More

    ಅಭಿವೃದ್ಧಿ ಯೋಜನೆಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ

    ದಾವಣಗೆರೆ : ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಬಗ್ಗೆ ಆಗಬೇಕಿರುವ ಕ್ರಮಗಳ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸುವುದಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಹೇಳಿದರು.
     ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ ಮೊದಲ ಬಾರಿ ಜಿಲ್ಲೆಗೆ ಭೇಟಿ ನೀಡಿದ್ದ ಅವರು, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
     ಹೊಸ ಪ್ರಸ್ತಾವನೆಗಳಿರಲಿ, ಸರ್ಕಾರದ ಮಟ್ಟದಲ್ಲಿ ಬಾಕಿ ಇರುವ ಯೋಜನೆಗಳೇ ಆಗಿರಲಿ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
     ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್ ಮಾತನಾಡಿ, ಜಿಲ್ಲೆಯಲ್ಲಿ 155 ಅಪೌಷ್ಟಿಕ ಮಕ್ಕಳನ್ನು ಗುರುತಿಸಲಾಗಿದ್ದು ಪೌಷ್ಟಿಕತೆ ಪುನರ್ವಸತಿ ಕೇಂದ್ರಗಳಿಂದ ಅಗತ್ಯ ಆಹಾರ, ಆರೈಕೆ ನೀಡಲಾಗುತ್ತಿದೆ. 45 ಮಕ್ಕಳ ಆರೋಗ್ಯ ಸುಧಾರಣೆಯಾಗಿದೆ. ಹೆಚ್ಚುವರಿ ಎನ್‌ಆರ್‌ಸಿ ಕೇಂದ್ರಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಅಪೌಷ್ಟಿಕ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು, ಗರ್ಭಿಣಿಯರಲ್ಲಿ ಹಿಮೋಗ್ಲೋಬಿನ್ ಅಂಶ ಸರಿಯಾಗಿದೆಯೆ ಎಂಬುದನ್ನು ಕಾಲ ಕಾಲಕ್ಕೆ ತಪಾಸಣೆ ಮಾಡಬೇಕು ಎಂದು ಗುಂಜನ್ ಕೃಷ್ಣ ತಿಳಿಸಿದರು.
     ‘ಶಕ್ತಿ’ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ 28.97 ಲಕ್ಷ ಮಹಿಳೆಯರು ಪ್ರಯಾಣಿಸಿದ್ದು 7.55 ಕೋಟಿ ರೂ. ಆದಾಯ ಬಂದಿದೆ ಎಂದು ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಕ ಶ್ರೀನಿವಾಸ ಮೂರ್ತಿ ಮಾಹಿತಿ ನೀಡಿದರು.
     ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರಾಜ ಮಾತನಾಡಿ, ಜಿಲ್ಲೆಯಲ್ಲಿ ಡೆಂೆ ಮತ್ತು ಚಿಕುನ್‌ಗುನ್ಯಾ ಪ್ರಕರಣಗಳು ನಿಯಂತ್ರಣದಲ್ಲಿವೆ. 3 ವರ್ಷಗಳಿಂದ ಯಾವುದೇ ಮಲೇರಿಯಾ ಕೇಸ್ ಕಂಡುಬಂದಿಲ್ಲ. 7 ಜನ ತಜ್ಞ ವೈದ್ಯರ ಅಗತ್ಯವಿದೆ ಎಂದು ತಿಳಿಸಿದರು.
     ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್. ತಿಪ್ಪೇಶಪ್ಪ ಮಾತನಾಡಿ, ಜಿಲ್ಲೆಯಲ್ಲಿ 2026 ಶಾಲೆಗಳಿದ್ದು 2.34 ಲಕ್ಷ ಮಕ್ಕಳು ದಾಖಲಾಗಿದ್ದಾರೆ. ಪಠ್ಯಪುಸ್ತಕ, ಸಮವಸ್ತ್ರಗಳನ್ನು ಪೂರೈಸಲಾಗಿದೆ. 186 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಅಂಥ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.
     ಜಿ.ಪಂ. ಸಿಇಒ ಸುರೇಶ ಬಿ. ಇಟ್ನಾಳ್ ಮಾತನಾಡಿ, ಜಿಲ್ಲೆಯಲ್ಲಿ 140 ಘನ ತ್ಯಾಜ್ಯ ಸಂಸ್ಕರಣ ಘಟಕಗಳು ಪೂರ್ಣಗೊಂಡಿದ್ದು 47 ಪ್ರಗತಿಯಲ್ಲಿವೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜೂನ್ ಅಂತ್ಯಕ್ಕೆ 12.82 ಲಕ್ಷ ಮಾನವ ದಿನಗಳ ಗುರಿಯಿತ್ತು, 11,83 ಲಕ್ಷ (ಶೇ. 92.27) ಸಾಧನೆ ಮಾಡಲಾಗಿದೆ ಎಂದು ತಿಳಿಸಿದರು.
     ಕೃಷಿ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ ಚಿಂತಾಲ್ ಮಾತನಾಡಿ, ಕಳೆದ ವರ್ಷ 38 ಸಾವಿರ ರೈತರು ಬೆಳೆ ವಿಮೆ ಮಾಡಿಸಿದ್ದು 27 ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ. ಈ ವರ್ಷ ಇದುವರೆಗೆ 7 ಸಾವಿರ ಜನರು ಹೆಸರು ನೋಂದಾಯಿಸಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ 1.50 ಲಕ್ಷ ಫಲಾನುಭವಿಗಳಿದ್ದು ಇದುವರೆಗೆ ಅವರಿಗೆ 470 ಕೋಟಿ ರೂ. ಸಂದಾಯವಾಗಿದೆ ಎಂದು ಹೇಳಿದರು.
     ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರಾಘವೇಂದ್ರ ಪ್ರಸಾದ್ ಮಾತನಾಡಿ, ಕಳೆದ ವಷ 7500 ರೈತರು ಹವಾಮಾನ ಆಧಾರಿತ ಬೆಳೆ ವಿಮೆ ಮಾಡಿಸಿದ್ದರು, ಈ ವರ್ಷ ಇದುವರೆಗೆ 2500 ಜನರು ನೋಂದಣಿ ಮಾಡಿಸಿದ್ದಾರೆ ಎಂದು ತಿಳಿಸಿದರು.
     …
     ‘ಗೃಹಲಕ್ಷ್ಮೀ’ ಜಾರಿಗೆ ಸಿದ್ಧತೆ
     ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್ ಮಾತನಾಡಿ, ‘ಗೃಹಲಕ್ಷ್ಮೀ’ ಯೋಜನೆಯ ಅನುಷ್ಠಾನ ಸಂಬಂಧ ಜಿಲ್ಲೆಯ 195 ಗ್ರಾಮ ಒನ್ ಹಾಗೂ 8 ಕರ್ನಾಟಕ ಒನ್ ಕೇಂದ್ರಗಳ ಮೇಲ್ವಿಚಾರಣೆಗೆ, ಯೋಜನೆಯ ಲಾಭವನ್ನು ಸಾರ್ವಜನಿಕರಿಗೆ ತಲುಪಿಸುವುದಕ್ಕೆ ವ್ಯಾಪಕ ಪ್ರಚಾರ ಮಾಡಲು, ಕಾಲ ಕಾಲಕ್ಕೆ ಮಾಹಿತಿ ಹಾಗೂ ಪ್ರಗತಿ ವಿವರವನ್ನು ಮೇಲಧಿಕಾರಿಗಳಿಗೆ ನೀಡಲು ಪಿಡಿಒಗಳನ್ನು ಹಾಗೂ ಗ್ರಾಮ ಆಡಳಿತಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದರು.
     ಗೃಹಲಕ್ಷ್ಮೀ ಯೋಜನೆಯ ಅರ್ಜಿಗಳನ್ನು ಪರಿಶೀಲಿಸಿ ಮಂಜೂರಾತಿ ನೀಡಲು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು   ಮಂಜೂರಾತಿ ಪ್ರಾಧಿಕಾರಿಯನ್ನಾಗಿ ಪರಿಗಣಿಸಿ ಆದೇಶ ಹೊರಡಿಸಲಾಗಿದೆ. ಪ್ರಸ್ತುತ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಲು ಸೇವಾಸಿಂಧು ಪೋರ್ಟಲ್ ತಂತ್ರಾಂಶ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು.
     …
     (ಕೋಟ್)
     ಜಿಲ್ಲೆಯಲ್ಲಿ ಜೂನ್ ಅಂತ್ಯಕ್ಕೆ ಶೇ. 40ರಷ್ಟು ಮಳೆಯ ಕೊರತೆಯಿತ್ತು. ಈಗ ಪರಿಸ್ಥಿತಿ ಸುಧಾರಣೆಯಾಗಿದ್ದು ಶೇ. 29ರಷ್ಟಿದೆ. ಬಿತ್ತನೆ ಪ್ರಮಾಣವು ನಿಧಾನವಾಗಿ ಏರಿಕೆಯಾಗುತ್ತಿದೆ. ಒಟ್ಟು 464 ಕೆರೆಗಳಿದ್ದು 54 ಕೆರೆಗಳು ಈ ವರ್ಷ ಖಾಲಿಯಾಗಿವೆ. ಅಂತರ್ಜಲ ಮಟ್ಟ ಕಳೆದ ವರ್ಷಕ್ಕಿಂತ 4.14 ಮೀಟರ್‌ನಷ್ಟು ಕುಸಿದಿದೆ.
      ಶಿವಾನಂದ ಕಾಪಶಿ, ಜಿಲ್ಲಾಧಿಕಾರಿ
     …

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts