕಾರ್ಯಕ್ಕೆ ಮುಂದಾದರೆ ಆರೋಗ್ಯಕರ ವಾತಾವರಣವನ್ನು ನಿರ್ಮಿಸಲು ಸಾಧ್ಯವಿದೆ ಎಂದು ಹೇಳಿದರು.
     ತಿಮ್ಮಕ್ಕ ಅವರ ಪುತ್ರ ಉಮೇಶ, ಪತ್ರಿಕೋದ್ಯಮ ವಿಭಾಗದ ಅಧ್ಯಕ್ಷ ಡಾ.ಶಿವಕುಮಾರ ಕಣಸೋಗಿ, ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಎಂ.ವಿನಯ್, ಡಾ.ಚಂದ್ರಲೇಖ ಜೆ.ಎಸ್, ಬೋಧನಾ ಸಹಾಯಕ ಎಂ.ವೆಂಕಟೇಶ ಇದ್ದರು. ಇದೇ ವೇಳೆ ತಿಮ್ಮಕ್ಕ ಅವರನ್ನು ಸನ್ಮಾನಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts