ದಾವಣಗೆರೆ : ಭೂಮಿಕ ನಗರದಿಂದ ರಾಮನಗರಕ್ಕೆ ಸಾಗುವ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವ ಕೆಳ ಸೇತುವೆಯಿಂದ ಹಲವಾರು ಅಪಘಾತ ಹಾಗೂ ಸಂಚಾರ ದಟ್ಟಣೆಗೆ ಕಾರಣವಾಗಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಆಗ್ರಹಿಸಿದರು. ಸಂಸತ್ತಿನಲ್ಲಿ ಅವರು ಈ ಕುರಿತು ಸರ್ಕಾರದ ಗಮನ ಸೆಳೆದಿದ್ದಾರೆ. ಈ ಸೇತುವೆಯು ಕಿರಿದಾಗಿದ್ದು ರಾಜ್ಯ ಸಾರಿಗೆ ಸಂಸ್ಥೆಯ ಡಿಪೋಗೆ ಹೋಗುವ ಭಾರೀ ವಾಹನಗಳು ಮತ್ತು ಆಸ್ಪತ್ರೆಯ ಆಂಬುಲೆನ್ಸ್‌ಗಳು, ಇತರೆ ಭಾರೀ ವಾಹನಗಳು ಸಂಚರಿಸುತ್ತವೆ. ಈ ಸೇತುವೆಯು ಅನೇಕ ಅವಘಡಗಳಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಪ್ರಭಾ ಮಲ್ಲಿಕಾರ್ಜುನ್ ಅವರು ಪೊಲೀಸ್ ಇಲಾಖೆ, ರಾಜ್ಯ ರಸ್ತೆ ಸಾರಿಗೆ ನಿಗಮ, ಲೋಕೋಪಯೋಗಿ ಇಲಾಖೆ, ಇತರೆ ಇಲಾಖೆಗಳಿಂದ ಮಾಹಿತಿ ತರಿಸಿ ಈ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನಿಸಿದ್ದಾರೆ. ಶೀಘ್ರವೇ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಡುವಂತೆ ಒತ್ತಾಯಿಸಿದ್ದಾರೆ. … ಬಿಸಿಯೂಟ ತಯಾರಕರ ಗೌರವಧನ ಪಿಎಂ ಫೋಷಣ್ ಅಡಿಯಲ್ಲಿ ಅಡುಗೆ ಸಹಾಯಕರಿಗೆ ಗೌರವ ಧನವನ್ನು ನೀಡುತ್ತಿದ್ದು ಇದರಲ್ಲಿ ಕೇಂದ್ರವು ಶೇ. 60 ಹಾಗೂ ರಾಜ್ಯವು ಶೇ. 40 ರಷ್ಟು ಗೌರವಧನ ಭರಿಸಬೇಕಾಗಿದೆ. ಆರಂಭದಲ್ಲಿ ತಿಂಗಳಿಗೆ 1000 ರೂ. ಗೌರವಧನ ನೀಡುತ್ತಿದ್ದು ಇದರಲ್ಲಿ ಕೇಂದ್ರವು ಸರ್ಕಾರ 600 ರೂ. ಹಾಗೂ ರಾಜ್ಯ ಸರ್ಕಾರದ 400 ರೂ.ಗಳು ಸೇರಿವೆ. ರಾಜ್ಯ ಸರ್ಕಾರವು ಹಂತ ಹಂತವಾಗಿ ಗೌರವ ಧನವನ್ನು ಹೆಚ್ಚಿಸಿದ್ದು ರಾಜ್ಯ ಸರ್ಕಾರದ ಪಾಲು ಪ್ರಸ್ತುತ 3000 ರೂ. ತಲುಪಿದೆ. ಆದರೆ ಕೇಂದ್ರ ಸರ್ಕಾರವು ಯೋಜನೆ ಪ್ರಾರಂಭ ಆದಾಗಿನಿಂದಲೂ 600 ರೂ. ಕೊಡುತ್ತಿದ್ದು ಹೆಚ್ಚಳ ಮಾಡಿಲ್ಲ. ಈ ಬಗ್ಗೆ ಹಣದುಬ್ಬರ, ಆರ್ಥಿಕ ಪರಿಸ್ಥಿತಿ, ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಉದಾಹರಣೆಯೊಂದಿಗೆ ಪ್ರಸ್ತಾಪಿಸಿದ ಡಾ. ಪ್ರಭಾ ಮಲ್ಲಿಕಾರ್ಜುನ್, ಕೇಂದ್ರದ ಶಿಕ್ಷಣ ಇಲಾಖೆಗೆ ಬಿಸಿಯೂಟ ತಯಾರಕರ ಕೇಂದ್ರದ ಪಾಲಿನ ಗೌರವಧನ ಹೆಚ್ಚಿಸಿ ಸಹಕರಿಸುವಂತೆ ಮನವಿ ಮಾಡಿದರು.
ಅವೈಜ್ಞಾನಿಕ ಸೇತುವೆಯಿಂದ ಅಪಘಾತ ಪರ್ಯಾಯ ವ್ಯವಸ್ಥೆಗೆ ಆಗ್ರಹ
ಗ್ಯಾಸ್ಗೆ ವಾಸನೆಯೇ ಇಲ್ಲ! ಹೀಗಿದ್ದರೂ ಸಿಲಿಂಡರ್ ಲೀಕ್ ಆಗ್ತಿದೆ ಅಂತ ತಿಳಿಸೋದು ಈ ಕೆಮಿಕಲ್ ಮಾತ್ರ | Gas Leakage
Gas Leakage: ಇಂದು ಪ್ರತಿಯೊಬ್ಬರ ಮನೆಯಲ್ಲಿಯೂ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳನ್ನು ಬಳಕೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ…
ಊಟದ ನಂತರ ಸಿಹಿ ತಿನ್ನುವುದು ಒಳ್ಳೆಯದೇ? ವೈದ್ಯರ ಸಲಹೆ..! sweet
sweet: ಸಿಹಿ ತಿಂಡಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ... ನಾಲಿಗೆ ಚಪ್ಪರಿಸಿ ಸಿಹಿ ತಿಂಡಿ…
astrology : ಈ ದಿನ ಉಗುರು, ಕೂದಲನ್ನು ಕತ್ತರಿಸಿದ್ರೆ ಕಾದಿದೆ ಸಂಕಷ್ಟ! ಈ ಕೆಲಸಕ್ಕೂ ಇದೆ ಒಳ್ಳೆಯ ದಿನ
astrology: ವಾರದ ಕೆಲವು ದಿನಗಳಲ್ಲಿ ಉಗುರುಗಳನ್ನು ಕತ್ತರಿಸುವುದು ಮತ್ತು ಕೂದಲನ್ನು ಕತ್ತರಿಸುವು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. …