ಸಿನಿಮಾ

ರಾಜಕಾಲುವೆಗಳ ಹೂಳು ತೆಗೆಸಲು ಸೂಚನೆ

ದಾವಣಗೆರೆ : ಮಳೆಗಾಲ ಆರಂಭವಾಗುವುದಕ್ಕೂ ಮುನ್ನ ನಗರದಲ್ಲಿರುವ ಎಲ್ಲ ರಾಜಕಾಲುವೆಗಳಲ್ಲಿರುವ ಹೂಳನ್ನು ತೆರವುಗೊಳಿಸಬೇಕು ಎಂದು ಮಹಾನಗರ ಪಾಲಿಕೆಯ ಆಯುಕ್ತರಿಗೆ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಮತ್ತು ಎಸ್.ಎಸ್. ಮಲ್ಲಿಕಾರ್ಜುನ್ ಸೂಚಿಸಿದ್ದಾರೆ.
 ಜಿಲ್ಲೆ ಮತ್ತು ನಗರದಲ್ಲಿ ಭಾನುವಾರ ಬಿರುಗಾಳಿ ಹಾಗೂ ಗುಡುಗು ಸಹಿತ ಧಾರಾಕಾರ ಮಳೆಯಿಂದಾಗಿ ರೈತರು, ಸಾರ್ವಜನಿಕರಿಗೆ ಬಹಳ ತೊಂದರೆಯಾಗಿದೆ. ನಗರದ ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ತುಂಬಿಕೊಂಡಿದ್ದು ಅಲ್ಲಿನ ನಿವಾಸಿಗಳು ಹರಸಾಹಸ ಪಡುವಂತಾಗಿದೆ ಎಂದು ತಿಳಿಸಿದ್ದಾರೆ.
 ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತ ದೃಷ್ಟಿಯಿಂದ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು. ಮಳೆಯಿಂದಾಗಿ ಭತ್ತ, ಹತ್ತಿ ಸೇರಿ ವಿವಿಧ ಬೆಳೆಗಳು ಹಾಳಾಗಿರುವ ಬಗ್ಗೆಯೂ ಸಂಬಂಧಿಸಿದ ಅಧಿಕಾರಿಗಳು ವರದಿ ನೀಡುವಂತೆ ಹೇಳಿದ್ದಾರೆ.

Latest Posts

ಲೈಫ್‌ಸ್ಟೈಲ್