Friday, 16th November 2018  

Vijayavani

Breaking News

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ: ಪ್ರಮುಖ ಆರೋಪಿ ಬಂಧನ

Thursday, 14.06.2018, 4:05 PM       No Comments

ದಾವಣಗೆರೆ: ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ಸಿಸಿಬಿ ಪೊಲೀಸರ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಉಪಕಾರ್ಯದರ್ಶಿ ಹಿರಿಯ ಕೆಎಎಸ್ ಅಧಿಕಾರಿ ರಾಮಚಂದ್ರಯ್ಯ ಎಂಬವರನ್ನು ಬಂಧಿಸಲಾಗಿದೆ.

2017ರ ಅ.16ರಂದು ದಾವಣಗೆರೆಯಲ್ಲಿ ನಡೆದ KPSC ಪರೀಕ್ಷೆಯಲ್ಲಿ ಮೈಕ್ರೋ ಫೋನ್ ಬಳಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಅಕ್ರಮ ಎಸಗಿ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ ಆರೋಪದಲ್ಲಿ ಮೂರು ದಿನ ವಿಚಾರಣೆ ನಂತರ ಬಂಧಿಸಲಾಗಿದೆ.

ಈ ಕುರಿತು ಆಜಾದ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಬಂಧನಕ್ಕೊಳಗಾಗಿರುವ ಆರೋಪಿಯನ್ನು ಇಂದು ಕೋರ್ಟ್‌ಗೆ ಹಾಜರುಪಡಿಸಲಾಗುವುದು.

Leave a Reply

Your email address will not be published. Required fields are marked *

Back To Top