ದಾವಣಗೆರೆ : ದಾವಣಗೆರೆ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಎನ್. ರಾಜಶೇಖರ್ ಮರು ಆಯ್ಕೆಯಾಗಿದ್ದಾರೆ. ಸಂಘ ಪರಿವಾರದ ಹಿನ್ನೆಲೆಯಿಂದ ಬಂದಿರುವ ರಾಜಶೇಖರ್, 2024ರ ಜ. 14 ರಿಂದ ಇಲ್ಲಿಯ ವರೆಗೆ ಜಿಲ್ಲಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತ ಬಂದಿದ್ದಾರೆ. ಮುಂದಿನ 3 ವರ್ಷಗಳ ಅವಧಿಗೆ (2025-2028) ಅವರನ್ನು ಮರು ಆಯ್ಕೆ ಮಾಡಿ ಪಕ್ಷದ ರಾಜ್ಯ ಚುನಾವಣಾಧಿಕಾರಿ ಕ್ಯಾ. ಗಣೇಶ್ ಕಾರ್ಣಿಕ್ ಆದೇಶ ಹೊರಡಿಸಿದ್ದಾರೆ. ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ ನಡೆಯುತ್ತಿದೆ. ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಗಿಸಲಾಗಿದ್ದು ಅದರಲ್ಲಿ ದಾವಣಗೆರೆ ಜಿಲ್ಲೆಯೂ ಒಳಗೊಂಡಿದೆ. ಜಿಲ್ಲಾಧ್ಯಕ್ಷರಾಗಿ ಮರು ಆಯ್ಕೆಯಾದ ಬಗ್ಗೆ ವಿಜಯವಾಣಿಗೆ ಪ್ರತಿಕ್ರಿಯೆ ನೀಡಿದ ರಾಜಶೇಖರ್, ಸಂಘಟನೆಯನ್ನು ರಚನಾತ್ಮಕವಾಗಿ, ಬಲಿಷ್ಠವಾಗಿ ಕಟ್ಟಲಾಗುವುದು. ಜನರಿಗೆ ಬೇಡವಾದ ರಾಜ್ಯ ಸರ್ಕಾರ ಅಂತ್ಯವಾಗುವ ವರೆಗೆ ಹೋರಾಟ ನಡೆಸಲಾಗುವುದು. ಯುವಕರನ್ನು ಪಕ್ಷದ ಕಡೆಗೆ ಸೆಳೆಯಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ರಾಜಶೇಖರ್ ಮರು ಆಯ್ಕೆ

ಸ್ನಾನದ ನಂತರವೂ ನಿಮ್ಮ ದೇಹವು ಕೆಟ್ಟ ವಾಸನೆಯನ್ನು ಬೀರುತ್ತದೆಯೇ? ಹೀಗೆ ಮಾಡಿ ನೋಡಿ…. life style
life style: ಕೆಲವರಿಗೆ ದೇಹದಿಂದ ವಾಸನೆ ಬರುವುದನ್ನು ನೀವು ಗಮನಿಸಿರಬಹುದು. ಅದು ಚಳಿಯಾಗಿರಬಹುದು, ಮಳೆಯಾಗಿರಬಹುದು, ಸಣ್ಣ…
ವಕ್ರ ದಂತ ಸಮಸ್ಯೆಗೆ ಸೂಕ್ತ ಪರಿಹಾರ ಅಲೈನರ್
ಹಲ್ಲು ಅಡ್ಡಾದಿಡ್ಡಿ ಇದ್ದರೆ ಅಂಥವರು ಮುಜುಗರದಿಂದ ಮನಬಿಚ್ಚಿ ನಗದಿರುವುದೇ ಹೆಚ್ಚು. ಆದರೆ ಈಗ ಅಷ್ಟಕ್ಕೆಲ್ಲ ಚಿಂತೆ…