More

  ಸಿ.ಎ. ನಿವೇಶನಗಳ ಅವ್ಯವಹಾರ ಪ್ರಕರಣ

  ದಾವಣಗೆರೆ : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸಿ.ಎ. ನಿವೇಶನಗಳನ್ನು ಅಕ್ರಮವಾಗಿ ಖಾತೆ ಮಾಡುತ್ತಿರುವ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ 4 ತಂಡಗಳಾಗಿ ಏಕ ಕಾಲದಲ್ಲಿ ಮಹಾನಗರ ಪಾಲಿಕೆ ಕಚೇರಿ, ಪಾಲಿಕೆಯ ವಲಯ ಕಚೇರಿ-3, ಉಪ ನೋಂದಣಾಧಿಕಾರಿ ಕಚೇರಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ದಾಳಿ ನಡೆಸಿದರು.
   ದಾಳಿಯ ಸಂದರ್ಭದಲ್ಲಿ ಪ್ರಕರಣ ಸಂಬಂಧ ದಾಖಲಾತಿಗಳನ್ನು ವಶಪಡಿಸಿಕೊಂಡು ತನಿಖೆ ಕೈಗೆತ್ತಿಕೊಳ್ಳಲಾಗಿದೆ.
   ಮಹಾನಗರ ಪಾಲಿಕೆ ಮತ್ತು ಉಪ ನೋಂದಣಾಧಿಕಾರಿ ಕಚೇರಿಯ ಕೆಲವು ಅಧಿಕಾರಿಗಳು ಹಣ ಪಡೆದು, ಸರ್ಕಾರದ ಸಿಎ ನಿವೇಶನಗಳನ್ನು ಮಾರಾಟ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
   ಈ ಕುರಿತು ದಾವಣಗೆರೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪೂರೆ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
   ಇನ್‌ಸ್ಪೆಕ್ಟರ್‌ಗಳಾದ ಮಧುಸೂದನ್, ಪ್ರಭು ಬಿ. ಸುರಿನ್, ಮುಷ್ತಾಕ್ ಅಹಮದ್ ಮತ್ತು ಎಚ್.ಎಸ್. ರಾಷ್ಟ್ರಪತಿ ಕಾರ್ಯಾಚರಣೆ ನಡೆಸಿದ ತಂಡದಲ್ಲಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts