ಪೊಲೀಸರ ಆರೋಗ್ಯ ರಕ್ಷಣೆಗೆ ಆದ್ಯತೆ ಅಗತ್ಯ

blank

ದಾವಣಗೆರೆ : ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಪೊಲೀಸರು ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.  ಜಿಲ್ಲಾ ಪೊಲೀಸ್, ಪರ್ವತ ಲೈಫ್ ಕೇರ್ ಆ್ಯಂಡ್ ಆಚಾರ್ ಲ್ಯಾಬ್ಸ್, ಡಾ.ಅಗರ್‌ವಾಲ್ ಕಣ್ಣಿನ ಆಸ್ಪತ್ರೆ, ಶ್ರೀ ಸ್ವಾಮಿ ವಿವೇಕಾನಂದ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಗರದ ಪೊಲೀಸ್ ಕ್ವಾರ್ಟರ್ಸ್ ಆವರಣದಲ್ಲಿ ಶನಿವಾರ ಆಯೋಜಿಸಿದ್ದ, ರಕ್ತ ಪರೀಕ್ಷೆ, ಕಣ್ಣಿನ ತಪಾಸಣೆ ಹಾಗೂ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.  ಆರೋಗ್ಯವೇ ಭಾಗ್ಯ, ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ಕಾಯಿಲೆ ಬರದಂತೆ ಮುಂಜಾಗ್ರತೆ ವಹಿಸುವುದು ಸೂಕ್ತ. ಪರಿಸರ ಮಾಲಿನ್ಯ ಇನ್ನಿತರ ಕಾರಣಗಳಿಂದ ರೋಗ ನಿರೋಧಕ ಶಕ್ತಿಯು ಕಡಿಮೆಯಾಗಬಹುದು. ಆಗಾಗ ವೈದ್ಯಕೀಯ ತಪಾಸಣೆ ಮಾಡಿಸುವುದರಿಂದ ರೋಗವನ್ನು ಬೇಗನೆ ಪತ್ತೆ ಹಚ್ಚಿ ಆ ಸಮಸ್ಯೆಯಿಂದ ಬೇಗೆ ಹೊರ ಬರಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.  ಸ್ವಾಸ್ಥೃ ಕಾಪಾಡಿಕೊಳ್ಳುವುದರಿಂದ ವೃತ್ತಿಯಲ್ಲಿ ಕಾರ್ಯಕ್ಷಮತೆ ಹೆಚ್ಚಾಗುತ್ತದೆ. ಸಿಬ್ಬಂದಿ ಅಷ್ಟೇ ಅಲ್ಲದೆ ಅವರ ಕುಟುಂಬದ ಸದಸ್ಯರೂ ಆರೋಗ್ಯವಾಗಿರಬೇಕು. ಆದ್ದರಿಂದಲೇ ಈ ಶಿಬಿರ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು. ಮುಂಬರುವ ದಿನಗಳಲ್ಲಿ ಇನ್ನಷ್ಟು ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.  ಪರ್ವತ ಲೈಫ್ ಕೇರ್‌ನ ಡಾ.ಆರ್. ಮೋಹನ್ ಮಾತನಾಡಿ, ಉತ್ತಮ ಜೀವನ ಶೈಲಿ ಅನುಸರಿಸುವುದರಿಂದ ರೋಗಗಳು ಬರದಂತೆ ತಡೆಯಬಹುದು. ನಿಯಮಿತ ಪ್ರಮಾಣದಲ್ಲಿ ನೀರನ್ನು ಸೇವಿಸಬೇಕು. ಆಹಾರದಲ್ಲಿ ಉಪ್ಪು ಬಳಸುವುದನ್ನು ಕಡಿಮೆ ಮಾಡಬೇಕು. ಕಾಲ ಕಾಲಕ್ಕೆ ತಪಾಸಣೆ ಮಾಡಿಸಿಕೊಂಡು ನಮ್ಮ ಆರೋಗ್ಯದ ಸ್ಥಿತಿಯನ್ನು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.  ಕಿಡ್ನಿಯ ಆರೋಗ್ಯವನ್ನು ನಿರ್ಲಕ್ಷಿಸಬಾರದು. ರೋಗ ಲಕ್ಷಣಗಳ ಬಗ್ಗೆ ತಿಳಿದು ಸಕಾಲದಲ್ಲಿ ಚಿಕಿತ್ಸೆ ಪಡೆಯಬೇಕು. ಆರೋಗ್ಯವಂತರಾಗಿದ್ದಾಗ ಮಾತ್ರ ಸಮರ್ಥವಾಗಿ ಕೆಲಸ ಮಾಡಲು ಸಾಧ್ಯ ಎಂದು ಹೇಳಿದರು.  ಗ್ರಾಮಾಂತರ ಉಪ ವಿಭಾಗದ ಡಿವೈಎಸ್ಪಿ ಬಸವರಾಜ್, ನಗರ ಉಪ ವಿಭಾಗದ ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ ಇದ್ದರು. ಆರ್. ನರೇಂದ್ರಚಾರ್ಯ, ಅಭಿಷೇಕ್ ಪಾಲ್ಗೊಂಡಿದ್ದರು. ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಪಿ.ಬಿ. ಪ್ರಕಾಶ್ ಸ್ವಾಗತಿಸಿದರು. ಡಿಎಆರ್ ಆರ್‌ಪಿಐ ಎಚ್.ಬಿ. ಸೋಮಶೇಖರಪ್ಪ ವಂದಿಸಿದರು. ಆರ್‌ಎಸ್‌ಐ ಎಸ್.ವಿ. ಅಣ್ಣಿಗೇರಿ ಪ್ರಾರ್ಥಿಸಿದರು. ಎಎಚ್‌ಸಿ ಅಂಬರೀಶ ಸಂಗಪ್ಪ ಸಂಗಮ ನಿರೂಪಣೆ ಮಾಡಿದರು.

Share This Article

ಬಿರು ಬೇಸಿಗೆಯಲ್ಲಿ ನೆಲ್ಲಿಕಾಯಿ ಸೇವಿಸಿ, ಈ ಅದ್ಭುತ ಪ್ರಯೋಜನ ಪಡೆಯಿರಿ; ಇಲ್ಲಿದೆ ಉಪಯುಕ್ತ ಮಾಹಿತಿ | Amla

Amla Benefits: ಸಾಮಾನ್ಯವಾಗಿ ಭಾರತೀಯ ನೆಲ್ಲಿಕಾಯಿಯನ್ನು ಆಂಗ್ಲ ಭಾಷೆಯಲ್ಲಿ ಆಮ್ಲಾ/ ಗೂಸ್​ಬೆರಿ ಎಂದು ಕರೆಯಲಾಗುತ್ತದೆ. ಇದು…

ಮನೆಯಲ್ಲಿ ಈ 4 ವಸ್ತುಗಳಿದ್ದರೆ ಲಕ್ಷ್ಮಿ ಒಲಿಯುವುದಿಲ್ಲ! ಇದನ್ನು ಗಮನಿಸದೆ ಹೋದ್ರೆ ಕೈಯಲ್ಲಿ 1 ಪೈಸೆಯೂ ಉಳಿಯಲ್ಲ | Vastu Tips

Vastu Tips: ಇಂದು ಯಾರಿಗೆ ತಾನೇ ಧನಲಕ್ಷ್ಮಿ ಬೇಡ? ವಿದ್ಯೆ ಇಲ್ಲದೇ ಹೋದ್ರೂ ಪರವಾಗಿಲ್ಲ ಹಣವೇ…

ರಾತ್ರಿ 11 ಗಂಟೆ ಮೇಲೆ ನಿದ್ದೆ ಮಾಡುತ್ತಿದ್ದೀರಾ.. ಕಾದಿದೆ ನಿಮಗೆ ಅಪಾಯ; ತಜ್ಞರ ಕೊಟ್ಟ ಏಚ್ಚರಿಕೆ ಏನು ಗೊತ್ತೆ! | Sleep

Sleep:ಇಂದಿನ ಕಾಲದ ಜನರ ಜೀವನ ಶೈಲಿಯಲ್ಲಿ ಹಲವು ಬದಲಾವಣೆಯಾಗಿವೆ. ಈ ಬದಲಾವಣೆಯಲ್ಲಿ ಒಂದು ರಾತ್ರಿ ಬೇಗ…