More

    ಆತಂಕ ಬೇಡ, ಬಿತ್ತನೆ ಕಾರ್ಯಕ್ಕೆ ಮುಂದಾಗಿ

    ದಾವಣಗೆರೆ : ಪ್ರಕೃತಿಯ ವೈಪರೀತ್ಯದಿಂದಾಗಿ ಮುಂಗಾರು ತಡವಾಗಿ ಆರಂಭವಾಗಿದ್ದು, ಉತ್ತಮ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ರೈತರು ಬಿತ್ತನೆ ಕಾರ‌್ಯವನ್ನು ಮುಂಬರುವ ದಿನಗಳಲ್ಲಿ ಚುರುಕು ಗೊಳಿಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
     ಮೇ ಕೊನೆಯ ವಾರದಲ್ಲಿ ಮುಂಗಾರು ಆರಂಭವಾಗಬೇಕಿತ್ತು, ಜೂನ್ ಅಂತ್ಯಕ್ಕೆ ಶುರುವಾಗಿದೆ. ಕೃಷಿ ಇಲಾಖೆ ಅಭಿಪ್ರಾಯದಂತೆ ಜುಲೈ ವರೆಗೂ ಬಿತ್ತನೆ ಕಾರ‌್ಯ ಆರಂಭಿಸಬಹುದಾಗಿದೆ. ರೈತರಿಗೆ ತೊಂದರೆ ಆಗದಂತೆ ಅಗತ್ಯ ಇರುವಷ್ಟು ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಇದೆ. ಬೇಡಿಕೆಗೆ ಅನುಗುಣವಾಗಿ ವಿತರಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
     ಈಗಾಗಲೇ ಕೆಲವು ಭಾಗಗಳಲ್ಲಿ ರೈತರು ಬಿತ್ತನೆ ಮಾಡಿದ್ದು, ಅದು ಚುರುಕಾಗಬೇಕಿದೆ. ಬಿತ್ತನೆ ಬೀಜ, ರಸಗೊಬ್ಬರಗಳ ದಾಸ್ತಾನು ಇರುವುದರಿಂದ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದ್ದಾರೆ.
     ಪ್ರಸಕ್ತ ವರ್ಷದಲ್ಲಿ ಎರಡೂವರೆ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮುಂಗಾರು ಹಂಗಾಮಿನ ಕೃಷಿ ಬಿತ್ತನೆ ಗುರಿ ಹೊಂದಲಾಗಿದ್ದು, ಈವರೆಗೆ ಕೇವಲ 1 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಸಾಧನೆಯಾಗಿದೆ. 47,772 ಕ್ವಿಂಟಾಲ್ ಬಿತ್ತನೆ ಬೀಜ ಇದ್ದು, ಈಗಾಗಲೇ 5,748 ಕ್ವಿಂಟಾಲ್ ವಿತರಣೆ ಮಾಡಲಾಗಿದೆ. ಇನ್ನೂ 37,024 ಟನ್ ಬಿತ್ತನೆ ಬೀಜ ಇದೆ. ಅದೇ ರೀತಿ 1,54,962 ಟನ್ ರಸಗೊಬ್ಬರದ ಅವಶ್ಯಕತೆ ಇದೆ. ಜೂನ್ ತಿಂಗಳಿಗೆ 29480 ಟನ್ ಬೇಕಾಗಿದೆ. ಜಿಲ್ಲೆಯಲ್ಲಿ 42089 ಟನ್ ರಸಗೊಬ್ಬರ ದಾಸ್ತಾನು ಇದೆ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts