More

    ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹ

    ದಾವಣಗೆರೆ : ರಾಜ್ಯ ಸರ್ಕಾರಿ ನೌಕರರ ಸಂಘದ ಸಂಘಟನೆಯನ್ನು ದುರ್ಬಲಗೊಳಿಸಲು ಹುನ್ನಾರ ನಡೆಸಿರುವ 5 ಜನ ನೌಕರರು ಸತ್ಯಕ್ಕೆ ದೂರವಾದ ಆರೋಪ ಮಾಡಿರುವುದನ್ನು ಸಂಘದ ಜಿಲ್ಲಾ ಘಟಕ ಖಂಡಿಸಿದೆ.
     ಸಂಘದ ಜಿಲ್ಲಾ ಪದಾಧಿಕಾರಿಗಳು ಶುಕ್ರವಾರ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಅವರಿಗೆ ಮನವಿ ಸಲ್ಲಿಸಿ, ಸಂಘಟನೆಯ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲು ಆಗ್ರಹಿಸಿದರು.
     ಸಂಘವು ಕಳೆದ ನಾಲ್ಕು ವರ್ಷಗಳಲ್ಲಿ ನೌಕರರ ಸ್ನೇಹಿ ಕಾರ್ಯಗಳನ್ನು ಕೈಗೊಂಡಿದೆ. ಸಂಘಟನೆಯ ಪ್ರಯತ್ನದ ಫಲವಾಗಿ ನೌಕರರಿಗೆ ಸರ್ಕಾರದಿಂದ ಹಲವು ಆದೇಶಗಳಾಗಿವೆ. ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಕೈಗೊಂಡಿದೆ, ಸರ್ಕಾರಕ್ಕೆ ದೇಣಿಗೆಗಳನ್ನು ನೀಡಿದೆ ಎಂದು ತಿಳಿಸಿದರು.
     ರಾಷ್ಟ್ರದಲ್ಲಿಯೇ ಮಾದರಿಯಾಗಿರುವ ಈ ಸಂಘಟನೆಯ ಬಗ್ಗೆ ಆರೋಪಗಳನ್ನು ಮಾಡಿ ದೂರಿನ ಪ್ರತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಸಂಘಟನೆಯ ಘನತೆಗೆ ಮಸಿ ಬಳಿಯುವ ಕೆಲಸ ಮಾಡಿರುವುದು ವಿಷಾದನೀಯ ಎಂದು ಹೇಳಿದರು.
     ಸಂಘದ ಜಿಲ್ಲಾಧ್ಯಕ್ಷ ವೀರೇಶ್ ಎಸ್. ಒಡೇನಪುರ,  ಕಾರ್ಯದರ್ಶಿ ಸಿ. ಗುರುಮೂರ್ತಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಬಿ. ಪಾಲಾಕ್ಷಿ, ತಿಪ್ಪೇಸ್ವಾಮಿ, ಮಲ್ಲಿಕಾರ್ಜುನಯ್ಯ, ಸಿದ್ದಲಿಂಗಸ್ವಾಮಿ, ಕೆ.ಸಿ. ಪ್ರಮಿಳಾ, ಕಲ್ಪನಾ, ಮಂಜಮ್ಮ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts