More

    ಅಕ್ರಮ ಪಂಪ್‌ಸೆಟ್ ತೆರವಿಗೆ ಜಿಲ್ಲಾಧಿಕಾರಿ ಸೂಚನೆ

    ದಾವಣಗೆರೆ :  ಮಳೆ ಕೊರತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇರುವುದರಿಂದ ಮತ್ತು ನಾಲೆ ಮೂಲಕ ಅಚ್ಚುಕಟ್ಟುದಾರರ ಬೆಳೆಗಳಿಗೆ ನೀರು ಕೊಡಬೇಕಾಗಿರುವುದರಿಂದ ಅಕ್ರಮವಾಗಿ ಅಳವಡಿಸಿರುವ ಪಂಪ್‌ಸೆಟ್ಗಳನ್ನು ತೆರವುಗೊಳಿಸಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಸೂಚನೆ ನೀಡಿದರು.
     ಜಿಲ್ಲಾಡಳಿತ ಭವನದಲ್ಲಿ ಬುಧವಾರ ಭದ್ರಾ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಹರಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
     ಜಿಲ್ಲೆಯಲ್ಲಿ ನೀರಿನ ಅಭಾವ ಉಂಟಾಗಲಿದ್ದು, ಭದ್ರಾ ಅಚ್ಚುಕಟ್ಟು ಪ್ರದೇಶಗಳಿಗೆ ಆನ್ ಆ್ಯಂಡ್ ಆಫ್ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಈಗಾಗಲೇ ಅ. 26 ರಿಂದ ಭದ್ರಾ ಎಡದಂಡೆಗೆ 380 ಕ್ಯೂಸೆಕ್ ಹಾಗೂ ಬಲದಂಡೆಗೆ 3100 ಕ್ಯೂಸೆಕ್ ನೀರನ್ನು ಹರಿಸಲಾಗಿದೆ. ಬೆಸ್ಕಾಂ ಅಧಿಕಾರಿಗಳು ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್‌ಸೆಟ್ಗಳನ್ನು ತೆರವುಗೊಳಿಸಬೇಕು. ಅವುಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು ಎಂದರು.
     ಭದ್ರಾ ಬಲದಂಡೆಯ ಭಾಗದಲ್ಲಿ ರೈತರ ಜಮೀನುಗಳಲ್ಲಿ ಭತ್ತವು ಒಡೆ ಕೀಳುತ್ತಿದ್ದು, ಈ ಸಂದರ್ಭದಲ್ಲಿ ನೀರಿನ ಅವಶ್ಯಕತೆ ಬಹಳ ಇದೆ. ಹಾಗಾಗಿ ನೀರಾವರಿ ನಿಗಮದ ಇಂಜಿನಿಯರ್‌ಗಳು ಸಕಾಲದಲ್ಲಿ ರೈತರಿಗೆ ನೀರನ್ನು ಒದಗಿಸಿ ಉತ್ತಮ ಫಸಲಿಗೆ ಸಹಕರಿಸಬೇಕು ಎಂದು ಹೇಳಿದರು.
     ದಾವಣಗೆರೆ ವಿಭಾಗದ ನಾಲೆಗಳಿಗೆ 7 ದಿನ ಹಾಗೂ ಮಲೇಬೆನ್ನೂರು ವಿಭಾಗದ ನಾಲೆಗಳಿಗೆ 6 ಮತ್ತು 3 ದಿನದಂತೆ ಆನ್ ಆ್ಯಂಡ್ ಆಫ್ ವ್ಯವಸ್ಥೆ ಅಳವಡಿಸಲಾಗಿದೆ. ಭದ್ರಾ ಅಚ್ಚುಕಟ್ಟು ಪ್ರದೇಶಗಳಲ್ಲಿನ 9ಬಿ ಹಾಗೂ 9ಸಿ ನಾಲೆಗಳಿಗೂ ನೀರು ಶೀಘ್ರವೇ ತಲುಪುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.
     ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ದಾವಣಗೆರೆ ತಹಸೀಲ್ದಾರ್ ಡಾ. ಎಂ.ಬಿ. ಅಶ್ವಥ್, ಹರಿಹರ ತಹಸೀಲ್ದಾರ್ ಪೃಥ್ವಿ ಸಾನಿಕಂ, ಕಾರ್ಯ ನಿರ್ವಾಹಕ ಇಂಜಿನಿಯರ್ ಆರ್.ಬಿ. ಮಂಜುನಾಥ್ ಹಾಗೂ ರೈತ ಮುಖಂಡರು ಇದ್ದರು.
     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts