More

    ವಿಜೃಂಭಣೆಯ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ

    ದಾವಣಗೆರೆ : ನಗರದ ಎಂಸಿಸಿ ‘ಬಿ’ ಬ್ಲಾಕ್‌ನ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ವತಿಯಿಂದ ಸ್ವಾಮಿಯ 25ನೇ ವರ್ಷದ ಬ್ರಹ್ಮ ರಥೋತ್ಸವ ಶನಿವಾರ ವಿಜೃಂಭಣೆಯಿಂದ ನೆರವೇರಿತು.
     ಪುಷ್ಪಾಲಂಕೃತ ರಥದಲ್ಲಿ ಸ್ವಾಮಿಯ ಉತ್ಸವ ಮೂರ್ತಿಯನ್ನು ಇಡಲಾಗಿತ್ತು. ದೇಗುಲದಿಂದ ಹೊರಟ ರಥೋತ್ಸವ ರಥ ಬೀದಿಯಲ್ಲಿ ಸಾಗಿತು. ಚಂಡೆಯ ನಾದದ ಜತೆಗೆ ಮಂಗಳವಾದ್ಯಗಳು ಮೊಳಗಿದವು. ಎಲ್ಲೆಲ್ಲೂ ಗೋವಿಂದ ನಾಮಸ್ಮರಣೆ ಕೇಳಿಬಂದಿತು.
     ಮಹಿಳೆಯರು ಸೇರಿ ಭಕ್ತರು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡರು. ಕೆಲವು ಭಕ್ತರು ನೃತ್ಯ ಮಾಡುವ ಮೂಲಕ ಭಗವಂತನಿಗೆ ಸೇವೆ ಸಲ್ಲಿಸಿದರು. ಉತ್ಸವ ಮೂರ್ತಿಗೆ ಹಣ್ಣು, ಕಾಯಿ ಸಮರ್ಪಿಸಿದರು. ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
     ರಥೋತ್ಸವ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವ ಭಕ್ತರ ಸಮ್ಮುಖದಲ್ಲಿ ನಡೆಯಿತು. ಶನಿವಾರ ಬೆಳಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಆರಾಧನೆ, ನೈವೇದ್ಯ, ಹೋಮ, ಬಲಿ ಪ್ರದಾನ, ರಥ ಬಲಿ, ಮಹಾ ಮಂಗಳಾರತಿ ನೆರವೇರಿದವು. ಬೆಳಗ್ಗೆಯಿಂದಲೇ ನೂರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದರು.
     ಆಗಮಿಕರಾದ ನರಸಿಂಹ ಭಟ್ಟರು, ಕೃಷ್ಣಪ್ರಸಾದ್ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಪ್ರಧಾನ ಟ್ರಸ್ಟಿ ರಾಮ ಮೋಹನ್, ಕೆ.ಟಿ. ಗೋಪಾಲಗೌಡ್ರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts