ದಾವಣಗೆರೆ : ರಾಜ್ಯದ ರೈತರಿಗೆ ಈಗಿರುವ 7 ಗಂಟೆಗಿಂತ ಹೆಚ್ಚು ವಿದ್ಯುತ್ ಸಂಪರ್ಕ ಕಲ್ಪಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ‘ಕುಸುಮ್ ಸಿ’ ಮೂಲಕ ಹೆಚ್ಚಿನ ವಿದ್ಯುತ್ ಉತ್ಪಾದನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ರೈತರಿಗೆ ಈಗಿರುವ 7 ಗಂಟೆಗಿಂತ ಹೆಚ್ಚು ವಿದ್ಯುತ್ ಕಲ್ಪಿಸಲಾಗುವುದು ಎಂದರು. ರೈತರು ಹೊಲಗಳಲ್ಲಿ ನಿರ್ಮಿಸಿರುವ ಮನೆಗಳಿಗೂ ಸಹ ನಿರಂತರ ಜ್ಯೋತಿ ಮೂಲಕ ಸಿಂಗಲ್ ಫೇಸ್ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ, ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮೋಟಾರ್‌ಗೆ ಬಳಸಿಕೊಳ್ಳಬಾರದೆಂದ ಅವರು, ಶೀಘ್ರದಲ್ಲೇ 4 ಲಕ್ಷಕ್ಕೂ ಹೆಚ್ಚು ಅಕ್ರಮ ವಿದ್ಯುತ್ ಸಂಪರ್ಕವನ್ನು ಸಕ್ರಮಗೊಳಿಸಲಾಗುವುದು ಎಂದು ತಿಳಿಸಿದರು. ಪಾವಗಡ ಬಳಿ ಈಗಾಗಲೇ 10 ಸಾವಿರ ಎಕರೆಯಲ್ಲಿ ಸೋಲಾರ್ ಸಿಸ್ಟಮ್ ಮೂಲಕ ವಿದ್ಯುತ್ ಉತ್ಪಾದಿಸಲಾಗುತ್ತಿದ್ದು, ಇನ್ನು 10 ಸಾವಿರ ಎಕರೆಯಲ್ಲಿ ವಿದ್ಯುತ್ ಉತ್ಪಾದನೆಗೆ ಈಗಾಗಲೇ ಕ್ರಮ ಕೈಗೊಂಡಿದ್ದು ರೈತರು ಸಹ ಮುಂದೆ ಬಂದಿದ್ದಾರೆ. ರೈತರಾಗಲಿ, ಸಾರ್ವಜನಿಕರಾಗಲಿ ಅಕ್ರಮ ವಿದ್ಯುತ್ ಬಳಸಿಕೊಳ್ಳಬಾರದೆಂದು ಎಚ್ಚರಿಕೆ ನೀಡಿದರು. ನಾನು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ, ಯುವ ಕಾಂಗ್ರೆಸ್ ಕಾರ್ಯಕರ್ತನಾಗಿ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಸಚಿವನಾಗಿ ಅನೇಕ ಖಾತೆಗಳ ಜವಾಬ್ದಾರಿ ನಿಭಾಯಿಸಿದ್ದೇನೆ. ಕಾಂಗ್ರೆಸ್ ಇತಿಹಾಸವೆಂದರೆ ದೇಶದ ಚರಿತ್ರೆಯಾಗಿದ್ದು, ಪಕ್ಷ ನಿಷ್ಠೆಯಿಂದ ಕಾರ್ಯ ನಿರ್ವಹಿಸುವಂತೆ ಕಾರ್ಯಕರ್ತರಿಗೆ ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ, ಕೆಪಿಸಿಸಿ ಸದಸ್ಯ ಮುದೇಗೌಡ್ರು ಗಿರೀಶ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಕೊಡಪಾನ ದಾದಾಪೀರ್ ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ‌್ಯದರ್ಶಿ ಡಿ.ಬಸವರಾಜ್, ಹರಿಹರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸುರೇಂದ್ರ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ‌್ಯದರ್ಶಿಗಳಾದ ಎಸ್.ಮಲ್ಲಿಕಾರ್ಜುನ್, ಎಲ್.ಎಚ್. ಸಾಗರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಮೇಯರ್ ಕೆ.ಚಮನ್ ಸಾಬ್, ಸುಭಾನ್ ಸಾಬ್, ಪಕ್ಷದ ವಿವಿಧ ಘಟಕಗಳ, ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.
ರೈತರಿಗೆ 7 ಗಂಟೆಗಿಂತ ಹೆಚ್ಚು ವಿದ್ಯುತ್ ನೀಡಲು ಸಿದ್ಧತೆ

You Might Also Like
ನೀವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಒಮ್ಮೆ ಹೀಗೆ ಮಾಡಿ ನೋಡಿ..Gastric Problem
Gastric Problem: ಪ್ರಸ್ತುತ ಯುಗದಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಅನೇಕ ಜನರನ್ನು ಕಾಡುವ ಆರೋಗ್ಯ ಸಮಸ್ಯೆಯಾಗಿದೆ. ಅನಾರೋಗ್ಯಕರ…
ನಡೆಯುವಾಗ ನಿಮಗೆ ಈ ಸಮಸ್ಯೆಗಳು ಕಾಡುತ್ತಿವೆಯೇ? ಸಕ್ಕರೆ ಕಾಯಿಲೆಯ ಲಕ್ಷಣ ಇರಬಹುದು ಎಚ್ಚರ! Walking
Walking : ಇತ್ತೀಚಿನ ದಿನಗಳಲ್ಲಿ ಮಧುಮೇಹ ಕಾಯಿಲೆ ಹೆಚ್ಚಾಗಿ ಕಂಡುಬರುತ್ತಿದೆ. ವಯಸ್ಸಿನ ಹೊರತಾಗಿಯೂ, ಚಿಕ್ಕವರಿಂದ ಹಿಡಿದು…
ಚಾಣಕ್ಯನ ಪ್ರಕಾರ ನಿಮಗೆ ಈ 4 ಸಂಗತಿ ಗೊತ್ತಿದ್ದರೆ ಯಾರಿಂದಲೂ ನಿಮ್ಮನ್ನು ಸೋಲಿಸಲು ಸಾಧ್ಯವಿಲ್ಲ! Chanakya Niti
Chanakya Niti : ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ…