More

    ಪ್ರಾಜೆಕ್ಟ್ ಸಿದ್ಧಪಡಿಸುವಾಗ ಇರಲಿ ಸಾಮಾಜಿಕ ಕಾಳಜಿ

    ದಾವಣಗೆರೆ : ,ವಿದ್ಯಾರ್ಥಿಗಳು ಸಮಾಜದ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ನಿಟ್ಟಿನಲ್ಲಿ ಪ್ರಾಜೆಕ್ಟ್‌ಗಳನ್ನು ಸಿದ್ಧಪಡಿಸಬೇಕು ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಡಿ. ಕುಂಬಾರ ಸಲಹೆ ನೀಡಿದರು.
     ವಿವಿ ವ್ಯಾಪ್ತಿಯ ಎಂ.ಕಾಂ. ವಿದ್ಯಾರ್ಥಿಗಳಿಗೆ ನಗರದ ಎಸ್‌ಬಿಸಿ ಮಹಿಳಾ ಪ್ರಥಮದರ್ಜೆ ಕಾಲೇಜು ಮತ್ತು ಅಥಣಿ ಸ್ನಾತಕೋತ್ತರ ಕೇಂದ್ರದಲ್ಲಿ ಮಂಗಳವಾರ, ಪ್ರಾಜೆಕ್ಟ್‌ಗಳನ್ನು ಸಿದ್ಧಪಡಿಸುವ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
     ಸಾಮಾಜಿಕ, ಆರ್ಥಿಕ, ರಾಜಕೀಯ ಇನ್ನಿತರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು, ಅವುಗಳಿಗೆ ಉತ್ತರ ಕಂಡುಕೊಳ್ಳಬೇಕು. ನಮ್ಮನ್ನು ಬೆಳೆಸಿದ ಸಮಾಜಕ್ಕೆ ಮರಳಿ ಈ ರೀತಿಯ ಕೊಡುಗೆ ನೀಡಬೇಕು ಎಂದು ತಿಳಿಸಿದರು.
     ಪ್ರಾಜೆಕ್ಟ್‌ಗಳು ಕೇವಲ ಕಾಟಾಚಾರಕ್ಕೆ ಎಂಬಂತೆ ಆಗಬಾರದು, ಗುಣಮಟ್ಟದಿಂದ ಕೂಡಿರಬೇಕು. ಕಾಪಿ-ಪೇಸ್ಟ್ ಮಾಡುವ ಪ್ರವೃತ್ತಿಯಿಂದ ಹೊರಬಂದು, ಸ್ವಂತಿಕೆಯನ್ನು ತೋರಿಸಬೇಕು ಎಂದು ಕಿವಿಮಾತು ಹೇಳಿದರು.
     ವಾಣಿಜ್ಯ ವಿದ್ಯಾರ್ಥಿಗಳಾಗಿ ಇಂದಿನ ಮಾರುಕಟ್ಟೆಯ ವಿದ್ಯಮಾನಗಳನ್ನು ಅರಿಯಬೇಕು. ವಿಷಯ ಶೀರ್ಷಿಕೆ ಆಯ್ಕೆ ಮಾಡುವಲ್ಲಿ ಎಚ್ಚರ ವಹಿಸಬೇಕು. ಒಟ್ಟಿನಲ್ಲಿ ಸಮಾಜಕ್ಕೆ ಉಪಯುಕ್ತವಾಗುವಂತೆ ಪ್ರಾಜೆಕ್ಟ್ ರೂಪಿಸಬೇಕು ಎಂದು ತಿಳಿಸಿದರು.
     ಈ ರೀತಿಯ ತರಬೇತಿಗಳು ಒಂದು ದಿನಕ್ಕೆ ಸೀಮಿತವಾಗಬಾರದು. ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ ಶಿಕ್ಷಕರಿಗೆ ಮೊದಲು ತರಬೇತಿ ಸಿಗಬೇಕು. ಅವರು ಪಡೆಯುವ ಜ್ಞಾನವನ್ನು ವಿದ್ಯಾರ್ಥಿಗಳಿಗೆ ದಾಟಿಸಬೇಕು ಎಂದರು.
     ದಾವನಗೆರೆ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ವಿಭಾಗದ ಚೇರ್ಮನ್ ಪ್ರೊ. ಸತ್ಯನಾರಾಯಣ ಮಾತನಾಡಿ, ಪ್ರಾಜೆಕ್ಟ್‌ಗಳು ಸಂಶೋಧನೆಯ ಮೊದಲ ಮೆಟ್ಟಿಲಿದ್ದಂತೆ. ಅದನ್ನು ಸರಿಯಾಗಿ ಮಾಡಿದರೆ ಮುಂದಿನ ದಿನಗಳಲ್ಲಿ ನೆರವಿಗೆ ಬರುತ್ತದೆ ಎಂದು ತಿಳಿಸಿದರು.
     ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಈ ರೀತಿಯ ತರಬೇತಿಗಳ ಅಗತ್ಯವಿದೆ ಎಂಬುದನ್ನು ಮನಗಂಡು ಮೊದಲು ದಾವಣಗೆರೆಯಲ್ಲಿ ಆಯೋಜನೆ ಮಾಡಲಾಗಿದೆ. ಇದೇ ರೀತಿ ಚಿತ್ರದುರ್ಗ ಜಿಲ್ಲೆಯಲ್ಲೂ ತರಬೇತಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
     ವಿವಿಯ ವಾಣಿಜ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಚ್.ಎಸ್. ಅನಿತಾ, ಪ್ರೊ. ಕೆ.ಟಿ. ಶ್ರೀನಿವಾಸ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಸಂಸ್ಥೆಯ ಅಥಣಿ ಪ್ರಶಾಂತ್, ಕಾಲೇಜಿನ ಪ್ರಾಚಾರ್ಯ ಡಾ.ಕೆ. ಷಣ್ಮುಖ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts