More

    ಪೆನ್‌ಡ್ರೈವ್ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಆಗ್ರಹ

    ದಾವಣಗೆರೆ : ಹಾಸನದ ಪೆನ್‌ಡ್ರೈವ್ ಪ್ರಕರಣ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ, ಸಂತ್ರಸ್ತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಜಿಲ್ಲಾ ಸಮಿತಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
     ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಮಿತಿ ಕಾರ್ಯಕರ್ತರು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದರು.
     ಸಂಘಟನೆ ಜಿಲ್ಲಾ ಕಾರ್ಯದರ್ಶಿ ಕೆ.ಭಾರತಿ ಮಾತನಾಡಿ, ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿದೆ. ಆದರೆ, ಇದು ಇಷ್ಟಕ್ಕೆ ನಿಲ್ಲಬಾರದು. ಪ್ರಕರಣ ಯಾವುದೇ ರಾಜಕೀಯ ಹಿತಾಸಕ್ತಿಗೆ ಬಳಕೆಯಾಗಬಾರದು ಎಂದು ಹೇಳಿದರು.
     ಪ್ರಕರಣದ ಆರೋಪಿಗಳು ಎಷ್ಟೇ ಪ್ರಭಾವಿತರಾಗಿದ್ದರೂ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಸಂತ್ರಸ್ತ ಹೆಣ್ಣುಮಕ್ಕಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
     ಸಂತ್ರಸ್ತೆಯರಿಗೆ ಸೂಕ್ತ ಭದ್ರತೆ ಹಾಗೂ ನ್ಯಾಯ ಒದಗಿಸಬೇಕು. ಆಪ್ತ ಸಮಾಲೋಚಕರನ್ನು ನೇಮಿಸಿ ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು. ಲೈಂಗಿಕ ದೌರ್ಜನ್ಯದ ದೃಶ್ಯಾವಳಿಯ ಪೆನ್‌ಡ್ರೈವ್ ಹರಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
     ಸಮಿತಿ ಜಿಲ್ಲಾಧ್ಯಕ್ಷೆ ಜ್ಯೋತಿ ಕುಕ್ಕವಾಡ, ಮಮತಾ, ರತ್ನಮಾಲಾ, ಅನಿತಾ, ಸರಸ್ವತಿ, ಶ್ವೇತಾ, ತಾರಾರಾಣಿ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts