More

    ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲು ಆಗ್ರಹ

    ದಾವಣಗೆರೆ : ರಾಜ್ಯಾದ್ಯಂತ ನೇರಪಾವತಿ ಪೌರಕಾರ್ಮಿಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ವಾಹನ ಚಾಲಕರು, ನೀರು ಸರಬರಾಜು ಸಹಾಯಕರ ಸೇವೆಯನ್ನು ಕಾಯಂಗೊಳಿಸಲು ಆಗ್ರಹಿಸಿ ಪೌರಕಾರ್ಮಿಕರ ಸಂಘದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
     ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಪ್ರತಿಭಟನಾಕಾರರು ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು. ನಂತರ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಅವರಿಗೆ ಮನವಿ ಸಲ್ಲಿಸಿದರು.
     ಸರ್ಕಾರ ಕನಿಷ್ಠ ವೇತನ, ಭವಿಷ್ಯ ನಿಧಿ, ಆರೋಗ್ಯ ವಿಮೆ, ಮಕ್ಕಳ ಶಿಕ್ಷಣ, ಉದ್ಯೋಗ ಭದ್ರತೆ, ವಸತಿ, ಕುಡಿಯುವ ನೀರು ಇನ್ನಿತರ ಸೌಕರ್ಯಗಳನ್ನು ನೀಡಿಲ್ಲ. ಸರ್ಕಾರ ಈ ಹಿಂದೆ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
     ನಮ್ಮ ಬೇಡಿಕೆಗಳ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ಸೇವೆ ಕಾಯಂ ಮಾಡುವ ನಿರ್ಣಯ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಸ್ವಚ್ಛತಾ ಕಾರ್ಯ ನಿಲ್ಲಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
     ಸಂಘದ ಮುಖಂಡರಾದ ಎಲ್.ಎಂ. ಹನುಮಂತಪ್ಪ, ಎನ್. ನೀಲಗಿರಿಯಪ್ಪ, ಎಲ್.ಎಚ್. ಸಾಗರ್, ಬಿ. ಲೋಹಿತ್, ಎಂ. ಓಮೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts