More

    ಲಾಕಪ್ ಡೆತ್ ಪ್ರಕರಣ, ಮರಣೋತ್ತರ ಪರೀಕ್ಷೆ

    ದಾವಣಗೆರೆ: ತಾಲೂಕಿನ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಕಸ್ಟಡಿಯಲ್ಲಿದ್ದಾಗಲೇ ಮೃತಪಟ್ಟ ಮರುಳಸಿದ್ದಪ್ಪ ಎಂಬ ವ್ಯಕ್ತಿಯ ಮರಣೋತ್ತರ ಪರೀಕ್ಷೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಸಮ್ಮುಖದಲ್ಲಿ ಬುಧವಾರ ಬೆಳಗ್ಗೆ ಇಲ್ಲಿನ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆಸಲಾಯಿತು.

    ಇದೇ ವೇಳೆ ಮೃತನ ಕುಟುಂಬದವರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 4,12,500 ರೂ.ಗಳ ಪರಿಹಾರದ ಚೆಕ್ ಅನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ವಿತರಿಸಿದರು.

    ಈ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‌ಐ ಸೇರಿ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಪಿಎಸ್‌ಐ ಸೇರಿ 3 ಪೊಲೀಸರನ್ನು ಬಂಧಿಸಲಾಗಿದೆ.

    ಸಮಾಜ ಕಲ್ಯಾಣ ಇಲಾಖೆಯಿಂದ ಮೃತನ ಕುಟುಂಬಕ್ಕೆ 8,25,000 ರೂ. ಪರಿಹಾರ ನೀಡಲು ಅವಕಾಶವಿದೆ. ಆರಂಭಿಕ ಹಂತದಲ್ಲಿ ಶೇ. 50 ರಷ್ಟು ಪರಿಹಾರ ಧನ ನೀಡಿದ್ದೇವೆ. ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ ಬಳಿಕ ಉಳಿದ ಪರಿಹಾರ ಬಿಡುಗಡೆ ಆಗಲಿದೆ ಎಂದರು.

    ಎಸ್ಪಿ ಹನುಂತರಾಯ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆದಿದೆ. ಬುಧವಾರ ಮತ್ತೊಬ್ಬ ಕಾನ್‌ಸ್ಟೇಬಲ್‌ನನ್ನು ಅಮಾನತು ಮಾಡಲಾಗಿದೆ.

    ತನಿಖೆಗಾಗಿ ಸಿಐಡಿ ತಂಡವು ಯಾವುದೇ ಕ್ಷಣದಲ್ಲಿ ಆಗಮಿಸುವ ನಿರೀಕ್ಷೆಯಿದೆ. ರಾಷ್ಟ್ರೀಯ, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts