More

    ಅಪೌಷ್ಟಿಕತೆ ನಿವಾರಣೆಗೆ ಕ್ರಮ ಕೈಗೊಳ್ಳಲು ಸೂಚನೆ

    ದಾವಣಗೆರೆ : ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಕಂಡುಬಂದಲ್ಲಿ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಸೂಚನೆ ನೀಡಿದರು.
     ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಆಯೋಜಿಸಿದ್ದ ಅಪೌಷ್ಟಿಕ ಮಕ್ಕಳ ಆರೋಗ್ಯ ಸುಧಾರಣೆಗಾಗಿ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಅರಿವು ಮತ್ತು ಐಸಿಡಿಎಸ್ ಕಾರ್ಯಕ್ರಮ ಅನುಷ್ಠಾನ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರದಲ್ಲಿ ಮಾತನಾಡಿದರು.
     ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಪರೀಕ್ಷಿಸಿ, ಅವರ ಆರೋಗ್ಯ ಸುಧಾರಣೆಗೆ ಅಗತ್ಯವಿರುವ ಚಿಕಿತ್ಸೆ ಹಾಗೂ ಊಟ, ಔಷಧೋಪಚಾರ ನೀಡಬೇಕು. ತೂಕ, ವಯಸ್ಸು, ಎತ್ತರದ ಮಾನದಂಡಗಳನ್ನು ಇರಿಸಿಕೊಂಡು ಮಕ್ಕಳ ಪೌಷ್ಟಿಕತೆಯ ಮಟ್ಟವನ್ನು ನಿರ್ಧರಿಸಲಾಗುತ್ತದೆ. ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಸೇರಿ ಸಮೀಕ್ಷೆ ನಡೆಸಿ ಅಪೌಷ್ಟಿಕ ಮಕ್ಕಳನ್ನು ಗುರುತಿಸಿ, ಪೌಷ್ಟಿಕ ಆಹಾರವನ್ನು ನೀಡಬೇಕು ಎಂದರು.
     ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts