ದ್ವೇಷದ ರಾಜಕಾರಣ ಮಾಡದ ರವೀಂದ್ರನಾಥ್

blank

ದಾವಣಗೆರೆ : ಹೊರ ಜಿಲ್ಲೆಯಿಂದ ಬಂದು ಸ್ವಾರ್ಥ ರಾಜಕಾರಣ ಮಾಡಿದವರನ್ನು ಬಿಟ್ಟು ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸಿದವರನ್ನು ಮಹಾನಗರ ಪಾಲಿಕೆಯಿಂದ ಸನ್ಮಾನಿಸಿದ್ದು ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.  ಮಹಾನಗರ ಪಾಲಿಕೆ, ಕನ್ನಡಪರ ಸಂಘ ಸಂಸ್ಥೆಗಳು ಹಾಗೂ ಪತ್ರಕರ್ತರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ತಾಯಿ ಭುವನೇಶ್ವರಿ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿ ಶನಿವಾರ ಸಂಜೆ ಮಾತನಾಡಿದರು.  ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಸ್ವಾರ್ಥ ರಾಜಕಾರಣ ಮಾಡದೇ ತಮ್ಮದೇ ಆದ ಕೊಡುಗೆಯನ್ನು ದಾವಣಗೆರೆಯ ಅಭಿವೃದ್ಧಿಗೆ ನೀಡಿದ್ದಾರೆ. ಅವರು ದ್ವೇಷದ ರಾಜಕಾರಣ ಮಾಡಿಲ್ಲ. ವೈಯಕ್ತಿಕ ಲಾಭಕ್ಕಾಗಿ ಕೆಲಸ ಮಾಡಿಲ್ಲ ಎಂದು ಗುಣಗಾನ ಮಾಡಿದರು.  ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ ಹಿರಿಯರನ್ನು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿದೆ. 40 ವರ್ಷಗಳ ಬಳಿಕ ಪಾಲಿಕೆಯಿಂದ ಈ ಕಾರ್ಯ ನಡೆದಿದೆ. ಇನ್ನಷ್ಟು ಹಿರಿಯರನ್ನು ಮುಂದಿನ ಬಾರಿ ಸನ್ಮಾನಿಸಿ ಎಂದು ಸಲಹೆ ನೀಡಿದರು.  ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮಾತನಾಡಿ, 40 ವರ್ಷಗಳ ಹಿಂದೆ ಪಾಲಿಕೆಯಿಂದ ರಾಜ್ಯೋತ್ಸವ ಆಚರಿಸಲು ಹಣ ಇರಲಿಲ್ಲ. ಈಗ ತೆರಿಗೆ ಇತ್ಯಾದಿ ಆದಾಯ ಇರುವುದರಿಂದ ಅದ್ದೂರಿಯಾಗಿ ಕಾರ್ಯಕ್ರಮ ನಡೆದಿದೆ. ಜಿಲ್ಲೆಯ ಅಮೃತ ಪುರುಷರನ್ನು ಸ್ಮರಿಸಿ ಗೌರವಿಸಲಾಗಿದೆ. ಈ ಪದ್ಧತಿ ಮುಂದುವರಿಯಲಿ ಎಂದು ಆಶಿಸಿದರು.  ಚಿತ್ರನಟ ಡಾಲಿ ಧನಂಜಯ್, ಸಾಹಿತಿ ರಂಜಾನ್ ದರ್ಗಾ ಮಾತನಾಡಿದರು. ಮಾಜಿ ಸಚಿವ ಎಚ್. ಆಂಜನೇಯ, ಶಾಸಕರಾದ ಶಿವಗಂಗಾ ಬಸವರಾಜ, ಮೇಯರ್ ಚಮನ್ ಸಾಬ್, ಉಪ ಮೇಯರ್ ಸೋಗಿ ಶಾಂತಕುಮಾರ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಪಾಲಿಕೆ ಸದಸ್ಯರು, ಹಿರಿಯ ಪತ್ರಕರ್ತ ಬಿ.ಎನ್. ಮಲ್ಲೇಶ್ ಇತರರು ಇದ್ದರು.

Share This Article

ಗ್ಯಾಸ್​ಗೆ ವಾಸನೆಯೇ ಇಲ್ಲ! ಹೀಗಿದ್ದರೂ​ ಸಿಲಿಂಡರ್​ ಲೀಕ್​ ಆಗ್ತಿದೆ ಅಂತ ತಿಳಿಸೋದು ಈ ಕೆಮಿಕಲ್​ ಮಾತ್ರ​ | Gas Leakage

Gas Leakage: ಇಂದು ಪ್ರತಿಯೊಬ್ಬರ ಮನೆಯಲ್ಲಿಯೂ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ಗಳನ್ನು ಬಳಕೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ…

ಊಟದ ನಂತರ ಸಿಹಿ ತಿನ್ನುವುದು ಒಳ್ಳೆಯದೇ? ವೈದ್ಯರ ಸಲಹೆ..!  sweet

sweet:  ಸಿಹಿ ತಿಂಡಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ... ನಾಲಿಗೆ ಚಪ್ಪರಿಸಿ ಸಿಹಿ ತಿಂಡಿ…

astrology : ಈ ದಿನ ಉಗುರು, ಕೂದಲನ್ನು ಕತ್ತರಿಸಿದ್ರೆ ಕಾದಿದೆ ಸಂಕಷ್ಟ! ಈ ಕೆಲಸಕ್ಕೂ ಇದೆ ಒಳ್ಳೆಯ ದಿನ

astrology: ವಾರದ ಕೆಲವು ದಿನಗಳಲ್ಲಿ ಉಗುರುಗಳನ್ನು ಕತ್ತರಿಸುವುದು ಮತ್ತು ಕೂದಲನ್ನು ಕತ್ತರಿಸುವು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. …