More

    ಜಲಸಿರಿ, ಸ್ಮಾರ್ಟ್ ಸಿಟಿ ಕಾಮಗಾರಿಗಳ ಗುಣಮಟ್ಟ ಪರಿಶೀಲನೆ

    ದಾವಣಗೆರೆ : ದಾವಣಗೆರೆ ಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ನೈಜತೆ ಮತ್ತು ಗುಣಮಟ್ಟ ಪರಿಶೀಲನೆಯನ್ನು ಪಾಲಿಕೆ ಮೇಯರ್ ಮತ್ತು ಸದಸ್ಯರು ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸೂಚನೆ ನೀಡಿದರು.
     ಜಿಲ್ಲಾಡಳಿತ ಭವನದಲ್ಲಿ ಶನಿವಾರ, ಜಿಲ್ಲಾಧಿಕಾರಿ, ಸ್ಮಾರ್ಟ್‌ಸಿಟಿ, ಮಹಾನಗರ ಪಾಲಿಕೆ, ಜಲಸಿರಿ ಯೋಜನೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
     ನಗರವನ್ನು ಸುಂದರವಾಗಿಸಲು ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಸ್ಮಾರ್ಟ್‌ಸಿಟಿ ಯೋಜನೆಯನ್ನು ಜಾರಿಗೊಳಿಸಿದ್ದು ಅಧಿಕಾರಿಗಳು ಮನಸೋ ಇಚ್ಛೆ ಕಾಮಗಾರಿಗಳನ್ನು ತೆಗೆದುಕೊಂಡು ಅನ್ಯ ಉದ್ದೇಶಗಳಿಗೆ ಯೋಜನೆ ಬಳಸಿದ್ದಾರೆ. ಕೆಲವು ಕಡೆ ತೀರಾ ಸಣ್ಣ ಸಣ್ಣ ಕಾಮಗಾರಿಗಳನ್ನು ತೆಗೆದುಕೊಂಡಿರುವುದು ಕಂಡು ಬಂದಿದೆ. ಇದೆಲ್ಲವನ್ನೂ ಸ್ಥಳ ಪರಿಶೀಲನೆ ಮಾಡಿ ವರದಿ ನೀಡಲು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.
     ಸ್ಮಾರ್ಟ್‌ಸಿಟಿ ಯೋಜನೆಯಡಿ ಮೂಲ ಸೌಕರ್ಯ, ಆರೋಗ್ಯ, ಸಾರಿಗೆ, ರಸ್ತೆ, ಮಾಹಿತಿ ತಂತ್ರಜ್ಞಾನ ವಲಯ ಸೇರಿ 14 ವಿವಿಧ ವಲಯಗಳಲ್ಲಿ ಒಟ್ಟು 114 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಇದುವರೆಗೆ 882 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಎಷ್ಟು ಬಿಲ್‌ಗಳನ್ನು ಪಾವತಿಸಲಾಗಿದೆ, ಉಳಿಕೆ ಎಷ್ಟಿದೆ ಎಂಬ ಸಂಪೂರ್ಣ ವಿವರವನ್ನು ನೀಡಲು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts