ದಾವಣಗೆರೆ : ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸುವ ರಾಜ್ಯ ಸರ್ಕಾರದ ಪ್ರಸ್ತಾವವನ್ನು ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ತಾಲೂಕು ಸಮಿತಿಯ ನೇತೃತ್ವದಲ್ಲಿ ಇಲ್ಲಿನ ಉಪ ವಿಭಾಗಾಧಿಕಾರಿ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಯಿತು.
ತಮ್ಮ ಬೇಡಿಕೆಗಳ ಬಗ್ಗೆ ಘೋಷಣೆ ಕೂಗಿದ ಕಾರ್ಯಕರ್ತೆಯರು ನಂತರ ಎಸಿಗೆ ಮನವಿ ಸಲ್ಲಿಸಿದರು.
ಆರು ತಿಂಗಳಿನಿಂದ 6 ವರ್ಷದೊಳಗಿನ ಮಕ್ಕಳ ಆರೋಗ್ಯ, ಲಾಲನೆ, ಪಾಲನೆ, ಪೋಷಣೆ, ಕ್ರೀಡಾ ಕಲಿಕೆ ಚಟುವಟಿಕೆಯನ್ನು ಅಂಗನವಾಡಿ ಕೇಂದ್ರಗಳ ಮೂಲಕ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ. ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸುವುದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆಯು ಕ್ಷೀಣಿಸಿ ಕಾರ್ಯಕರ್ತೆಯರು ಬೀದಿಗೆ ಬೀಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಫೆಡರೇಷನ್ ಜಿಲ್ಲಾ ಕಾರ್ಯದರ್ಶಿ ಎಸ್.ಎಸ್. ಮಲ್ಲಮ್ಮ ಆತಂಕ ವ್ಯಕ್ತಪಡಿಸಿದರು.
ಮಕ್ಕಳಿಗೆ ಕೊಡಬೇಕಾದ ಸಮವಸ್ತ್ರ, ಪಠ್ಯಪುಸ್ತಕ ನಮಗೆ ನೀಡಿದರೆ ಯಾವ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ರಾಜ್ಯ ಸರ್ಕಾರ ಯಾವುದೆ ಕಾರಣಕ್ಕೂ ಎಲ್‌ಕೆಜಿ, ಯುಕೆಜಿಯನ್ನು ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಬಿಟ್ಟುಕೊಡಬಾರದು. ಅಂಗನವಾಡಿ ಕೇಂದ್ರಗಳು, ಕಾರ್ಯಕರ್ತೆಯರು ಉಳಿಯಬೇಕಾದರೆ ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಬೇಕು ಎಂದು ಮುಖಂಡ ಆವರಗೆರೆ ವಾಸು ಒತ್ತಾಯಿಸಿದರು.
ರಾಜ್ಯ ಸರ್ಕಾರ 6ನೇ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು 15 ಸಾವಿರ ರೂ.ಗೆ ಹೆಚ್ಚಿಸಬೇಕು. ಕೇಂದ್ರ ಸರ್ಕಾರ ಕನಿಷ್ಠ ವೇತನವಾಗಿ 18 ಸಾವಿರ ರೂ.ಗಳನ್ನು ನೀಡಬೇಕು ಎಂದು ಆಗ್ರಹಿಸಿದರು.
ಕಾರ್ಮಿಕ ಮುಖಂಡರಾದ ಎಚ್.ಜಿ. ಉಮೇಶ್, ಸರ್ವಮ್ಮ, ಗೀತಾ, ಕೆ.ಸಿ. ನಿರ್ಮಲಾ, ರೇಣುಕಾ, ಸುಧಾ, ಎಚ್.ಜಿ.ಮಂಜುಳಾ ಇದ್ದರು.
ಎಲ್‌ಕೆಜಿ, ಯುಕೆಜಿ ತರಗತಿ ಆರಂಭಕ್ಕೆ ವಿರೋಧ
ಎಚ್ಚರ, ದೇಹ ದಣಿದಿದ್ರೂ ನಿದ್ದೆ ಬರ್ತಿಲ್ಲವೇ? ಸಿರ್ಕಾಡಿಯನ್ ಸಿಂಡ್ರೋಮ್ ಇರಬಹುದು!!
ಬೆಂಗಳೂರು: ದೇಹ ದಣಿದಿರುತ್ತದೆ. ಆದರೆ ನಿದ್ರೆ ಬರುತ್ತಿಲ್ಲ. ಇದಕ್ಕೆ ದೇಹದ ಸಿರ್ಕಾಡಿಯನ್ ಲಯ ತಪ್ಪಿರುವುದು, ಅತಿಯಾದ…
ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….
ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…
ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್!
ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…