More

    ದಾವಣಗೆರೆ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ಕ್ಷಣಗಣನೆ: ಬಿಜೆಪಿ-ಕಾಂಗ್ರೆಸ್ ನೇರ ಹಣಾಹಣಿ

    ದಾವಣಗೆರೆ: ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಆಯ್ಕೆಯ ಹೈವೋಲ್ಟೇಜ್ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಈ ಚುನಾವಣೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

    ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಬಿ.ಜೆ. ಅಜಯಕುಮಾರ್, ಕಾಂಗ್ರೆಸ್‌ ನಿಂದ ದೇವರಮನೆ ಶಿವಕುಮಾರ್ ನಾಮಪತ್ರ ಸಲ್ಲಿಸಿದರು. ಉಪ ಮೇಯರ್ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯೆ ಸೌಮ್ಯಾ ನರೇಂದ್ರ ಕುಮಾರ್, ಕಾಂಗ್ರೆಸ್ ನ ಆಶಾ ಡಿ.ಎಸ್ ಮತ್ತು ಜೆಡಿಎಸ್ ನ ನೂರ್ ಜಹಾನ್ ನಾಮಪತ್ರ ಸಲ್ಲಿಸಿದರು

    ಒಟ್ಟು 45 ಸದಸ್ಯ ಬಲದ ಪಾಲಿಕೆಗೆ ಕಳೆದ ನ. 12 ರಂದು ನಡೆದಿದ್ದ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿರಲಿಲ್ಲ. ಕಾಂಗ್ರೆಸ್ 22, ಬಿಜೆಪಿ 17, ಪಕ್ಷೇತರರು 5 ಹಾಗೂ ಜೆಡಿಎಸ್ 1 ಸ್ಥಾನ ಗೆದ್ದಿದ್ದವು.

    12 ಜನ ಎಂಎಲ್ಸಿಗಳ ಹೆಸರು ಅಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಸೇರಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಕಾಂಗ್ರೆಸ್ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿತ್ತು. ಆದರೆ ಎಲ್ಲ 62 ಮತದಾರರೂ ಮತ ಚಲಾಯಿಸಬಹುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಒಟ್ಟು 14 ಎಂಎಲ್ಸಿಗಳು, ಇಬ್ಬರು ಶಾಸಕರು, ಒಬ್ಬ ಸಂಸದ ಮತ ಚಲಾಯಿಸಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts