More

  ಕನ್ನಡ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ 27ಕ್ಕೆ

  ದಾವಣಗೆರೆ : ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ನಗರದ ಹದಡಿ ರಸ್ತೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ನ.27ರಂದು ಕರ್ನಾಟಕ ರಾಜ್ಯೋತ್ಸವ, ಪ್ರತಿಭಾ ಪುರಸ್ಕಾರ ಮತ್ತು ವಿಚಾರ ಸಂಕಿರಣ, ಸಚಿವರು ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
   ಸೋಮವಾರ ಮಧ್ಯಾಹ್ನ 3 ಗಂಟೆಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಭುವನೇಶ್ವರಿದೇವಿಗೆ ಪುಷ್ಪಾರ್ಚನೆ ಮಾಡುವರು ಎಂದು ಸಂಘದ ಜಿಲ್ಲಾಧ್ಯಕ್ಷ ವೀರೇಶ್ ಎಸ್. ಒಡೇನಪುರ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
   ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಪಡೆದ ಸುಮಾರು 210 ವಿದ್ಯಾರ್ಥಿಗಳಿಗೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಪ್ರತಿಭಾ ಪುರಸ್ಕಾರ ನೀಡುವರು. ಜಿಲ್ಲೆಯ ಶಾಸಕರಾದ ಡಿ.ಜಿ. ಶಾಂತನಗೌಡ, ಬಿ.ಪಿ. ಹರೀಶ್, ಬಿ. ದೇವೇಂದ್ರಪ್ಪ, ಕೆ.ಎಸ್. ಬಸವಂತಪ್ಪ, ಬಸವರಾಜ ವಿ. ಶಿವಗಂಗಾ ಉಪಸ್ಥಿತರಿರುವರು.
   ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿ.ಪಂ. ಸಿಇಒ ಸುರೇಶ್ ಬಿ. ಇಟ್ನಾಳ್, ಎಸ್.ಪಿ. ಉಮಾ ಪ್ರಶಾಂತ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಸಂಪನ್ಮೂಲ ವ್ಯಕ್ತಿ ಮಹೇಶ್ ಮಾಶ್ಯಾಳ್ ಪ್ರಜಾಸ್ನೇಹಿ ಆಡಳಿತದಲ್ಲಿ ನೌಕರರ ಪಾತ್ರ ಕುರಿತು ಉಪನ್ಯಾಸ ನೀಡುವರು. ಸಂಘದ ಸರ್ವ ಸದಸ್ಯರ ಮಹಾಸಭೆ ಹಾಗೂ ಗಂಗಾವತಿ ಪ್ರಾಣೇಶ್ ಮತ್ತು ತಂಡದವರಿಂದ ಹಾಸ್ಯಸಂಜೆ ಕಾರ್ಯಕ್ರಮ ನಡೆಯಲಿದೆ ಎಂದರು.
   ಸಂಘದ ಪದಾಧಿಕಾರಿಗಳಾದ ಸಿ.ಗುರುಮೂರ್ತಿ, ಬಿ.ಆರ್.ತಿಪ್ಪೇಸ್ವಾಮಿ, ಬಿ.ಫಾಲಾಕ್ಷಿ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts