ಸೊಪ್ಪಿನ ಮಾರುಕಟ್ಟೆ ಶೀಘ್ರ ಎಪಿಎಂಸಿಗೆ ಸ್ಥಳಾಂತರ  

blank

ದಾವಣಗೆರೆ : ಸೊಪ್ಪಿನ ವ್ಯಾಪಾರಿಗಳು ಎ.ಪಿ.ಎಂ.ಸಿ ಮಾರುಕಟ್ಟೆಗೆ ಸ್ಥಳಾಂತರವಾಗಲು ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುತ್ತದೆ. ಜ. 10 ರೊಳಗೆ ವ್ಯಾಪಾರಿಗಳು ಅಲ್ಲಿಗೆ ಸ್ಥಳಾಂತರವಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದರು.  ಮಹಾನಗರ ಪಾಲಿಕೆಯ ಡಾ.ಶಾಮನೂರು ಶಿವಶಂಕರಪ್ಪ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ, ಸೊಪ್ಪಿನ ಮಾರುಕಟ್ಟೆ ಸ್ಥಳಾಂತರಿಸುವ ಕುರಿತಾದ ಸಭೆಯಲ್ಲಿ ಮಾತನಾಡಿದರು.  ಮಂಡಿಪೇಟೆ, ಚೌಕಿಪೇಟೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಇಲ್ಲ. ವಾಯುಮಾಲಿನ್ಯ ಹಾಗೂ ಅಲ್ಲಿನ ಸ್ವಚ್ಛತೆಗೆ ಸಮಸ್ಯೆಯಾಗುತ್ತಿರುವ ಕಾರಣ ಮಂಡಿಪೇಟೆ ಪ್ರದೇಶದಲ್ಲಿನ ಸೊಪ್ಪಿನ ವ್ಯಾಪಾರಿಗಳನ್ನು ಎ.ಪಿ.ಎಂ.ಸಿಗೆ ಸ್ಥಳಾಂತರಿಸುವುದು ಅನಿವಾರ್ಯ ಎಂದು ತಿಳಿಸಿದರು.  ನಗರದಲ್ಲಿ ವಾಹನ ದಟ್ಟಣೆ ಹಾಗೂ ನಿಲುಗಡೆ ಸಮಸ್ಯೆ ಹೆಚ್ಚಾಗಿರುವ ಕಾರಣ ಇದರಿಂದ ಅನನುಕೂಲವಾಗುತ್ತಿದೆ ಎಂದು ಹೇಳಿದರು.  ನಮ್ಮ ದೇಶದಲ್ಲಿ ಶೇ. 80 ರಷ್ಟು ಪೆಟ್ರೋಲ್, ಡೀಸೆಲ್ ಹೊರ ರಾಷ್ಟ್ರಗಳಿಂದ ಬರುತ್ತದೆ. ವಿದೇಶಗಳಿಂದ ಇಂಧನ ಖರೀದಿಸಲು ನಮ್ಮ ದುಡ್ಡನ್ನು ಕೊಟ್ಟು ಅದನ್ನು ಡಾಲರ್‌ಗೆ ಬದಲಾವಣೆ ಮಾಡಿ ತೆಗೆದುಕೊಳ್ಳಬೇಕಾಗುತ್ತದೆ.  ಜನದಟ್ಟಣೆ, ವಾಹನ ದಟ್ಟಣೆ ಹಾಗೂ ಕಿರಿದಾದ ರಸ್ತೆಗಳ ಕಾರಣದಿಂದ ಮಾಲಿನ್ಯ, ಇಂಧನ ವ್ಯಯ ಸೇರಿದಂತೆ ಅನೇಕ ಸಮಸ್ಯೆಗಳು ಎದುರಾಗುತ್ತಿವೆ. ಸ್ಥಳಾಂತರವೊಂದೇ ಇದಕ್ಕೆ ಪರಿಹಾರವಾಗಿದೆ. ವ್ಯಾಪಾರಸ್ಥರಿಗೆ ಮಳಿಗೆ ಬಾಡಿಗೆ ಹೊರೆಯಾಗದಂತೆ ಅನುಕೂಲ ಮಾಡಿ ಕೋಡುತ್ತೇವೆ ಎಂದು ಭರವಸೆ ನೀಡಿದರು.  ಎಪಿಎಂಸಿಯಲ್ಲಿ ಶೌಚಗೃಹ, ವಾಹನ ನಿಲುಗಡೆಗೆ ವ್ಯವಸ್ಥೆಯನ್ನು ಮಾಡಿಕೊಡಲಾಗುತ್ತದೆ. ಇತರೆ ವ್ಯಾಪಾರಿಗಳಿಗೆ ಸೂಕ್ತವಾದ ಖಾಲಿ ಜಾಗವನ್ನು ಗುರುತಿಸಿ ಜಿಲ್ಲಾ ಸಚಿವರ ಗಮನಕ್ಕೆ ತಂದು ಅನುಕೂಲ ಮಾಡಿಕೊಡಲಾಗುವುದು. ಎ.ಪಿ.ಎಂ.ಸಿ ಮಾರುಕಟ್ಟೆ ಮಳಿಗೆಗಳು ಬೇಕಾದರೆ ಕಡ್ಡಾಯವಾಗಿ ಲೈಸೆನ್ಸ್ ಪಡೆದುಕೊಳ್ಳಬೇಕು. ಹಳೆಯ ಲೈಸೆನ್ಸ್ ಇದ್ದವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.  ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ಹಬ್ಬ ಹರಿದಿನಗಳಲ್ಲಿ ವಾಹನ ನಿಲುಗಡೆಗೆ ತುಂಬಾ ಸಮಸ್ಯೆ ಆಗುತ್ತಿದ್ದು ಇದನ್ನು ತಪ್ಪಿಸಲು ಸೊಪ್ಪಿನ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಎಪಿಎಂಸಿ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಹೇಳಿದರು.  ಹೊಸ ಜಾಗಕ್ಕೆ ಬಂದು ಹೊಂದಿಕೊಳ್ಳುವುದು ಕಷ್ಟವಾದರೂ ನಂತರ ವ್ಯಾಪಾರ, ವಹಿವಾಟು ಹೆಚ್ಚಾಗಲಿದೆ. ಸ್ಥಳಾಂತರಿಸುವುದರಿಂದ ವಾಹನ ನಿಲುಗಡೆ, ಇತ್ಯಾದಿ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ತಿಳಿಸಿದರು.  ಮೇಯರ್ ಕೆ. ಚಮನ್ ಸಾಬ್ ಮಾತನಾಡಿ, ನಗರದಲ್ಲಿ 6 ಲಕ್ಷ ಜನ, ಮನೆಗೆ ಎರಡು, ಮೂರು ವಾಹನಗಳಿರುವುದರಿಂದ ಮುಂದಿನ ದಿನಗಳಲ್ಲಿ ವಾಹನ ನಿಲುಗಡೆಗೆ ತುಂಬಾ ತೊಂದರೆಯಾಗುತ್ತದೆ. ಭವಿಷ್ಯದ ದೃಷ್ಟಿಯಿಂದ ಸ್ಥಳಾಂತರ ಅಗತ್ಯವಾಗಿದೆ. ಇದರಿಂದ ನಗರದ ಸ್ವಚ್ಛತೆ, ವಾಹನ ಸಂಚಾರಕ್ಕೆ ಅನುಕೂಲವಾಗಲಿದೆ ಎಂದರು.  ಉಪ ಮೇಯರ್ ಸೋಗಿ ಶಾಂತಕುಮಾರ್, ಸದಸ್ಯರಾದ ಆರ್.ಎಲ್. ಶಿವಪ್ರಕಾಶ್, ಆಯುಕ್ತೆ ರೇಣುಕಾ ಇದ್ದರು.

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…