More

    ದಾವಣಗೆರೆ ಜಿಲ್ಲೆಗೆ ಅತ್ಯುತ್ತಮ ತಂಡ ಪ್ರಶಸ್ತಿ

    ದಾವಣಗೆರೆ : ನಗರದಲ್ಲಿ ಸೋಮವಾರ ಮುಕ್ತಾಯವಾದ ವಲಯ ಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ದಾವಣಗೆರೆ ಜಿಲ್ಲೆ ಅತ್ಯುತ್ತಮ ತಂಡ ಪ್ರಶಸ್ತಿ ಪಡೆಯಿತು.
     ಪೊಲೀಸ್ ವಿಡಿಯೋಗ್ರಫಿ ಸ್ಪರ್ಧೆಯಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ಕಚೇರಿಯ ಅಜ್ಜಯ್ಯ ಎ. ಆರ್.ಎಸ್.ಐ ಪ್ರಥಮ ಸ್ಥಾನ ಪಡೆದರು. ಪೊಲೀಸ್ ಫೋಟೋಗ್ರಫಿ ಸ್ಪರ್ಧೆಯಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ಕಚೇರಿಯ ಪೊಲೀಸ್ ಕಾನ್ಸ್ಟೇಬಲ್ ಪ್ರಶಾಂತ ಕುಮಾರ ದ್ವಿತೀಯ ಸ್ಥಾನ ಗಳಿಸಿದರು.
     ಎರಡು ದಿನಗಳ ಕಾಲ ನಡೆದ ಕೂಟದಲ್ಲಿ ಪೂರ್ವ ವಲಯ ವ್ಯಾಪ್ತಿಯ ದಾವಣಗೆರೆ, ಚಿತ್ರದುರ್ಗ, ಹಾವೇರಿ, ಶಿವಮೊಗ್ಗ ಜಿಲ್ಲೆಗಳ 150 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
     ಸೋಮವಾರ ನಡೆದ ಸಮಾರೋಪ ಸಮಾರಂಭದಲ್ಲಿ ಪೂರ್ವ ವಲಯದ ಐಜಿಪಿ ಡಾ. ಕೆ. ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಹೆಚ್ಚುವರಿ ಎಸ್ಪಿ ವಿಜಯಕುಮಾರ್ ಎಂ. ಸಂತೋಷ ಇದ್ದರು.
     ಪೊಲೀಸ್ ಕರ್ತವ್ಯ ಕೂಟದ ನೋಡಲ್ ಅಧಿಕಾರಿ ಎ.ಕೆ. ರುದ್ರೇಶ್, ಡಿಎಆರ್ ಡಿವೈಎಸ್ಪಿ ಪಿ.ಬಿ. ಪ್ರಕಾಶ್, ದಾವಣಗೆರೆ ಆರ್‌ಎಫ್‌ಎಸ್‌ಎಲ್ನ ಉಪ ನಿರ್ದೇಶಕಿ ಡಾ. ಛಾಯಾ ಕುಮಾರಿ, ಸಿಬ್ಬಂದಿ ಪಾಲ್ಗೊಂಡಿದ್ದರು.
     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts