More

    ಮಹನೀಯರ ತತ್ವಾದರ್ಶಗಳು ಸಮಾಜಕ್ಕೆ ಮಾದರಿ

    ದಾವಣಗೆರೆ : ಮಹನೀಯರ ತತ್ವಾದರ್ಶಗಳು ಸಮಾಜಕ್ಕೆ ಮಾದರಿ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣ ನಾಯ್ಕ್ ಹೇಳಿದರು.
     ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಸವಿತಾ ಸಮಾಜದ ಸಂಯುಕ್ತ ಆಶ್ರಯದಲ್ಲಿ ಕೊಂಡಜ್ಜಿ ರಸ್ತೆಯ ಸವಿತಾ ಮಹರ್ಷಿ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
     ಸರ್ಕಾರ ಮಹನೀಯರ ಜಯಂತಿಗಳನ್ನು ಆಚರಿಸುತ್ತಿದ್ದು ಅವು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಲ್ಲ. ಮಹನೀಯರು ಸಮಾಜಕ್ಕೆ ಒಂದಲ್ಲ ಒಂದು ಅತ್ಯುತ್ತಮ ಸಂದೇಶ ನೀಡಿದ್ದಾರೆ. ಆ ಮೂಲಕ ಸಮಾಜದ ಅಭ್ಯುದಯಕ್ಕೆ ಶ್ರಮಿಸಿದ್ದಾರೆ. ನಾವೆಲ್ಲರೂ ಸಮಾಜದ ಸಾಮರಸ್ಯ ಕಾಪಾಡಿಕೊಂಡು ಮುನ್ನಡೆಯಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
     ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಬಿ. ಬಾಲರಾಜ್ ಉಪ್ಪಲ್ ಮಾತನಾಡಿದರು. ಸವಿತಾ ಸಮಾಜದ ತಾಲೂಕು ಅಧ್ಯಕ್ಷ ರಂಗಸ್ವಾಮಿ ಉಪನ್ಯಾಸ ನೀಡಿದರು. ಜಿಲ್ಲಾ ಸವಿತಾ ಸಮಾಜದ ಉಪಾಧ್ಯಕ್ಷ ಬಿ.ವಿ. ಗಂಗಾಧರ್, ತಾಲೂಕು ಉಪಾಧ್ಯಕ್ಷ ಕೇಶವಮೂರ್ತಿ, ಕಾರ್ಯದರ್ಶಿ ಜಿ.ಸಿ. ಪರಶುರಾಮ್, ಖಜಾಂಚಿ ಆರ್. ಕರಿಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಇದ್ದರು.
     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts