More

    ಸೌಲಭ್ಯಕ್ಕೆ ಆಗ್ರಹಿಸಿ ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ

    ದಾವಣಗೆರೆ : ಎಂಟು ಗಂಟೆಗಳ ಕೆಲಸ ನೀಡುವುದು, ಪಿಂಚಣಿ ಇನ್ನಿತರ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಗ್ರಾಮೀಣ ಅಂಚೆ ನೌಕರರು ಎರಡನೇ ದಿನವಾದ ಬುಧವಾರವೂ ನಗರದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.
     ಪ್ರಧಾನ ಅಂಚೆ ಕಚೇರಿ ಮುಂಭಾಗ ಸೇರಿದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳ ಬಗ್ಗೆ ಘೋಷಣೆಗಳನ್ನು ಕೂಗಿದರು.
     ಸೇವಾ ಹಿರಿತನದ ಆಧಾರದ ಮೇಲೆ 12 ರಿಂದ 36 ವರ್ಷ ಸೇವೆ ಸಲ್ಲಿಸಿದ ಜಿಡಿಎಸ್ ನೌಕರರಿಗೆ ವಿಶೇಷ ಇನ್‌ಕ್ರಿಮೆಂಟ್ ನೀಡಬೇಕು. ಗ್ರಾಚುಟಿ ಮೇಲಿನ ಗರಿಷ್ಠ ಮೊತ್ತವಾದ 1.5 ಲಕ್ಷಗಳ ಮಿತಿಯನ್ನು ತೆಗೆದು ಹಾಕಿ ಕಮಲೇಶ್ ಚಂದ್ರ ಸಮಿತಿಯು ಶಿಫಾರಸು ಮಾಡಿದಂತೆ ಗರಿಷ್ಠ 5 ಲಕ್ಷ ರೂ. ವರೆಗೆ ನೀಡಬೇಕು ಎಂದು ಆಗ್ರಹಿಸಿದರು.
     ಜಿಡಿಎಸ್ ನೌಕರರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು. 30 ದಿನಗಳ ವೇತನ ಸಹಿತ ರಜೆ ನೀಡಬೇಕು. 7ನೇ ವೇತನ ಆಯೋಗದ ಶಿಫಾರಸಿನಂತೆ 180 ದಿನಗಳ ವರೆಗೆ ರಜೆ ಉಳಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ಗುಂಪು ವಿಮೆ ಯೋಜನೆಯನ್ನು 5 ಲಕ್ಷ ರೂ. ವರೆಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
     ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ವಿಭಾಗೀಯ ಅಧ್ಯಕ್ಷ ಎ.ಎನ್. ಚಂದ್ರಪ್ಪ, ಕಾರ್ಯದರ್ಶಿ ಕೆ. ಲಿಂಗರಾಜು, ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರ ಸಂಘದ ಅಧ್ಯಕ್ಷ ಕೆ.ವಿ. ಹುಚ್ಚರಾಯ ಶೆಟ್ಟಿ, ಯಶವಂತಕುಮಾರ್, ಬಿ. ಲೋಕೇಶ ನಾಯ್ಕ, ಬಿ.ಸಿ. ಮರುಳಸಿದ್ದಯ್ಯ ಇದ್ದರು.
     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts