ವಿಶ್ವ ಕನ್ನಡ ಸಮ್ಮೇಳನಕ್ಕೆ ಪ್ರಯತ್ನ

1 Min Read
ವಿಶ್ವ ಕನ್ನಡ ಸಮ್ಮೇಳನಕ್ಕೆ ಪ್ರಯತ್ನ

ದಾವಣಗೆರೆ : ನನೆಗುದಿಗೆ ಬಿದ್ದಿರುವ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿಯೇ ಶೀಘ್ರ ಆಯೋಜಿಸಲು ಪ್ರಯತ್ನಿಸುವುದಾಗಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಭರವಸೆ ನೀಡಿದರು.
 ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಬುಧವಾರ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಕನ್ನಡ ನಾಡು, ನುಡಿಯ ಪರವಾಗಿ ಸದಾ ನಿಲ್ಲುವುದಾಗಿ ತಿಳಿಸಿದರು.
 ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ವಾಮದೇವಪ್ಪ ಮಾತನಾಡಿ, ದಾವಣಗೆರೆ ಲೋಕಸಭಾ ಕ್ಷೇತ್ರದ ಪ್ರಥಮ ಮಹಿಳಾ ಸಂಸದೆ ಎನ್ನುವ ಹೆಗ್ಗಳಿಕೆಯನ್ನು ಹೊಂದಿರುವ ಪ್ರಭಾ ಅವರು ಲೋಕಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸುವಂತೆ ಸಲಹೆ ನೀಡಿದರು. ಈ ಹಿಂದೆ ದಿ. ಜೆ.ಎಚ್. ಪಟೇಲರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದರು ಎಂದು ನೆನಪಿಸಿದರು. ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಧ್ಯಕ್ಷೆ ಸುಮತಿ ಜಯಪ್ಪ ಸನ್ಮಾನಿಸಿದರು.
 ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರೇವಣಸಿದ್ದಪ್ಪ ಅಂಗಡಿ, ಗೌರವ ಕೋಶಾಧ್ಯಕ್ಷ ಕೆ. ರಾಘವೇಂದ್ರ ನಾಯರಿ, ಸಂಘಟನಾ ಕಾರ್ಯದರ್ಶಿ ಜಗದೀಶ್ ಕೂಲಂಬಿ, ಜಿಗಳಿ ಪ್ರಕಾಶ್, ಇತರ ಪದಾಧಿಕಾರಿಗಳಾದ ಎನ್.ಎಸ್. ರಾಜು, ಜ್ಯೋತಿ ಉಪಾಧ್ಯಾಯ, ಎಸ್.ಎಂ. ಮಲ್ಲಮ್ಮ, ರುದ್ರಾಕ್ಷಿ ಬಾಯಿ, ನಾಗರಾಜ್ ಸಿರಿಗೆರೆ, ದಾಗಿನಕಟ್ಟೆ ಪರಮೇಶ್ವರಪ್ಪ, ಬೇತೂರು ಎಂ.ಷಡಾಕ್ಷರಪ್ಪ, ಆರ್. ಶಿವಕುಮಾರ್, ಪಂಕಜಾ, ಕುರ್ಕಿ ಸಿದ್ದೇಶ್, ಬಕ್ಕೇಶ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ. ಶಿವಶಂಕರ್ ಇದ್ದರು.

See also  ಕಾಂಕ್ರೀಟ್​ ಮಿಕ್ಸರ್​ ಲಾರಿ ಚಾಲನೆ ಮಾಡುತ್ತಿದ್ದ ಯುವಕನಿಗೆ ಕರೆಂಟ್​ ಶಾಕ್​! ಸ್ಥಳದಲ್ಲೇ ಸಾವನ್ನಪ್ಪಿದ ಯುವಕ
Share This Article