More

    ಅತಿರೇಕದ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಅಗತ್ಯ

    ದಾವಣಗೆರೆ: ದೈನಂದಿನ ಚಟುವಟಿಕೆಗಳಲ್ಲಿ ಅತಿರೇಕದ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಬೇಕು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಡಾ. ಎಚ್. ಲಕ್ಷ್ಮೀಕಾಂತ ಸಲಹೆ ನೀಡಿದರು.
     ನಗರದ ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಶನಿವಾರ ಆಯೋಜಿಸಿದ್ದ ಹಸಿರು ಕ್ಯಾಂಪಸ್ ಕಾರ್ಯಗಾರದಲ್ಲಿ ಮಾತನಾಡಿದರು.
     ಪ್ಲಾಸ್ಟಿಕ್‌ನಿಂದ ಆಗುವ ಉಪಯೋಗ ಮತ್ತು ಅನಾನುಕೂಲಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.
     ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನಿವೃತ್ತ ಮುಖ್ಯ ಅಧಿಕಾರಿ ಎಂ.ಡಿ.ಎನ್ ಸಿಂಹ ಮಾತನಾಡಿ ಪ್ಲಾಸ್ಟಿಕ್ ಬಳಕೆಯಿಂದ ಆಗುತ್ತಿರುವ ಪರಿಸರ ನಾಶದ ಬಗ್ಗೆ ವಿವರಣೆ ನೀಡಿದರು.
     ಕಾರ್ಯಾಗಾರದಲ್ಲಿ ಪರಿಸರಕ್ಕೆ ಸಂಬಂಧಪಟ್ಟ ಕಾಯ್ದೆಗಳು ಮತ್ತು ಸರ್ಕಾರ ರೂಪಿಸಿರುವ ನೀತಿಗಳ ಬಗ್ಗೆ ತಿಳಿಸಿಕೊಡಲಾಯಿತು.
     ಪ್ರಾಚಾರ್ಯ ಡಾ. ಗಣೇಶ್ ಡಿ.ಬಿ. ಕಾರ್ಯಕ್ರಮ ಉದ್ಘಾಟಿಸಿದರು. ಸಲಹೆಗಾರ ಡಾ. ಮಂಜಪ್ಪ ಸಾರಥಿ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ರಾಹುಲ್ ಪಾಟೀಲ್, ಸಂಯೋಜಕ ಸುನೀಲ್ ಎಂ. ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts