ದಾವಣಗೆರೆ : ಭರಮಸಾಗರದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಸೋಮವಾರದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ದಾವಣಗೆರೆಯ ಡಿವೈಎಸ್ಪಿ ಆರ್.ಎಸ್. ಉಜ್ಜನಕೊಪ್ಪ ಮತ್ತು ತಂಡದವರು ವಚನ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಅಂದು ಸಂಜೆ 5 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಅವರು ಸಂಗೀತ ಸುಧೆಯನ್ನು ಉಣಬಡಿಸಲಿದ್ದಾರೆ. ಪೊಲೀಸ್ ಇಲಾಖೆಯಲ್ಲಿ 27 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಪ್ರವೃತ್ತಿಯಲ್ಲಿ ಇವರು ಹವ್ಯಾಸಿ ಗಾಯಕರಾಗಿದ್ದಾರೆ. 7 ಜನರ ತಂಡದೊಂದಿಗೆ ಮೈಸೂರು ದಸರಾ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಹಂಪಿ ಉತ್ಸವ ಸೇರಿದಂತೆ ವಿವಿಧೆಡೆ ಸಂಗೀತ ಕಾರ್ಯಕ್ರಮ ನೀಡಿದ್ದಾರೆ.
