More

  ಅಂತರ ಕಾಲೇಜು ಜುಡೋ ಸ್ಪರ್ಧೆ

  ದಾವಣಗೆರೆ : ವಿದ್ಯಾರ್ಥಿಗಳು ಸದೃಢ ಆರೋಗ್ಯದ ಜತೆಗೆ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಲು ಕ್ರೀಡೆಗಳು ಸಹಕಾರಿಯಾಗಿವೆ ಎಂದು ಪತ್ರಕರ್ತ ಜೆ.ಎಸ್. ವೀರೇಶ್ ಹೇಳಿದರು.
   ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ದಾವಣಗೆರೆ ವಿವಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಸಹಯೋಗದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ 2023-24ನೇ ಸಾಲಿನ ದಾವಣಗೆರೆ ವಿಶ್ವವಿದ್ಯಾನಿಲಯ ಮಟ್ಟದ ಅಂತರಕಾಲೇಜು ಪುರುಷರ ಮತ್ತು ಮಹಿಳೆಯರ ಜುಡೋ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
   ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಮತ್ತು ದುಶ್ಚಟಗಳ ದಾಸರಾಗಿ ತಮ್ಮ ಬದುಕನ್ನು ನಾಶ ಮಾಡಿಕೊಳ್ಳುತ್ತಿದ್ದಾರೆ. ಕ್ರೀಡೆಗಳಲ್ಲಿ ಭಾಗವಹಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು. ಶಿಕ್ಷಣದಲ್ಲಿ ಸಾಧನೆ ಕೈಗೊಂಡು ಉನ್ನತ ಹುದ್ದೆ ಪಡೆದು ಹೆತ್ತವರನ್ನು ನೋಡಿಕೊಳ್ಳಬೇಕು ಎಂದು ತಿಳಿಸಿದರು.
   ಸರ್ಕಾರ ಜುಡೋ ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ. ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಜುಡೋ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಜಿಲ್ಲೆ ಮತ್ತು ಕಾಲೇಜಿಗೆ ಕೀರ್ತಿ ತರಬೇಕೆಂದರು.
   ಪ್ರಭಾರ ಪ್ರಾಚಾರ್ಯ ಕೊಟ್ರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಜುಡೋ ಜಪಾನ್ ಮೂಲದ ಕ್ರೀಡೆಯಾಗಿದೆ. ಇದರಿಂದ ವಿದ್ಯಾರ್ಥಿಗಳ ದೇಹ ಬಲಿಷ್ಠಗೊಳ್ಳುವ ಜತೆಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.
   ದಾವಣಗೆರೆ ವಿವಿ ದೈಹಿಕ ಶಿಕ್ಷಣ ವಿಭಾಗದ ಪ್ರಭಾರ ನಿರ್ದೇಶಕ ಪ್ರೊ.ವೆಂಕಟೇಶ್, ಕ್ರೀಡಾಧಿಕಾರಿ ಡಾ. ಬಿ.ಎಚ್. ವೀರಪ್ಪ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಬಸವರಾಜ ತಹಸೀಲ್ದಾರ್, ಪತ್ರಕರ್ತ ಎ.ಎನ್.ನಿಂಗಪ್ಪ,  ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಎಸ್. ವೆಂಕಟೇಶ್ ಬಾಬು, ಪ್ರೊ. ಶಂಭುಲಿಂಗಪ್ಪ ನಲ್ಲನವರ್, ಪ್ರೊ. ಜಿ.ಮಂಜುನಾಥ, ಪ್ರೊ.ಕೊಟ್ರಪ್ಪ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts