ಪ್ರಮಾಣ ಪತ್ರ  ಜಿಲ್ಲೆಯ 74 ಗ್ರಾಮ ಸಂಪೂರ್ಣ ಸಾಕ್ಷರತೆ

ದಾವಣಗೆರೆ :  ಜಿಲ್ಲೆಯ 74 ಗ್ರಾಮಗಳನ್ನು ಸಂಪೂರ್ಣ ಸಾಕ್ಷರತಾ ಗ್ರಾಮಗಳೆಂದು ಘೋಷಿಸಲಾಗಿದೆ ಎಂದು ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್ ಹೇಳಿದರು.  ನಗರದ ಪಾಲಿಕೆಯ ಶಾಮನೂರು ಶಿವಶಂಕರಪ್ಪ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ 58ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.  ಜಿಲ್ಲೆಯ 24 ಗ್ರಾಮ ಪಂಚಾಯಿತಿ ಒಳಗೊಂಡ ಗ್ರಾಮಗಳಲ್ಲಿ ಈ ಘೋಷಣೆ ಮಾಡಲಾಗಿದೆ. ಜತೆಗೆ, 2,80,033 ಜನರನ್ನು ಕಲಿಕಾ ಕಾರ್ಯಕ್ರಮದ ಮೂಲಕ ಸಾಕ್ಷರರನ್ನಾಗಿಸಿ ಪ್ರಮಾಣ ಪತ್ರ ನೀಡಲಾಗಿದೆ ಎಂದು ತಿಳಿಸಿದರು.  ಮಹಾನಗರ ಪಾಲಿಕೆಯ ಎಲ್ಲ ಪೌರಕಾರ್ಮಿಕರನ್ನು ಸಾಕ್ಷರರನ್ನಾಗಿಸಲು ನಿರ್ದೇಶನ ನೀಡಲಾಗಿದೆ. ಪಾಲಿಕೆಯಲ್ಲಿ ಒಟ್ಟು 440 ಅನಕ್ಷರಸ್ಥರಿದ್ದು, ಅವರಿಗೆ 120 ಗಂಟೆಗಳ ಕಾಲ ಕಲಿಕೆ ಮತ್ತು 80 ಗಂಟೆಗಳ ಕಾಲ  ಪ್ರಾಯೋಗಿಕ  ತರಬೇತಿ ನೀಡಲಾಗುತ್ತಿದೆ ಎಂದರು.  ಮುಂದಿನ ಮೂರು ತಿಂಗಳ ಅವಧಿಯಲ್ಲಿ ತರಬೇತಿ ನೀಡಿ ಸಾಕ್ಷರತಾ ಪರೀಕ್ಷೆ ಮಾಡಲಾಗುವುದು. ಈ ಪರೀಕ್ಷೆ ಪಾಸಾದವರಿಗೆ ಸಾಕ್ಷರಸ್ಥರು ಎಂದು ಘೋಷಣೆ ಮಾಡಿ ಪ್ರಮಾಣ ಪತ್ರ ನೀಡಲಾಗುವುದು ಎಂದು ಹೇಳಿದರು.  ಪ್ರಸಕ್ತ ವರ್ಷ 148 ಗ್ರಾಪಂಗಳನ್ನು ಸಂಪೂರ್ಣ ಸಾಕ್ಷರತೆಗೆ ಒಳಪಡಿಸುವ ಗುರಿ ಹೊಂದಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲೂ 259 ಸದಸ್ಯರು ಅನಕ್ಷರಸ್ಥರಿದ್ದು, ಅವರಿಗೂ ಸಾಕ್ಷರತಾ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.  ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಮಾತನಾಡಿ, ಕೇರಳದಲ್ಲಿ ನೂರು ಪ್ರತಿಶತ ಸಾಕ್ಷರತಾ  ಪ್ರಮಾಣವಿದೆ. ಅದೇ ರೀತಿ ಜಿಲ್ಲೆಯಲ್ಲೂ ಸಹ ಶೇ.100ರಷ್ಟು ಸಾಕ್ಷರತೆ ಹೊಂದಲು ನೀವು ಸಾಕ್ಷರಸ್ಥರಾಗಿ, ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿಸಬೇಕು ಎಂದು ತಿಳಿಸಿದರು.  ಪಾಲಿಕೆ ಸದಸ್ಯ ಎ. ನಾಗರಾಜ್, ಆಯುಕ್ತೆ ರೇಣುಕಾ, ಡಯಟ್ ಪ್ರಾಚಾರ್ಯೆ ಎಸ್. ಗೀತಾ, ಸಂಪನ್ಮೂಲ ವ್ಯಕ್ತಿಗಳಾದ ವಾಗೀಶ್ ಮಲ್ಕಿ ಒಡೆಯರ್, ಕೆ.ಸಿ. ಬಸವರಾಜ, ಗುರುಸಿದ್ದಸ್ವಾಮಿ ಇತರರು ಇದ್ದರು.  ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಮಹೇಶಪ್ಪ ಎಚ್. ದೊಡ್ಮನಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಸಹಾಯಕಿ ಜಿ. ಪೂರ್ಣಿಮಾ ಸಾಕ್ಷರತಾ ಪ್ರತಿಜ್ಞಾವಿಧಿ ಬೋಧಿಸಿದರು.  ಸಾಕ್ಷರ ಸೇನಾನಿಗಳಾದ ಹೆಗ್ಗೆರೆ ರಂಗಪ್ಪ, ಐರಣಿ ಚಂದ್ರು ಅವರಿಗೆ ಸನ್ಮಾನಿಸಲಾಯಿತು. ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ನೀಡಲಾಯಿತು.  ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಲೋಕ ಶಿಕ್ಷಣ ವಿಭಾಗ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಡಯಟ್, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಸಾಕ್ಷರತಾ ಸಮಿತಿ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

Share This Article

ಮನೆಯಲ್ಲೇ ತಯಾರಿಸಿಕೊಳ್ಳಿ ಕೂದಲು ಸಂರಕ್ಷಣೆಯ ಶುದ್ಧ ತೈಲ

ಸದೃಢವಾದ, ಹೊಳೆಯುವ, ನೀಳ ಕೂದಲು ಬೇಕೆಂಬ ಆಸೆ ತುಂಬಾ ಜನರಿಗೆ ಇದ್ದೇ ಇರುತ್ತದೆ. ಜೊತೆಗೆ ಕೂದಲು…

Chanakya Niti: ದಾಂಪತ್ಯ ಜೀವನ ಸುಂದರವಾಗಿರಲು 4 ವಿಷಯಗಳನ್ನು ಅನುಸರಿಸಿ….

ಬೆಂಗಳೂರು:  ವಿದ್ವಾಂಸರಲ್ಲಿ ಚಾಣಕ್ಯರು ( Chanakya Niti ) ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ…

Tamarind Juice : ಹುಣಸೆ ಹಣ್ಣಿನ ರಸದ ಅದ್ಭುತ ಪ್ರಯೋಜನಗಳಿವು…

ಬೆಂಗಳೂರು:  ಹುಣಸೆಹಣ್ಣು ಭಾರತೀಯ ಪಾಕಪದ್ಧತಿಯಲ್ಲಿ ಬಳಸುವ ಪದಾರ್ಥಗಳಲ್ಲಿ ಒಂದಾಗಿದೆ. ಹುಣಸೆಹಣ್ಣು ಸ್ವಲ್ಪ ಸಿಹಿ ಮತ್ತು ಸ್ವಲ್ಪ…