More

    4ಕ್ಕೆ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ

    ದಾವಣಗೆರೆ : ಜಿಲ್ಲಾ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದಿಂದ ನಗರದ ಕುವೆಂಪು ಕನ್ನಡ ಭವನದಲ್ಲಿ ಸೆ.4ರಂದು ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಹಾಗೂ ವಿತರಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಜೆ. ವತನ್ ಹೇಳಿದರು.
     ಸೋಮವಾರ ಬೆಳಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ಅಧ್ಯಕ್ಷತೆ ವಹಿಸುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
      ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಸಹಾಯಕ ವಾರ್ತಾಧಿಕಾರಿ ಧನಂಜಯ್, ವಿಜಯವಾಣಿ ಸ್ಥಾನಿಕ ಸಂಪಾದಕ ಎಂ.ಬಿ. ನವೀನ್, ವಿವಿಧ ಪತ್ರಿಕೆಗಳ ಸ್ಥಾನಿಕ ಸಂಪಾದಕರಾದ ಎಂ.ಎಸ್. ವಿಕಾಸ್, ಸಿದ್ದಯ್ಯ ಹಿರೇಮಠ್, ಸದಾನಂದ ಹೆಗಡೆ, ನಾಗರಾಜ್ ಬಡದಾಳ್, ಮಂಜುನಾಥ್ ಗೌರಕ್ಕಳವರ್, ಬಿ.ಎನ್. ಮಲ್ಲೇಶ್, ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಏಕಬೋಟೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
     ನಗರದಲ್ಲಿ ಸುಮಾರು 230 ಜನ ಪತ್ರಿಕಾ ವಿತರಕರಿದ್ದು ಸುಮಾರು 40 ವರ್ಷಗಳಿಂದ ಮಳೆ, ಚಳಿ ಎನ್ನದೇ ನಿರಂತರ ಮನೆಮನೆಗೆ ಪತ್ರಿಕಾ ವಿತರಣೆ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ, ಸರ್ಕಾರ ಪತ್ರಿಕಾ ವಿತರಕರನ್ನು ಗುರುತಿಸಿ ಯಾವುದೇ ಮೂಲಸೌಲಭ್ಯ ಕಲ್ಪಿಸಿಲ್ಲ. ಹಲವಾರು ಜನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು ಸೂಕ್ತ ನಿವೇಶನ ಹಾಗೂ ವಸತಿ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದರು.
     ಪತ್ರಿಕಾ ವಿತರಕರಿಗೆ ಕುಳಿತುಕೊಳ್ಳಲು ಸೂಕ್ತ ಜಾಗದ ವ್ಯವಸ್ಥೆ ಮಾಡಬೇಕು. ಅಪಘಾತ ಮತ್ತು ಮರಣ ಹೊಂದಿದ ಸಂದರ್ಭದಲ್ಲಿ ವಿಮೆ ಹಾಗೂ ಕುಟುಂಬಕ್ಕೆ ಹಣಕಾಸು ವ್ಯವಸ್ಥೆ ಕಲ್ಪಿಸಬೇಕು. ಮಕ್ಕಳ ಶಿಕ್ಷಣದ ವೆಚ್ಚ ಭರಿಸಬೇಕು. ಪತ್ರಿಕಾ ವಿತರಣೆಗೆ ಸಾಲದ ರೂಪದಲ್ಲಿ ವಾಹನ ಸೌಲಭ್ಯ ಒದಗಿಸಬೇಕು. 60 ವರ್ಷದ ನಂತರ ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು.
     ಸಂಘದ ಅಧ್ಯಕ್ಷ ಎಚ್. ಚಂದ್ರು, ಗೌರವ ಸಲಹೆಗಾರ ಟಿ. ಕುಮಾರಸ್ವಾಮಿ, ಕೆ. ಅರುಣ್‌ಕುಮಾರ್, ಎಂ.ಬಿ. ಬಸವರಾಜ್, ಎ.ನಂದಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts