ದಾವಣಗೆರೆ : ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ಖಂಡಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು. ಗುಂಡಿ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಮೂರು ಹಸುಗಳಿಗೆ ಪೂಜೆ ಸಲ್ಲಿಸಿ ಪ್ರತಿಭಟನೆ ಆರಂಭಿಸಿದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‘ಹಸುಗಳ ಕೆಚ್ಚಲು ಕೊಯ್ದು ಹಿಂಸೆ ನೀಡಿದ ಕ್ರೂರಿಗಳಿಗೆ ಧಿಕ್ಕಾರ’, ‘ಪುಂಡ ಪೋಕರಿಗಳನ್ನು ಸಾಕುತ್ತಿರುವ ಸರ್ಕಾರಕ್ಕೆ ಧಿಕ್ಕಾರ’, ‘ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಲಿ’ ಎಂದು ಘೋಷಣೆಗಳನ್ನು ಕೂಗಿದರು. ‘ಹಲೋ ಮಿಸ್ಟರ್ ಸಿದ್ದರಾಮಯ್ಯ, ಹೇಳಿದ್ದೇನು, ಮಾಡಿದ್ದೇನು. ಹೇಳಿದ್ದು ಅಹಿಂದ ಉದ್ಧಾರ, ಮಾಡಿದ್ದು ವಕ್ಫ್ ಉದ್ಧಾರ’ ಎಂದು ದೂರಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್. ರಾಜಶೇಖರ್ ಮಾತನಾಡಿ, ಗೋಮಾತೆಯನ್ನು ಭಾರತದಲ್ಲಿ ತಾಯಿಗೆ ಸಮಾನವಾಗಿ ನೋಡಲಾಗುತ್ತದೆ. ಮಗುವಿಗೆ ತಾಯಿ ಹಾಲು ನೀಡುವುದನ್ನು ಬಿಡಿಸಿದ ನಂತರ ಹಸುವಿನ ಹಾಲನ್ನೇ ಕೊಡುತ್ತಾರೆ. ಹಸುಗಳು ನಮಗೆ ಆಮ್ಲಜನಕ ನೀಡುತ್ತವೆ. ಅವುಗಳಲ್ಲಿ ದೇವತೆಗಳು ನೆಲೆಸಿರುತ್ತಾರೆ ಎಂದು ಗೋವುಗಳ ಮಹತ್ವವನ್ನು ವಿವರಿಸಿದರು. ಮಕರ ಸಂಕ್ರಮಣದ ಈ ಹೊತ್ತಿನಲ್ಲಿ ಅಮಾನವೀಯ ಘಟನೆ ನಡೆದಿರುವುದಕ್ಕೆ ನೋವಾಗಿದೆ. ಕಾಂಗ್ರೆಸ್ ಸರ್ಕಾರ ಇಂಥ ಕೆಲಸಗಳಿಗೆ ಕುಮ್ಮಕ್ಕು ನೀಡುತ್ತ ಬಂದಿದೆ. ಬಿಜೆಪಿ ಸರ್ಕಾರವಿದ್ದಾಗ ಗೋಶಾಲೆಗಳಿಗೆ ಹಣ ನೀಡಲಾಗುತ್ತಿತ್ತು. ಈಗ ನಿಲ್ಲಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೇಳಿಬಂದರೂ ಸರ್ಕಾರ ಮೌನವಾಗಿತ್ತು. ಪೊಲೀಸ್ ಠಾಣೆ ಧ್ವಂಸಗೊಳಿಸಿದ ಆರೋಪಿಗಳ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯಲಾಯಿತು. ಕಾಂಗ್ರೆಸ್ ವೋಟಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು. ಹೊಸ ಆಕಳನ್ನು ಕೊಡಿಸುವುದಾಗಿ ಸಚಿವ ಜಮೀರ್ ಅಹಮ್ಮದ್ ಹೇಳಿಕೆ ನೀಡಿರುವುದು ಖಂಡನೀಯ ಎಂದರು. ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ ಜಾಧವ್ ಮಾತನಾಡಿ, ಹಸುಗಳು ಹಿಂದುಗಳ ಆರಾಧ್ಯ ದೈವ, ಮುಕ್ಕೋಟಿ ದೇವತೆಗಳು ನೆಲೆಸಿರುತ್ತವೆ. ಅವುಗಳ ವಿರುದ್ಧ ವಿಕೃತಿ ಮೆರೆಯಲಾಗಿದೆ. ರಾಜ್ಯದಲ್ಲಿ ಲವ್ ಜಿಹಾದ್, ಬಾಂಬ್ ಸ್ಫೋಟದಂಥ ಘಟನೆಗಳು ನಡೆಯುತ್ತಿವೆ. ಇಂಥ ವಿಕೃತಿ ಮೆರೆದವರ ಕೈ ಕತ್ತರಿಸವಂಥ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ್ ಮಾತನಾಡಿದರು. ಮುಖಂಡರಾದ ಕೊಳೇನಹಳ್ಳಿ ಬಿ.ಎಂ. ಸತೀಶ್, ಎನ್.ಎ. ಮುರುಗೇಶ್, ಶಿವನಹಳ್ಳಿ ರಮೇಶ್, ಜಿ.ಎಸ್. ಶ್ಯಾಮ್, ರಘುನಂದನ್ ಅಂಬರಕರ, ಅನಿಲ್ ಕುಮಾರ್ ನಾಯ್ಕ, ಎಚ್.ಎನ್. ಶಿವಕುಮಾರ್, ಪಿ.ಸಿ. ಶ್ರೀನಿವಾಸ್, ಎಚ್.ಪಿ. ವಿಶ್ವಾಸ್ ಇದ್ದರು.
ಹಸುಗಳ ಕೆಚ್ಚಲು ಕೊಯ್ದ ಘಟನೆಗೆ ಖಂಡನೆ

ಕೂಡಲೇ ಇವುಗಳನ್ನು ತಿನ್ನುವುದನ್ನು ನಿಲ್ಲಿಸದಿದ್ರೆ ನಿಮ್ಮ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗೋದು ಗ್ಯಾರಂಟಿ! Sperm Count
Sperm Count : ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು…
ಕ್ಯಾರೆಟ್ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್ ವಿಧಾನ | Recipe
ಕ್ಯಾರೆಟ್ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…
ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips
ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…