ದಾವಣಗೆರೆ : ವಿಶಿಷ್ಟ ವ್ಯಕ್ತಿತ್ವದ ಪ್ರಧಾನಿ ನರೇಂದ್ರ ಮೋದಿ ಅವರು ಸವಾಲುಗಳನ್ನು ಪರಿಹರಿಸುವ ಸರದಾರ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ಹೇಳಿದರು. ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಮಂಗಳವಾರ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಿ ಮಾತನಾಡಿದರು. ಅವರು ದಕ್ಷ ಆಡಳಿತಗಾರ, ಸ್ಪಂದನಶೀಲ ಪ್ರಧಾನಿಯಾಗಿದ್ದಾರೆ ಎಂದು ಬಣ್ಣಿಸಿದರು. ಕಳೆದ 10 ವರ್ಷಗಳ ಆಡಳಿತಾವಧಿಯಲ್ಲಿ ರೈತ, ಗೃಹಿಣಿ, ಕಾರ್ಮಿಕ, ವ್ಯಾಪಾರಿ, ವಿಜ್ಞಾನಿ, ವೈದ್ಯ ಸೇರಿ ಎಲ್ಲ ವರ್ಗದ ಜನರು ನೆಮ್ಮದಿಯ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು. ಜಿಲ್ಲಾ ಬಿಜೆಪಿ ವಕ್ತಾರ ಕೊಳೇನಹಳ್ಳಿ ಬಿ.ಎಂ. ಸತೀಶ್ ಮಾತನಾಡಿ, ಆಡು ಮುಟ್ಟದ ಸೊಪ್ಪಿಲ್ಲ, ನರೇಂದ್ರ ಮೋದಿ ಅವರು ಸಮಾಜದಲ್ಲಿ ಮುಟ್ಟದ ರಂಗಗಳಿಲ್ಲ. ರೈತರಿಗೆ ಕಿಸಾನ್ ಸಮ್ಮಾನ್, ಪ್ರಧಾನ ಮಂತ್ರಿ ಜನಧನ್ ಯೋಜನೆ, ತೆರಿಗೆ ವ್ಯವಸ್ಥೆ ಸುಧಾರಣೆಗೆ ಒಂದು ದೇಶ ಒಂದು ತೆರಿಗೆ ಎಂಬ ವಿನೂತನ ಸಂಕಲ್ಪದೊಂದಿಗೆ ಜಿ.ಎಸ್.ಟಿ ಜಾರಿ ಮಾಡಿದರು ಎಂದು ಮೋದಿ ಅವರ ಸಾಧನೆಗಳ ವಿವರ ನೀಡಿದರು. ಜಿಲ್ಲಾಸ್ಪತ್ರೆ ಅಧೀಕ್ಷಕ ಡಾ.ಎಂ.ಬಿ. ನಾಗೇಂದ್ರಪ್ಪ, ಬಿಜೆಪಿ ರೈತ ಮೋರ್ಚಾ ಮುಖಂಡ ಅಣಜಿ ಗುಡ್ಡೇಶ್, ಬಾತಿ ಬಿ.ಕೆ.ಶಿವಕುಮಾರ, ಅಣಬೇರು ಶಿವಪ್ರಕಾಶ, ಎನ್.ಎಚ್. ಹಾಲೇಶ್, ಟಿಂಕರ್ ಮಂಜಣ್ಣ, ಜಿಲ್ಲಾ ಮಾಧ್ಯಮ ಸಂಚಾಲಕ ಕೊಟ್ರೇಶಗೌಡ, ಎಸ್.ಒ.ಜಿ ಕಾಲನಿ ಅಂಜಿನಪ್ಪ ಮಾಳಿಗೇರ, ಸತೀಶ್, ಮಂಜುನಾಥ, ಪೋತಾಳ ಶ್ರೀನಿವಾಸ ಇದ್ದರು.
ಸವಾಲುಗಳನ್ನು ಪರಿಹರಿಸುವ ಸರದಾರ ಮೋದಿ
Bathing : ನೀರಿನಲ್ಲಿ ಇವುಗಳನ್ನು ಬೆರೆಸಿ ಸ್ನಾನ ಮಾಡಿದ್ರೆ ಸಾಕು ಅದೃಷ್ಟ ಖುಲಾಯಿಸುತ್ತದೆ…
ಬೆಂಗಳೂರು: ಪ್ರತಿದಿನ ಸ್ನಾನ ( Bathing ) ಮಾಡುವ ಅಭ್ಯಾಸವನ್ನು ಸಾಮಾನ್ಯವಾಗಿ ಎಲ್ಲರೂ ರೂಢಿಸಿಕೊಂಡಿರುತ್ತಾರೆ. ನೀವು…
ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…
ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach ) ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…
Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..
ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan) ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…