ದಾವಣಗೆರೆ : ಸಂಪುಟ ಪುನಾರಚನೆ ಮಾಡುವುದಾದರೆ 8- 10 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎರಡು ವರ್ಷದ ಸಾಧನಾ ಸಮಾವೇಶ ಮಾಡುತ್ತಿದೇವೆ. ಆದರೆ ಕೆಲ ಸಚಿವರು ಏನೂ ಸಾಧನೆ ಮಾಡಿಲ್ಲ. ಹೊಸದಾಗಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕೆಲಸ ಮಾಡುತ್ತಾರೆ. ಹಳಬರಿಗೆ ಸಚಿವ ಸ್ಥಾನಕ್ಕೆ ಕೋಕ್ ಕೊಟ್ಟರೆ ಒಳ್ಳೆಯದು. ಹಳಬರು ಅಧಿಕಾರ ಅನುಭವಿಸಿ ಜಿಡ್ಡು ಹಿಡಿದು ಹೋಗಿದ್ದಾರೆ ಎಂದರು. ‘ನಾನು ಸನ್ಯಾಸಿ ಅಲ್ಲ, ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ. ಏನು ಕೆಲಸ ಮಾಡುತ್ತೇನೆ ಎಂದು ಆರು ತಿಂಗಳ ಬಾಂಡ್ ಬೇಕಾದರೆ ಕೊಡುತ್ತೇನೆ. ಜಿಲ್ಲೆಯಲ್ಲಿ ಶಾಸಕ ಡಿ.ಜಿ. ಶಾಂತನಗೌಡ್ರು ಹಿರಿಯ ರಾಜಕಾರಣಿಯಾಗಿದ್ದು ಅವರಿಗೆ ಕೊಟ್ಟರೆ ನಾನು ಖುಷಿ ಪಡುತ್ತೇನೆ. ಒಂದು ಜಿಲ್ಲೆಗೆ ಎರಡು ಸಚಿವ ಸ್ಥಾನ ಕೊಡಬಾರದು ಅಂತ ಏನಾದಾರೂ ಇದೆಯೆ’ ಎಂದು ಪ್ರಶ್ನಿಸಿದರು. ಪಕ್ಷದ ಹೈಕಮಾಂಡ್ ಈಗಿನ ಸಚಿವರ ರಿಪೋರ್ಟ್ ನೋಡಿ ಕೆಲವರನ್ನು ಕೈ ಬಿಡಬೇಕು. 5 ರಿಂದ 6 ಬಾರಿ ಗೆದ್ದ ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿಲ್ಲ, ಅವರಿಗೂ ಸಿಗಲಿ ಎಂದು ಅಭಿಪ್ರಾಯಪಟ್ಟರು. ಎರಡೂವರೆ ವರ್ಷ ಅಧಿಕಾರ ಹಂಚಿಕೆ ವಿಚಾರ ಈಗ ಮಾತನಾಡುವುದು ಬೇಡ. ಉತ್ತಮ ಮುಖ್ಯಮಂತ್ರಿ ಇದ್ದಾರೆ, ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಮಳೆ-ಬೆಳೆ ಚೆನ್ನಾಗಿದೆ ಎಂದು ಪ್ರತಿಕ್ರಿಯೆ ನೀಡಿದರು. ಮರು ಜಾತಿ ಗಣತಿ ಮಾಡುವ ನಿರ್ಧಾರ ಸ್ವಾಗತಾರ್ಹ. ಈಗ ಮಾಡಿರುವ ಜಾತಿ ಗಣತಿ ವ್ಯವಸ್ಥಿತವಾಗಿಲ್ಲ ಎಂದು ಹಿಂದಿನಿಂದಲೂ ಹೇಳುತ್ತಿದ್ದೇನೆ. ಹಳೆಯ ವರದಿಯಲ್ಲಿ 60 ಸಾವಿರ ಲಿಂಗಾಯತರು ಇದ್ದಾರೆ ಎಂದು ಹೇಳಲಾಗಿತ್ತು. ನಮ್ಮ ಕ್ಷೇತ್ರದಲ್ಲಿ ಸಮೀಕ್ಷೆ ಮಾಡಿಸಿದ್ದೇನೆ. ಸಮಯ ಬಂದಾಗ ಹೇಳುತ್ತೇನೆ. ಎಸ್‌ಸಿ ಒಳ ಮೀಸಲಾತಿ ವ್ಯವಸ್ಥಿತ ರೀತಿಯಲ್ಲಿ ಮಾಡುತ್ತಿದ್ದಾರೆ, ಇದನ್ನೂ ಅದೇ ರೀತಿ ಮಾಡಲಿ ಎಂದು ಆಗ್ರಹಿಸಿದರು.
ಸಂಪುಟದಲ್ಲಿ ಹೊಸಬರಿಗೆ ನೀಡಿ ಅವಕಾಶ

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar
Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…
ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits
Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…