ಕೆರೆಗಳನ್ನು ತುಂಬಿಸಲು ಮಾಸ್ಟರ್ ಪ್ಲಾೃನ್

ದಾವಣಗೆರೆ :  ಮಳೆಗಾಲದಲ್ಲಿ ಜಿಲ್ಲೆಯ ಎಲ್ಲ ಕೆರೆಗಳನ್ನು ತುಂಬಿಸಲು ಮಾಸ್ಟರ್ ಪ್ಲಾೃನ್ ರೂಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.  ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಗಳೂರು ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವುದು ಸೇರಿ ವಿವಿಧ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು. ಕೆಲವು ಕೆರೆಗಳಿಗೆ ನೀರು ಹೋಗಿದೆ. ಇನ್ನೂ ಕೆಲವು ಕಡೆ ಸಣ್ಣ ಪುಟ್ಟ ದುರಸ್ತಿಗಳಿವೆ, ಅದನ್ನು ಸರಿಪಡಿಸಲಾಗುವುದು ಎಂದು ತಿಳಿಸಿದರು.  ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಆರಂಭವಾಗಿವೆ. ಮನೆಗಳ ನಿರ್ಮಾಣ ಸೇರಿ ಜನರ ಅಗತ್ಯಗಳಿಗೆ ಸ್ಪಂದಿಸಲಾಗುವುದು. ಕುಡಿಯುವ ನೀರಿಗೆ ಆದ್ಯತೆ ಕೊಡಲಾಗುವುದು. ರೈತರಿಗೆ ಬೆಳೆ ವಿಮೆ ಸೌಲಭ್ಯ ತಲುಪುವಂತೆ ನೋಡಿಕೊಳ್ಳಲಾಗುವುದು. ಸ್ಮಾರ್ಟ್‌ಸಿಟಿಯ ಕೆಲವು ಕಾಮಗಾರಿಗಳು ಕಳಪೆಯಾಗಿದ್ದವು, ಅವುಗಳನ್ನು ಸರಿಪಡಿಸುತ್ತೇವೆ ಎಂದರು.  ಬಾತಿ ಕೆರೆಯಲ್ಲಿ ಚರಂಡಿ ನೀರು ಬಂದು ಸೇರುವುದನ್ನು ಪ್ರತ್ಯೇಕಿಸಿ ಶುದ್ಧ ನೀರು ದೊರೆಯುವಂತೆ ಮಾಡುವ ಯೋಜನೆ ಕೈಗೆತ್ತಿಕೊಳ್ಳಲಾಗುವುದು. ನಂತರ ಅಲ್ಲಿನ ಪರಿಸರದಲ್ಲಿ ಪೂರಕ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು ಎಂದು ತಿಳಿಸಿದರು.  ಮಳೆ ಚೆನ್ನಾಗಿ ಆಗುತ್ತಿದ್ದು ಬೆಳೆಗಳ ಪರಿಸ್ಥಿತಿ ಉತ್ತಮವಾಗಿದೆ. ಆರ್ಥಿಕತೆಯೂ ಸುಧಾರಣೆಯಾಗುತ್ತಿದೆ. ಮುಂಬರುವ ದಿನಗಳಲ್ಲಿ ದಾವಣಗೆರೆ ಉತ್ಸವ ಮಾಡಿ ಚಿತ್ರ ನಟರನ್ನು ಕರೆಸೋಣ ಎಂದು ಹೇಳಿದರು.  ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಬಡವರಿಗೆ ತಲುಪಿಸಲಾಗುತ್ತಿದೆ. ಮಾಧ್ಯಮಗಳಲ್ಲಿ ಬರುತ್ತಿರುವಂತೆ ಯಾವುದೇ ಬದಲಾವಣೆ ಇಲ್ಲ. ಎಲ್ಲ ಅರ್ಹರಿಗೂ ಯೋಜನೆಗಳು ತಲುಪಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ತಿಳಿಸಿದರು.  ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಮೇಯರ್ ವಿನಾಯಕ ಪೈಲ್ವಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿ.ಪಂ. ಸಿಇಒ ಸುರೇಶ ಬಿ. ಇಟ್ನಾಳ್, ಎಸ್ಪಿ ಉಮಾ ಪ್ರಶಾಂತ್ ಇದ್ದರು.  …  (ಬಾಕ್ಸ್)  ಸಿದ್ದೇಶ್ವರ ವಿರುದ್ಧ ವಾಗ್ದಾಳಿ  ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಟೂರಿಂಗ್ ಟಾಕೀಸ್‌ನಲ್ಲಿ ಟಿಕೆಟ್ ಹರಿಯುತ್ತಿದ್ದರು. ಬೆಂಗಳೂರಿಗೆ ಹೋಗಿ ರೀಲ್ ತರುತ್ತಿದ್ದರು. ಅಡಕೆ ಮಾರಾಟ ಮಾಡುತ್ತಿದ್ದರು ಎಂದು ಸಚಿವ ಮಲ್ಲಿಕಾರ್ಜುನ್ ವಾಗ್ದಾಳಿ ನಡೆಸಿದರು.  ಎಸ್.ಎ. ರವೀಂದ್ರನಾಥ್ ಬಿಜೆಪಿಗಾಗಿ ಜೀವವನ್ನೇ ಮುಡಿಪಾಗಿಟ್ಟವರು. ಅವರೊಂದಿಗೆ ಕಿಣಿ, ಶಂಕರ ನಾರಾಯಣ, ಸೋಮನಾಥ್ ಅವರಂಥ ಹಿರಿಯರು ಸಂಘಟನೆಗೆ ಶ್ರಮಿಸಿದ್ದರು. ಸಿದ್ದೇಶ್ವರ ಕೊಡುಗೆ ಏನೂ ಇಲ್ಲ ಎಂದು ಟೀಕಿಸಿದರು.  ರವೀಂದ್ರನಾಥ್ ನನಗೆ ಅಣ್ಣ ಆಗಬೇಕು. ಅವರು ಮೊದಲಿನಿಂದಲೂ ಪರಿಚಯ. ಸಿಕ್ಕಾಗ ವಿಶ್ವಾಸದಲ್ಲಿ ಮಾತನಾಡಿದರೆ ತಪ್ಪೇನಿದೆ ಎಂದು ಪ್ರಶ್ನಿಸಿದರು.  …  ಭಾನುವಾರ ಭದ್ರಗೆ ಬಾಗಿನ  ಭದ್ರಾ ಜಲಾಶಯಕ್ಕೆ ಭಾನುವಾರ ಬಾಗಿನ ಅರ್ಪಿಸಲಾಗುವುದು ಎಂದು ಸಚಿವ ಮಲ್ಲಿಕಾರ್ಜುನ್ ತಿಳಿಸಿದರು.  ಜಿಲ್ಲೆಯ ಶಾಸಕರು, ರೈತ ಮುಖಂಡರು ಭಾಗವಹಿಸಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಬಾಗಿನ ಸಲ್ಲಿಸಲಾಗುವುದು ಎಂದು ಹೇಳಿದರು. ಜಲಾಶಯದಲ್ಲಿ ಒಳ ಹರಿವು, ಹೊರ ಹರಿವಿಗೆ ತಕ್ಕಂತೆ ನೀರಿನ ನಿರ್ವಹಣೆ ಮಾಡಲಾಗುತ್ತಿದೆ. ಡ್ಯಾಮ್‌ಗೆ ಭೇಟಿ ನೀಡಿದಾಗ ಪರಿಶೀಲನೆ ನಡೆಸಲಾಗುವುದು ಎಂದರು.  …    

Share This Article

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…

ನಿಮ್ಮ ಅಂಗೈನಲ್ಲಿ ಮೀನಿನ ಚಿಹ್ನೆ ಇದ್ರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

30 ದಿನಗಳಲ್ಲೇ ಸ್ಲಿಮ್ ಆ್ಯಂಡ್​ ಫಿಟ್​ ಆಗಬೇಕಾ? ಪ್ರತಿದಿನ ಇಡ್ಲಿ ತಿನ್ನಿ

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…