ದಾವಣಗೆರೆ : ಶಾಲಾ ಪಠ್ಯಕ್ರಮದಲ್ಲಿ ಜಾನಪದ ಕಲೆಗಳನ್ನು ಕಡ್ಡಾಯಗೊಳಿಸುವ ಮೂಲಕ ಅಳಿವಿನ ಅಂಚಿಗೆ ಸರಿಯುತ್ತಿರುವ ಜಾನಪದ ಕಲೆಗಳನ್ನು ರಕ್ಷಿಸಲು ಸಾಧ್ಯ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಅಭಿಪ್ರಾಯಪಟ್ಟರು. ಕರ್ನಾಟಕ ಜಾನಪದ ಅಕಾಡೆಮಿ ಮತ್ತು ದಾವಣಗೆರೆ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ವಿಭಾಗದ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ‘ಗೆಜ್ಜೆ ಮಾತಾಡತಾವೆ’ ಮಹಿಳಾ ಕಲಾವಿದರ ಪ್ರದರ್ಶನ ಮತ್ತು ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದರು. ಶೈಕ್ಷಣಿಕ ಸಂಸ್ಥೆಗಳು ಮತ್ತು ಜಾನಪದ ಕಲಾವಿದರ ನಡುವಿನ ಸಹಯೋಗವು ಸಾಂಪ್ರದಾಯಿಕ ಜ್ಞಾನವನ್ನು ದಾಖಲಿಸಲು, ಸಂರಕ್ಷಿಸಲು ಸಹಾಯ ಮಾಡುತ್ತದೆ. ಕಲಾ ಪ್ರದರ್ಶನಗಳಲ್ಲಿ ಯುವಜನರನ್ನು ಒಳಗೊಳ್ಳುವಂತೆ ಮಾಡುವ ಮೂಲಕ ಸಾಂಪ್ರದಾಯಿಕ ಕಲಾ ಪರಂಪರೆಯನ್ನು ಪೋಷಿಸಿ, ಮುಂದಿನ ಪೀಳಿಗೆಗೆ ದಾಟಿಸಬಹುದು ಎಂದು ತಿಳಿಸಿದರು. ಕುಲಪತಿ ಪ್ರೊ.ಬಿ.ಡಿ. ಕುಂಬಾರ ಮಾತನಾಡಿ, ಆಧುನೀಕರಣ ಮತ್ತು ಜಾಗತೀಕರಣವು ಜಾನಪದ ಕಲೆಗಳಿಗೆ ಗಮನಾರ್ಹ ಆತಂಕವನ್ನು ಸೃಷ್ಟಿಸಿದೆ. ಅದಾಗ್ಯೂ ವಿಭಿನ್ನ ರೀತಿಯಲ್ಲಿ ಅವು ರೂಪಾಂತರ ಪಡೆದು ಪುನರುಜ್ಜೀವನಕ್ಕೆ ಅವಕಾಶಗಳನ್ನು ಸೃಷ್ಟಿಸುತ್ತವೆ ಎಂದರು. ಜಾನಪದ ಕಲಾವಿದರಿಗೆ ಹೆಚ್ಚಿನ ಪ್ರೇಕ್ಷಕರನ್ನು ತಲುಪಲು ಡಿಜಿಟಲ್ ಮಾಧ್ಯಮವು ಅವಕಾಶಗಳನ್ನು ನೀಡುತ್ತದೆ. ಯೂಟ್ಯೂಬ್, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಂತಹ ವೇದಿಕೆಗಳು ಕಲಾವಿದರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮತ್ತು ಮನ್ನಣೆ ಪಡೆಯಲು ಅವಕಾಶ ಮಾಡಿಕೊಟ್ಟಿವೆ ಎಂದು ನುಡಿದರು. ಇದಕ್ಕೂ ಮುನ್ನ ವಿವಿಧ ಮಹಿಳಾ ಕಲಾ ತಂಡಗಳು ಜಾನಪದ ಕಲೆಗಳನ್ನು ಪ್ರದರ್ಶಿಸಿದವು. ಸಿಂಡಿಕೇಟ್ ಸದಸ್ಯೆ ಡಾ.ಜಿ.ಕೆ. ಪ್ರೇಮಾ ಅವರು ‘ಮಹಿಳಾ ಜಾನಪದದ ಮುನ್ನೋಟಗಳು’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಹಣಕಾಸು ಅಧಿಕಾರಿ ದ್ಯಾಮನಗೌಡ ಮುದ್ದನಗೌಡ್ರ, ಅಕಾಡೆಮಿ ರಿಜಿಸ್ಟ್ರಾರ್ ಎನ್. ನಮ್ರತಾ, ಸದಸ್ಯರಾದ ಮಲ್ಲಿಕಾರ್ಜುನ ಕೆಂಕೆರೆ, ದೇವಾನಂದ ಇದ್ದರು. ಕನ್ನಡ ಅಧ್ಯಯನ ವಿಭಾಗದ ಅಧ್ಯಕ್ಷ ಡಾ.ವಿ.ಜಯರಾಮಯ್ಯ ಸ್ವಾಗತಿಸಿದರು. ಡಾ.ಭೀಮಾಶಂಕರ ಜೋಶಿ ಕಾರ್ಯಕ್ರಮ ನಿರೂಪಿಸಿದರು, ಮಂಜುಳಾ ವಂದಿಸಿದರು. … (ಕೋಟ್) ಅನೇಕ ಜಾನಪದ ಪ್ರದರ್ಶನ ಕಲೆಗಳು ಮೌಖಿಕ ಸಂಪ್ರದಾಯಗಳ ಮೇಲೆ ಅವಲಂಬಿತವಾಗಿದೆ. ಪುರುಷ ಪ್ರಧಾನ ಕಲೆಗಳಲ್ಲಿ ಮಹಿಳೆಯರಿಗೆ ಆದ್ಯತೆ ಇಲ್ಲದೆ, ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆಯರಲ್ಲಿ ಕಲಾ ಸಂಪ್ರದಾಯ ಬೆಳೆಸಲು ಪ್ರದರ್ಶನ ಮತ್ತು ಕಾರ್ಯಾಗಾರಗಳನ್ನು ಆಯೋಜಿಸಲಾಗಿದೆ. ಜಾನಪದ ಕಲೆಗಳು ಮತ್ತು ಕಲಾ ಪ್ರದರ್ಶನಗಳನ್ನು ವಿಶ್ವವಿದ್ಯಾಲಯಗಳು ಕಾಲೇಜು ಪಠ್ಯಕ್ರಮಗಳಲ್ಲಿ ಕಡ್ಡಾಯ ಕಲಿಕೆಗೆ ಗಮನ ನೀಡಬೇಕಾಗಿದೆ. ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ
ಪಠ್ಯದಲ್ಲಿ ಜಾನಪದ ಕಲಿಕೆ ಕಡ್ಡಾಯವಾಗಲಿ

ಹೋಟೆಲ್ ಸ್ಟೈಲ್ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe
ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…
ಚಿನ್ನದ ಮೇಲೆ ಲೋನ್ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan
Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…
ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips
ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…