ದಾವಣಗೆರೆ : ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆಗೆ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದಲ್ಲಿ ಶನಿವಾರ ಸಂಭ್ರಮದ ಚಾಲನೆ ದೊರೆಯಿತು. ಎರಡು ದಿನಗಳ ಈ ಉತ್ಸವಕ್ಕೆ ನಾಡಿನ ವಿವಿಧೆಡೆಯಿಂದ ಬಂದ ಸಮಾಜದವರು, ಭಕ್ತರು ಸಾಕ್ಷಿಯಾಗಿದ್ದಾರೆ. ಮಠಾಧೀಶರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾಹಿತಿಗಳು, ಚಿಂತಕರು, ಕಲಾವಿದರು ಪಾಲ್ಗೊಂಡಿದ್ದಾರೆ. ಗುರು ಪೀಠದ ಶ್ರೀ ಡಾ. ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ರಾಜನಹಳ್ಳಿಯಿಂದ ಮಠದ ವರೆಗೆ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಡೆಯುವುದರೊಂದಿಗೆ ಜಾತ್ರೆಯ ಮೊದಲ ದಿನದ ಕಾರ್ಯಕ್ರಮಗಳು ಆರಂಭವಾದವು. ಹರಿಹರ ಶಾಸಕ ಬಿ.ಪಿ. ಹರೀಶ್ ಮಹರ್ಷಿ ವಾಲ್ಮೀಕಿ ಧ್ವಜಾರೋಹಣ ನೆರವೇರಿಸಿದರು. ಸರ್ವ ಧರ್ಮ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿಸಲಾಯಿತು. ಹರಿಹರದ ಮಾಜಿ ಶಾಸಕ ಎಸ್. ರಾಮಪ್ಪ ಕೃಷಿ ವಸ್ತು ಪ್ರದರ್ಶನವನ್ನು, ಮತ್ತೊಬ್ಬ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಉದ್ಯೋಗ ಮೇಳವನ್ನು, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಮಹರ್ಷಿ ವಾಲ್ಮೀಕಿ ಜೀವನಾಧಾರಿತ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದರು. … (ಬಾಕ್ಸೃ್) ಮೆಡಿಕಲ್ ಕಾಲೇಜು ಭರವಸೆ ನೌಕರರ ಗೋಷ್ಠಿಯಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಮಾತನಾಡಿ, ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಆವರಣದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಹಕಾರ ನೀಡುವುದಾಗಿ ತಿಳಿಸಿದರು. ಹತ್ತು ಎಕರೆ ಜಾಗವಿದ್ದರೆ ಮೆಡಿಕಲ್ ಕಾಲೇಜು ಸ್ಥಾಪಿಸಲು ಒಪ್ಪಿಗೆ ಸಿಗಲಿದೆ. ಮಠದ ಆವರಣದಲ್ಲಿ 20 ಎಕರೆ ಜಾಗ ಇರುವುದರಿಂದ ಸ್ವಾಮೀಜಿ ಅವರು ಅರ್ಜಿ ಸಲ್ಲಸಿದರೆ, ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು. ಪ್ರಸನ್ನಾನಂದ ಸ್ವಾಮೀಜಿ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸಲು ಆಗ್ರಹಿಸಿ ಹೋರಾಟ ನಡೆಸಿ ಯಶಸ್ಸು ಕಂಡಿದ್ದಾರೆ. ರಾಜನಹಳ್ಳಿ ಮಠ ದೊಡ್ಡದಾಗಿ ಬೆಳೆಯಲಿ ಎಂದು ಹಾರೈಸಿದರು. ಬಡತನ ಅನಿವಾರ್ಯವಲ್ಲ. ಅವಕಾಶಗಳನ್ನು ಉಪಯೋಗಿಸಿಕೊಂಡು ಬೆಳೆಯಬಹುದು. ಬಡತನ ನಿರ್ಮೂಲನೆಗೆ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದ್ದು ಇದುವರೆಗೆ 25 ಕೋಟಿ ಜನರು ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ. ಅಂಗವಿಕಲರಿಗೆ ನೆರವಾಗುವ ಯೋಜನೆಗಳನ್ನು ಕೇಂದ್ರವು ರೂಪಿಸಿದೆ ಎಂದು ತಿಳಿಸಿದರು. ಮಾಜಿ ಸಚಿವ ಬಿ. ಶ್ರೀರಾಮುಲು ಮಾತನಾಡಿ, ವಾಲ್ಮೀಕಿ ಮಠಕ್ಕೆ 28 ವರ್ಷಗಳ ಇತಿಹಾಸವಿದೆ. ಸಮಾಜಕ್ಕೆ ಸರ್ಕಾರಗಳು ಆರ್ಥಿಕ ನೆರವು ನೀಡುತ್ತ ಬಂದಿವೆ. ಮಠ ಶಿಕ್ಷಣಕ್ಕೆ ಆದ್ಯತೆ ನೀಡಿದೆ ಎಂದು ಹೇಳಿದರು. ಸಮಾಜ ಶೈಕ್ಷಣಿಕ, ಆರ್ಥಿಕವಾಗಿ ಬೆಳೆಯಬೇಕಿದ್ದು ನಾವೆಲ್ಲ ಒಗ್ಗಟ್ಟಿನ ಪ್ರದರ್ಶನ ಮಾಡಬೇಕಿದೆ. ನಕಲಿ ಜಾತಿ ಪ್ರಮಾಣಪತ್ರಗಳಿಗೆ ಕಡಿವಾಣ ಹಾಕಬೇಕಿದೆ ಎಂದು ಅಭಿಪ್ರಾಯಪಟ್ಟರು. ಪರಿಶಿಷ್ಟ ಪಂಗಡಕ್ಕೆ 1953 ರಿಂದ ಶೇ. 3 ರಷ್ಟು ಮೀಸಲಾತಿ ಇತ್ತು, ಈಗ ಶೇ. 7 ಕ್ಕೆ ಏರಿಕೆಯಾಗಿದೆ. ಮುಂಬರುವ ವರ್ಷಗಳಲ್ಲಿ ಸಮಾಜದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳಾಗುತ್ತಾರೆ, ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಡಿ.ಐ.ಜಿ ರವಿ ಡಿ. ಚನ್ನಣ್ಣನವರ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಮಾತನಾಡಿದರು. ಜಗಳೂರು ಶಾಸಕ ಬಿ. ದೇವೇಂದ್ರಪ್ಪ, ಜವಳಿ ವರ್ತಕ ಬಿ.ಸಿ. ಉಮಾಪತಿ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಇನ್ನಿತರ ಅಧಿಕಾರಿಗಳು ಇದ್ದರು.
ಮಹರ್ಷಿ ವಾಲ್ಮೀಕಿ ಜಾತ್ರೆಗೆ ಚಾಲನೆ

ಬೇಸಿಗೆಯಲ್ಲಿ ಬಿಸಿ ಕಾಫಿ ಅಥವಾ ಕೋಲ್ಡ್ ಕಾಫಿ, ಯಾವುದು ಆರೋಗ್ಯಕ್ಕೆ ಒಳ್ಳೆಯದು? Hot Coffee OR Cold Coffee
Hot Coffee OR Cold Coffee: ಕಾಫಿ ಪ್ರಪಂಚದಲ್ಲೇ ಅತ್ಯಂತ ಪ್ರಿಯವಾದ ಪಾನೀಯಗಳಲ್ಲಿ ಒಂದಾಗಿದೆ. ಕೆಲವು…
ಶನಿವಾರ ಈ ತಪ್ಪುಗಳನ್ನು ಮಾಡಬೇಡಿ! ಬಡತನವನ್ನು ಆಹ್ವಾನಿಸಿದಂತೆ… Avoid These Mistakes On Saturday
Avoid These Mistakes On Saturday: ಶನಿವಾರದಂದು ಮಾಡುವ ಸಣ್ಣ ತಪ್ಪುಗಳು ಅನೇಕ ರೀತಿಯ ತೊಂದರೆಗಳಿಗೆ…
ಮದ್ವೆ ನಂತರ ಪುರುಷರಿಗೆ ಬೊಜ್ಜಿನ ಸಮಸ್ಯೆ ಹೆಚ್ಚಾಗಲು ಕಾರಣವೇನು ಗೊತ್ತಾ? Post Marriage Weight Gain In Men
Post Marriage Weight Gain In Men: ಮದುವೆಯ ನಂತರ ಪುರುಷರು ಮತ್ತು ಮಹಿಳೆಯರಲ್ಲಿ ಅನೇಕ…