ದಾವಣಗೆರೆ : ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನದ ದಾವಣಗೆರೆ ಮಂಡಳಿ ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಉಪ ವಿಭಾಗಾಧಿಕಾರಿ ಕಚೇರಿ ಬಳಿ ಸೇರಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಬೇಡಿಕೆಗಳ ಬಗ್ಗೆ ಗಮನ ಸೆಳೆದರು. ನಂತರ ಮನವಿ ಸಲ್ಲಿಸಿದರು. ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಗಳ ಹಣವನ್ನು ಅನ್ಯ ಉದ್ದೇಶಗಳಿಗೆ ವರ್ಗಾವಣೆ ಮಾಡಲು ಬಿಡುವುದಿಲ್ಲ. ಈ ಹಣ ವರ್ಗಾವಣೆಗೆ ಸಹಕಾರಿಯಾಗುತ್ತಿರುವ ಎಸ್‌ಸಿಪಿ ಮತ್ತು ಟಿಎಸ್‌ಪಿ ಕಾಯ್ದೆಯ ಸೆಕ್ಷನ್ 7(ಸಿ) ಮತ್ತು 7(ಡಿ)ಯನ್ನು ರದ್ದುಪಡಿಸುವುದಾಗಿ ಸಿದ್ದರಾಮಯ್ಯ ಅವರು ಈ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಭೋವಿ, ವಾಲ್ಮೀಕಿ ನಿಗಮಗಳೂ ಸೇರಿ ವಿವಿಧ ನಿಗಮಗಳಲ್ಲಿ ಆಗಿರುವ ಭ್ರಷ್ಟಾಚಾರವನ್ನು ಖಂಡಿಸುತ್ತೇವೆ. ಹಣ ದುರುಪಯೋಗ ಆಗಿರುವುದರ ಸಮಗ್ರ ತನಿಖೆ ನಡೆದು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬೇಕು. ದಲಿತರ ಮೇಲಾಗುತ್ತಿರುವ ನಿರಂತರ ದೌರ್ಜನ್ಯಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಡವರಿಗೆ ಮನೆ ಕಟ್ಟಿಕೊಳ್ಳಲು ವಿವಿಧ ವಸತಿ ಯೋಜನೆಗಳ ಮೂಲಕ ಕನಿಷ್ಠ 5 ಲಕ್ಷ ರೂ. ನಿಗದಿಪಡಿಸಬೇಕು. ಮನೆ ಕಟ್ಟಿಕೊಳ್ಳಲು ನಿವೇಶನ ಇಲ್ಲದ ಈ ಸಮುದಾಯದ ಜನರಿಗೆ ಸರ್ಕಾರಿ ಹಾಗೂ ಖಾಸಗಿ ಬಡಾವಣೆಗಳಲ್ಲಿ ಜನಸಂಖ್ಯೆ ಅನುಪಾತದಂತೆ ನಿವೇಶನಗಳನ್ನು ಮೀಸಲಿಡುವಂತೆ ನಿಯಮಗಳನ್ನು ರೂಪಿಸಬೇಕು ಎಂದು ಆಗ್ರಹಿಸಿದರು. ರಾಮನಗರದ ಘಟನೆ ಸೇರಿ ದಲಿತರ ಮೇಲಿನ ದೌರ್ಜನ್ಯ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ. ಇಂಥ ಬೆಳವಣಿಗೆಗಳು ಮರುಕಳಿಸದಂಥ ವಾತಾವರಣವನ್ನು ನಿರ್ಮಿಸಬೇಕು ಎಂದು ಮನವಿ ಮಾಡಿದರು. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಸೇರಿ ರಾಜ್ಯದ ಇತರ ಶೈಕ್ಷಣಿಕ ಸಂಸ್ಥೆಗಳು ಮತ್ತಿತರ ಕಡೆಗಳಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳನ್ನು ಹತ್ತಿಕ್ಕಲು ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಂಘಟನೆಯ ರಾಜ್ಯ ಸಂಚಾಲಕ ಆವರಗೆರೆ ವಾಸು, ಮುಖಂಡರಾದ ರುದ್ರೇಶ ಮೂರ್ತಿ, ಹನುಮಂತಪ್ಪ, ಹರ್ಷ, ಚೌಡಪ್ಪ, ರಾಜು, ಸಿ. ರಮೇಶ, ರಂಗಪ್ಪ, ವಿ. ಲಕ್ಷ್ಮಣ, ಭರತ, ನಂದೀಶ, ಸುರೇಶ, ಚಂದ್ರಪ್ಪ, ಹುಚ್ಚಂಗೆಪ್ಪ, ರೇಣುಕಮ್ಮ, ಕವಿತಾ, ಶೀಲಮ್ಮ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಎಸ್ಸಿ ಎಸ್ಟಿ ಹಣ ಅನ್ಯ ಯೋಜನೆಗಳಿಗೆ ಬಳಕೆ ಬೇಡ
ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್ ಬರೋದು ಪಕ್ಕಾ! ಇರಲಿ ಎಚ್ಚರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳಿಗೆ ಬಾಳೆಹಣ್ಣು ಕೊಡುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ ಇಲ್ಲದಿದ್ರೆ ಆರೋಗ್ಯ ಕೆಡಬಹುದು ಎಚ್ಚರ!
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…