ದಾವಣಗೆರೆ : ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ)ಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಸಂಭ್ರಮ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭವನ್ನು ಡಿ. 15ರಂದು ನಗರದ ಪಿಬಿ ರಸ್ತೆಯಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಜಮ್ನಳ್ಳಿ ನಾಗರಾಜ ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಸಂಜೆ 4 ಗಂಟೆಗೆ ವೇದಿಕೆಯ ಅಧ್ಯಕ್ಷ ಪ್ರವೀಣ ಕುಮಾರ್ ಶೆಟ್ಟಿ ಅವರನ್ನು ನಗರದ ಗಾಂಧಿ ವೃತ್ತದಿಂದ ಬೈಕ್ ಮತ್ತು ಆಟೋ ರ‌್ಯಾಲಿ ಮೂಲಕ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಕರೆತರಲಾಗುವುದು ಎಂದು ತಿಳಿಸಿದರು. ಸಂಜೆ 5.30ಕ್ಕೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಹದಡಿಯ ಶ್ರೀ ಮುರಳೀಧರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಮೇಯರ್ ಕೆ. ಚಮನ್ ಸಾಬ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಪಾಲ್ಗೊಳ್ಳುವರು. ನಿವೃತ್ತ ಅಭಿಯೋಜಕ ಎಸ್.ವಿ. ಪಾಟೀಲ್ ಆಶಯ ನುಡಿಗಳನ್ನಾಡುವರು ಎಂದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಎಸ್.ಬಿ. ನಾಗರಾಜ, ಕಮಲಮ್ಮ, ಪ್ರದೀಪ್, ಎಂ. ಸರೋಜಮ್ಮ, ಡಾ.ಶಶಿಕುಮಾರ್ ಮೆಹರ್ವಾಡೆ, ಡಾ.ಎಲ್. ಹನುಮ ನಾಯಕ್, ಎಚ್.ಎಸ್. ಮನೀಶ್, ನಾಗರಾಜ ನಾಯಕ್, ಡಾ.ಸವಿತಾ, ನಾಗರಾಜ ಪಿ. ಭಾನುವಳ್ಳಿ ಅವರನ್ನು ಗೌರವಿಸಲಾಗುವುದು. ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದಿರುವ ಶಮಾ ಫಾತಿಮಾ, ನೀಟ್‌ನಲ್ಲಿ ಉತ್ತಮ ಅಂಕ ಗಳಿಸಿರುವ ಎಸ್. ಸೃಜನ್, ಕನ್ನಡದಲ್ಲಿ ಹೆಚ್ಚು ಅಂಕ ಪಡೆದಿರುವ ಎಸ್. ಇಂಚರ, ಬಿ.ಎನ್. ರಕ್ಷಿತಾ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಹೇಳಿದರು. ಸಯ್ಯದ್ ನಜೀರ್, ರಮೇಶ್ ಮಾನೆ, ರಾಜೇಶ್ ಈಡಿಗೇರ್, ಪುಷ್ಪಾ, ಸಿ.ಎನ್. ಮಂಜುನಾಥ, ಸಿದ್ಧಾರ್ಥ, ಸಾಮ್ರಾಟ್, ಅನೂಪ್, ಪ್ರೀತಮ್ ಬಾಬು ಇದ್ದರು.
ಕರವೇಯಿಂದ ಸಾಂಸ್ಕೃತಿಕ ಸಂಭ್ರಮ, ಪ್ರತಿಭಾ ಪುರಸ್ಕಾರ
ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್ ವಿಧಾನ | Recipe
ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…
ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್ ಮಾಡೋದೆ ಇಲ್ಲ | Health Tips
ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…
ಟೊಮೆಟೊ ಸೇವನೆ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips
ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್.…