ಶಾಂತಿ, ನೆಮ್ಮದಿ ಬದುಕಿಗೆ ಧರ್ಮವೊಂದೇ ಆಶಾಕಿರಣ

DVG-DARMA-SAMAVESHA-30.jpg
Published on

ದಾವಣಗೆರೆ : ಮನುಷ್ಯನ ಶಾಂತಿ ಮತ್ತು ನೆಮ್ಮದಿಯ ಬದುಕಿಗೆ ಧರ್ಮವೊಂದೇ ಆಶಾಕಿರಣ ಎಂದು ಬಾಳೆ ಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.  ನಗರದ ಅಭಿನವ ರೇಣುಕ ಮಂದಿರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಭ ವನದಲ್ಲಿ ಮಂಗಳವಾರ ಆರಂಭಗೊಂಡ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಮಾವೇಶದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.  ಮನುಷ್ಯನಲ್ಲಿ ಒಳ್ಳೆಯ ಮತ್ತು ಕೆಟ್ಟ ಎರಡೂ ಗುಣಗಳಿವೆ. ಒಳ್ಳೆಯವರ ಒಡನಾಟದಲ್ಲಿ ಬಾಳಿದರೆ ಜೀವನ ವಿಕಾಸಗೊಳ್ಳುತ್ತದೆ. ದುರ್ಜನರ ಸಹವಾಸದಲ್ಲಿ ನಡೆದರೆ ಬದುಕು ಸರ್ವ ನಾಶವಾಗುತ್ತದೆ. ಸುಖದ ಮೂಲ ಧರ್ಮದ ಆಚರಣೆಯಲ್ಲಿದೆ ಎಂದು ತಿಳಿಸಿದರು.  ವೀರಶೈವ ಧರ್ಮ ಸಿದ್ಧಾಂತದಲ್ಲಿ ಜೀವನ ವಿಕಾಸದ ಅಧ್ಯಾತ್ಮ ತತ್ವಗಳನ್ನು ಶ್ರೀ ಜಗದ್ಗುರು ರೇಣುಕಾಚಾರ್ಯರು ಪ್ರತಿಪಾದಿಸಿದ್ದಾರೆ. ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದರೂ ಮೂಲ ಸಂಸ್ಕೃತಿ ಮರೆಯ ಬಾರದು. ಇದನ್ನು ಮರೆತರೆ ಜೀವನದಲ್ಲಿ ಅವನತಿ ನಿಶ್ಚಿತ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net