ದಾವಣಗೆರೆ : ಭೀಮ ಸಮುದ್ರದ ಜಿ. ಮಲ್ಲಿಕಾರ್ಜುನಪ್ಪ ಮತ್ತು ಹಾಲಮ್ಮ ಚಾರಿಟಿ ಫೌಂಡೇಶನ್ ಹಾಗೂ ಭಾನುವಳ್ಳಿ ಸ್ನೇಹ ಸಂಭ್ರಮ ಗೆಳೆಯರ ಬಳಗದ ವತಿಯಿಂದ ಫೆ. 9ರಂದು ಉದ್ಯೋಗ ಮೇಳವನ್ನು ಹರಿಹರ ತಾಲೂಕು ಭಾನುವಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಗೌರವಾಧ್ಯಕ್ಷ ಟಿ.ಆರ್. ತೇಜಸ್ವಿ ಕಟ್ಟಿಮನಿ ಹೇಳಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಇಂತಹ ಉದ್ಯೋಗ ಮೇಳ ನಡೆಸಲಾಗುತ್ತಿದೆ. 26 ಕಂಪನಿಗಳು ಪಾಲ್ಗೊಳ್ಳಲಿದ್ದು, 3,585 ಉದ್ಯೋಗಾವಕಾಶಗಳಿವೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಪದವೀಧರರು ಮೇಳದಲ್ಲಿ ಭಾಗವಹಿಸಬಹುದು ಎಂದು ತಿಳಿಸಿದರು. ಮೇಳವನ್ನು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟಿಸಲಿದ್ದಾರೆ. ಹರಿಹರ ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ವೀರೇಶ್ ಹನಗವಾಡಿ ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಮಾಹಿತಿಗೆ 9964461461 ಸಂಪರ್ಕಿಸಬಹುದು ಎಂದು ಮನವಿ ಮಾಡಿದರು. ಭಾನುವಳ್ಳಿಯ ಸ್ನೇಹ ಸಂಭ್ರಮ ಗೆಳೆಯರ ಬಳಗದ ಅಧ್ಯಕ್ಷ ಎಚ್.ಎಂ. ಶಿವಕುಮಾರ್, ಉಪಾಧ್ಯಕ್ಷ ಇ. ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಡಿ.ಬಿ. ರಾಮನಗೌಡ, ಸಂಘಟನಾ ಕಾರ್ಯದರ್ಶಿ ಆರ್.ಬಿ. ಫಕೀರಪ್ಪ, ನಿರ್ದೇಶಕರಾದ ಸರಳಾ, ರೂಪಾ, ಮಂಜುಳಾ ಇದ್ದರು.
