ಕಾಲಮಿತಿಯಲ್ಲಿ ನಗರೋತ್ಥಾನ ಕಾಮಗಾರಿ

blank

ದಾವಣಗೆರೆ :  ನಗರೋತ್ಥಾನ ಯೋಜನೆಯಡಿ ಮೂರನೇ ಹಂತ ಪೂರ್ಣಗೊಳಿಸಿ 4 ನೇ ಹಂತದಲ್ಲಿ ಅನುದಾನವನ್ನು ನೀಡಲಾಗಿದೆ. 15 ನೇ ಹಣಕಾಸು ಯೋಜನೆಯಡಿ ಟೆಂಡರ್ ಪ್ರಕ್ರಿಯೆಯನ್ನೇ ನಡೆಸದ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಅಧಿಕಾರ ನೀಡಲಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ತಿಳಿಸಿದರು.  ಜಿಲ್ಲಾಡಳಿತ ಭವನದಲ್ಲಿ ಬುಧವಾರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.  ಜಿಲ್ಲೆಯ ಹರಿಹರ, ಹೊನ್ನಾಳಿ, ಚನ್ನಗಿರಿ, ಮಲೇಬೆನ್ನೂರು, ನ್ಯಾಮತಿ, ಚನ್ನಗಿರಿ, ಜಗಳೂರು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಗರೋತ್ಥಾನದಡಿ ಮೂರು ಮತ್ತು 4 ನೇ ಹಂತದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಈಗಾಗಲೇ ಮೂರನೇ ಹಂತ ಸಂಪೂರ್ಣ ಮುಗಿದಿದೆ ಎಂದು ಹೇಳಿದರು.  ನಾಲ್ಕನೇ ಹಂತದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನದಡಿ 70 ಕೋಟಿಗೆ ಕ್ರಿಯಾಯೋಜನೆ ರೂಪಿಸಿ 32.20 ಕೋಟಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ 210 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿತ್ತು. 110 ಕಾಮಗಾರಿಗಳು ಮುಕ್ತಾಯವಾಗಿದ್ದು 71 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.  ಕಳೆದ ಎರಡು ವರ್ಷಗಳಿಂದ ಟೆಂಡರ್ ಹಂತದಲ್ಲಿಯೇ ಅಧಿಕಾರಿಗಳು ಕಾಲ ಕಳೆಯುತ್ತಿದ್ದು ಈ ಕಾಮಗಾರಿಗಳನ್ನು ಮುಕ್ತಾಯ ಮಾಡುವವರೆಗೆ ಮುಂದಿನ ಹಂತದ ಕಾಮಗಾರಿಗೆ ಅನುದಾನ ನೀಡುವುದಿಲ್ಲ. ವಿಳಂಬ ಮಾಡಿದ ಅಧಿಕಾರಿಗಳಿಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು.  …    (ಬಾಕ್ಸ್)  ಅಧಿಕಾರಿಗಳ ವಿರುದ್ಧ ಅಸಮಾಧಾನ  ಇದೇ ವೇಳೆ ಚನ್ನಗಿರಿ ಶಾಸಕ ಬಸವರಾಜ್ ವಿ. ಶಿವಗಂಗಾ ಮಾತನಾಡಿ, ಚನ್ನಗಿರಿ ಪುರಸಭೆಯಲ್ಲಿ ನಗರೋತ್ಥಾನ ಕಾಮಗಾರಿಗಳು ಸೇರಿದಂತೆ ಯಾವುದೇ ಕೆಲಸ ಸರಿಯಾಗಿ ಅನುಷ್ಠಾನ ಮಾಡುತ್ತಿಲ್ಲ. ಪಟ್ಟಣಕ್ಕೆ ವಿಶೇಷ ಅನುದಾನವನ್ನು ತರಲಾಗಿದ್ದು ಅಧಿಕಾರಿಗಳು ಅನುಷ್ಠಾನ ಮಾಡುತ್ತಿಲ್ಲ ಎಂದು ಗಮನ ಸೆಳೆದರು. ಎಲ್ಲ ಕಾಮಗಾರಿಗಳ ವಿವರವನ್ನು ಶಾಸಕರ ಗಮನಕ್ಕೆ ತಂದು ಅನುಷ್ಠಾನ ಮಾಡಬೇಕೆಂದು ಸಚಿವರು ಸೂಚನೆ ನೀಡಿದರು.  ಜಗಳೂರು ಶಾಸಕ ಬಿ. ದೇವೇಂದ್ರಪ್ಪ ಮಾತನಾಡಿ, ಅಧಿಕಾರಿಗಳು ಪರಿಶೀಲನೆಗೆ ಬಂದಾಗ ಶಾಸಕರನ್ನು ಭೇಟಿ ಮಾಡುವುದಿಲ್ಲ, ಸಾರ್ವಜನಿಕರು ನಮ್ಮ ಹತ್ತಿರ ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಾರೆ, ಅಧಿಕಾರಿಗಳು ಭೇಟಿ ಮಾಡಿದರೆ ಅವರ ಗಮನಕ್ಕೆ ತರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.  ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ 8 ಸೇರಿದಂತೆ 11 ಇಂದಿರಾ ಕ್ಯಾಂಟೀನ್‌ಗಳಿದ್ದು ಇದರೊಂದಿಗೆ ಹೆಚ್ಚುವರಿಯಾಗಿ ಪಾಲಿಕೆಯಲ್ಲಿ 2 ಹಾಗೂ ಹೊನ್ನಾಳಿಯಲ್ಲಿ 1 ಕ್ಯಾಂಟೀನ್ ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದರು.  ಸ್ವಚ್ಛ ಭಾರತ್ ಮಿಷನ್ 1 ರಲ್ಲಿ 71 ಕಾಮಗಾರಿಗಳನ್ನು ತೆಗೆದುಕೊಂಡು 70 ಪೂರ್ಣಗೊಳಿಸಲಾಗಿದೆ. 1 ಪ್ರಗತಿಯಲ್ಲಿದೆ, ಇದಕ್ಕಾಗಿ ಒಟ್ಟು 9.55 ಕೋಟಿ ವೆಚ್ಚ ಮಾಡಲಾಗಿದೆ. ಎಸ್.ಬಿ.ಎಂ.2 ರಡಿ 37 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಇದರಲ್ಲಿ 30 ಪ್ರಗತಿ, 7 ಮುಕ್ತಾಯವಾಗಿವೆ. ಇದರಲ್ಲಿಯೇ ಘನತ್ಯಾಜ್ಯ ನಿರ್ವಹಣೆಯ 7 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದ್ದು ಸಂಗ್ರಹವಾಗಿರುವ 50656 ಟನ್ ಪಾರಂಪರಿಕ ತ್ಯಾಜ್ಯ ವಿಂಗಡಣೆಗೆ ಕ್ರಮ ವಹಿಸಲಾಗಿದೆ ಎಂದರು.  15ನೇ ಹಣಕಾಸು ಯೋಜನೆ ಅನಿರ್ಬಂಧಿತ ನಿಧಿಯಡಿ 2023-24 ರಲ್ಲಿ 3.32 ಕೋಟಿಯಲ್ಲಿ 93 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ ಇನ್ನೂ ಕೆಲವು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. 2024-25 ರಲ್ಲಿ 3.5 ಕೋಟಿಯಲ್ಲಿ 98 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದ್ದು 48 ಕಾಮಗಾರಿಗಳು ಮಾತ್ರ ಪ್ರಾರಂಭವಾಗಿವೆ.  ಕಾಮಗಾರಿಗಳ ಪ್ರಗತಿಯಲ್ಲಿ ಕುಂಠಿತವಾಗಿದ್ದು ಇದಕ್ಕೆ ಇಂಜಿನಿಯರ್‌ಗಳ ಕೊರತೆ ಇದೆ. ಸಾಕಷ್ಟು ಅನುದಾನವಿದ್ದರೂ ಟೆಂಡರ್ ಪ್ರಕ್ರಿಯೆಗಳನ್ನು ನಡೆಸಲು ಸಾಧ್ಯವಾಗದಿರುವುದನ್ನು ಮನಗಂಡು ಲಭ್ಯವಿರುವ ಇಂಜಿನಿಯರ್‌ಗಳಿಂದ ಟೆಂಡರ್ ದಾಖಲೆಗಳನ್ನು ಸಿದ್ಧಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಆದಷ್ಟು ಶೀಘ್ರವಾಗಿ ಎಲ್ಲೆಲ್ಲಿ ಕಾಮಗಾರಿ ವಿಳಂಬವಾಗಿದೆ ಎಂಬುದನ್ನು ಪರಿಶೀಲನೆ ನಡೆಸಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ತಿಳಿಸಿದರು.  ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್ ಅವರು ಜಿಲ್ಲೆಯಲ್ಲಿನ ಸ್ಥಳೀಯ ಸಂಸ್ಥೆಗಳ ಪ್ರಗತಿ ವಿವರವನ್ನು ಸಭೆಗೆ ತಿಳಿಸಿದರು.  

Share This Article

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…