More

    ಮಹಿಳೆಯರ ಜೀವನಮಟ್ಟ ಸುಧಾರಣೆಗೆ ನೆರವಾಗಿ

    ದಾವಣಗೆರೆ : ಹಳ್ಳಿಗಾಡಿನ ಬಡ ಹೆಣ್ಣುಮಕ್ಕಳ ಜೀವನಮಟ್ಟ ಸುಧಾರಣೆಗೆ ನೆರವಾಗುವ ತಂತ್ರಜ್ಞಾನವನ್ನು ಇಂಜಿನಿಯರಿಂಗ್ ಕಾಲೇಜುಗಳ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಬೇಕು ಎಂದು ಮಹಾರಾಷ್ಟ್ರದ ಸಾಮಾಜಿಕ ಕಾರ್ಯಕರ್ತೆ ಪದ್ಮಶ್ರೀ ನೀಲಿಮಾ ಮಿಶ್ರಾ ಹೇಳಿದರು.
     ನಗರದ ಜೈನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
     ನಿಮ್ಮ ಕೌಶಲವನ್ನು ಉಪಯೋಗಿಸಿ ಗ್ರಾಮೀಣ ಮಹಿಳೆಯರಿಗೆ ಉಪಯುಕ್ತವಾಗುವ ಸಲಕರಣೆಗಳನ್ನು ಒದಗಿಸಬೇಕು. ಇದರಿಂದ ಅವರು ಸಾಮಾಜಿಕ, ಆರ್ಥಿಕವಾಗಿ ಸಬಲೀಕರಣ ಹೊಂದಲು ಅನುಕೂಲವಾಗುತ್ತದೆ. ದೇಶದಲ್ಲಿ ಶೇ. 50 ರಷ್ಟಿರುವ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಒದಗಿಸಿ ರಾಷ್ಟ್ರದ ಪ್ರಗತಿಗೆ ದಾರಿ ಮಾಡಿಕೊಡಬೇಕು ಎಂದು ತಿಳಿಸಿದರು.
     ಕಾಲೇಜಿನ ಪ್ರಾಚಾರ್ಯ ಡಾ. ಡಿ.ಬಿ. ಗಣೇಶ್ ಮಾತನಾಡಿ, ನೀಲಿಮಾ ಮಿಶ್ರಾ ಮಹಾರಾಷ್ಟ್ರದಲ್ಲಿ ಮಹಿಳಾ ಸಬಲೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಹಳ್ಳಿಗಾಡಿನ ಸಾಮಾನ್ಯ ಕುಟುಂಬದಿಂದ ಬಂದು ಮನಃಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದು, 250 ಗ್ರಾಮಗಳಲ್ಲಿ ಹೆಣ್ಣುಮಕ್ಕಳಿಗೆ ಕರಕುಶಲ ವಸ್ತುಗಳ ತಯಾರಿಕೆಯ ತರಬೇತಿ ನೀಡಿ ಅವರನ್ನು ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಸಿದ ಕೀರ್ತಿ ನೀಲಿಮಾ ಅವರಿಗೆ ಸಲ್ಲುತ್ತದೆ ಎಂದು ಬಣ್ಣಿಸಿದರು.
     ಜೈನ್ ಸಮೂಹ ಸಂಸ್ಥೆಗಳ ಸಲಹೆಗಾರ ಡಾ. ಮಂಜಪ್ಪ ಸಾರಥಿ, ಪ್ರೊ. ಮಧು, ಪ್ರೊ.ಜೆ. ನಟರಾಜ್ ಇದ್ದರು.
     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts