ದಾವಣಗೆರೆ : ಮಾಯಕೊಂಡದಲ್ಲಿರುವ ಹಿರೇ ಮದಕರಿ ನಾಯಕರ ಸ್ಮಾರಕದ ಜೀರ್ಣೋದ್ಧಾರಕ್ಕೆ 2 ಕೋಟಿ ರೂ. ಅನುದಾನ ನೀಡುವಂತೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಹಣ ಬಿಡುಗಡೆಯಾದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಇಲಾಖೆಯ ಸಹಾಯಕ ನಿರ್ದೇಶಕ ಎಲ್.ಪಿ. ಮಧು ಗೌಡ ತಿಳಿಸಿದ್ದಾರೆ.
‘ಪಾಳು ಬಿದ್ದ ಮದಕರಿ ನಾಯಕ ಸಮಾಧಿ’ ಶೀರ್ಷಿಕೆಯಡಿ ವಿಜಯವಾಣಿಯ ಮಂಗಳವಾರದ ಸಂಚಿಕೆಯಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಅವರು ಪ್ರಕಟಣೆ ನೀಡಿದ್ದಾರೆ.
ಈ ಸ್ಮಾರಕವು ರಾಜ್ಯ ಪುರಾತತ್ವ ಇಲಾಖೆ ಸುಪರ್ದಿಯಲ್ಲಿದೆ. ಇದು ಪ್ರವಾಸಿ ತಾಣವಾಗಿದ್ದು ಕಳೆದ ವರ್ಷ ಹೆಚ್ಚಿನ ಮಳೆಯಾಗಿ ತಡೆಗೋಡೆ ಕುಸಿದಿತ್ತು. ಈ ಹಿನ್ನೆಲೆಯಲ್ಲಿ 2023ರ ಜುಲೈ 24 ರಂದು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿಗೆ ವರದಿ ನೀಡಿದ್ದಾರೆ.
ಈ ಸ್ಮಾರಕದ ಸ್ಥಿತಿಗತಿ ಕುರಿತು ಮೈಸೂರಿನ ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಆಯುಕ್ತರಿಗೆ ತಿಳಿಸಿ, ಜೀರ್ಣೋದ್ಧಾರ ಗೊಳಿಸುವಂತೆ ಕೋರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸ್ಮಾರಕ ಜೀರ್ಣೋದ್ಧಾರಕ್ಕೆ ಪ್ರಸ್ತಾವನೆ ಸಲ್ಲಿಕೆ
ಈ ಕಾಯಿಲೆಯಿಂದ ಬಳಲುತ್ತಿರುವವರು ಸಿಹಿ ಗೆಣಸಿನಿಂದ ದೂರವಿರಿ; ಇಲ್ಲಿದೆ ಹೆಲ್ತಿ ಮಾಹಿತಿ | Health Tips
ಸಿಹಿ ಗೆಣಸು ಯಾರಿಗೆ ಇಷ್ಟವಿರುವುದಿಲ್ಲ ಹೇಳಿ. ರುಚಿಕರವಾದ ಸಿಹಿಗೆಣಸನ್ನು ಶೀತ ಋತುವಿನಲ್ಲಿ ಕಂಡುಬರುವ ಬೇರು ತರಕಾರಿ…
ಗಿಡಗಳನ್ನು ಹಸಿರಾಗಿಡಲು ಕಡಲೆಕಾಯಿ ಸಿಪ್ಪೆ ಪ್ರಯೋಜನಕಾರಿ; ಇಲ್ಲಿದೆ ಬಳಸುವ ವಿಧಾನ | Tips
ಚಳಿಗಾಲದಲ್ಲಿ ಸಸ್ಯಗಳಿಗೆ ಹೆಚ್ಚಿನ ಕಾಳಜಿ ಬೇಕು. ಏಕೆಂದರೆ ತಂಪಾದ ಗಾಳಿ ಮತ್ತು ಇಬ್ಬನಿಯಿಂದ ತೇವಾಂಶವು ಹೆಚ್ಚಾಗುವುದರಿಂದ…
Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?
ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…